Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:11 - ಕನ್ನಡ ಸತ್ಯವೇದವು J.V. (BSI)

11 ದೇವರು ನನಗೆ ಕೃಪೆಯನ್ನು ಮಾಡಿದ್ದರಿಂದ ನನಗೆ ಸಮೃದ್ಧಿಯುಂಟು; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು ಎಂದು ಹೇಳಿ ಏಸಾವನನ್ನು ಬಲವಂತಮಾಡಿದ್ದರಿಂದ ಅವನು ಆ ಕಾಣಿಕೆಯನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇವರು ನನಗೆ ಕೃಪೆಯನ್ನು ತೋರಿದ್ದರಿಂದ ನನಗೆ ಸಮೃದ್ಧಿಯುಂಟಾಯಿತು. ಆದಕಾರಣ ನಾನು ಸಮರ್ಪಿಸುವ ಉಡುಗೊರೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು” ಎಂದು ಹೇಳಿ ಏಸಾವನನ್ನು ಬಲವಂತ ಮಾಡಿದ್ದರಿಂದ ಅವನು ಆ ಉಡುಗೊರೆಯನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದೇವರ ಕೃಪೆಯಿಂದ ನನಗೆ ಬೇಕಾದುದೆಲ್ಲ ಇದೆ; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ತಾವು ದಯವಿಟ್ಟು ಅಂಗೀಕರಿಸಬೇಕು,” ಎಂದು ಹೇಳಿ ಒತ್ತಾಯಪಡಿಸಿದ್ದರಿಂದ ಏಸಾವನು ಆ ಕಾಣಿಕೆಯನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ನಾನು ಕೊಡುವ ಈ ಉಡುಗೊರೆಗಳನ್ನು ಸ್ವೀಕರಿಸಿಕೊಳ್ಳಬೇಕೆಂದು ಬೇಡಿಕೊಳ್ಳುತ್ತಿರುವೆ. ದೇವರು ನನಗೆ ತುಂಬ ಒಳ್ಳೆಯವನಾಗಿದ್ದನು. ನನಗೆ ಬೇಕಾದದ್ದಕ್ಕಿಂತಲೂ ಹೆಚ್ಚಾಗಿ ನನ್ನಲ್ಲಿದೆ” ಎಂದು ಹೇಳಿದನು. ಹೀಗೆ ಯಾಕೋಬನು ಉಡುಗೊರೆಗಳನ್ನು ತೆಗೆದುಕೊಳ್ಳುವಂತೆ ಏಸಾವನನ್ನು ಬೇಡಿಕೊಂಡನು. ಆದ್ದರಿಂದ ಏಸಾವನು ಉಡುಗೊರೆಗಳನ್ನು ಸ್ವೀಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಸ್ವೀಕರಿಸಬೇಕೆಂದು ಬೇಡುತ್ತೇನೆ. ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇವೆ,” ಎಂದು ಹೇಳಿ, ಅವನನ್ನು ಬಲವಂತ ಮಾಡಿದ್ದರಿಂದ ಏಸಾವನು ಅದನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:11
21 ತಿಳಿವುಗಳ ಹೋಲಿಕೆ  

ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ನಿನ್ನ ದಾಸಿಯು ತಂದ ಈ ಕಾಣಿಕೆಯು ಸ್ವಾವಿುಯ ಸೇವಕರಿಗೆ ಸಲ್ಲಲಿ.


ನಾಮಾನನು - ಎರಡು ತಲಾಂತನ್ನಾದರೂ ತೆಗೆದುಕೊಳ್ಳಬಾರದೇ ಎಂದು ಅವನನ್ನು ಒತ್ತಾಯಪಡಿಸಿ ಅದನ್ನು ಎರಡು ಚೀಲಗಳಲ್ಲಿ ಹಾಕಿಸಿ ಆ ಚೀಲಗಳನ್ನೂ ಎರಡು ದುಸ್ತುಬಟ್ಟೆಗಳನ್ನೂ ಇಬ್ಬರು ಸೇವಕರ ಮೇಲೆ ಹೊರಿಸಿ ಅವರನ್ನು ಗೇಹಜಿಯ ಸಂಗಡ ಕಳುಹಿಸಿದನು. ಅವರು ಹೊತ್ತುಕೊಂಡು ಇವನ ಮುಂದೆ ನಡೆದರು.


ಏಸಾವನು - ತಮ್ಮನೇ, ನನಗೆ ಬೇಕಾದಷ್ಟು ಆಸ್ತಿಯುಂಟು; ನಿನ್ನದು ನಿನಗೇ ಇರಲಿ ಅನ್ನಲು


ಯಾಕೋಬನು ಬಹಳ ಸಂಪತ್ತುಳ್ಳವನಾದನು; ಅವನಿಗೆ ದೊಡ್ಡ ದೊಡ್ಡ ಹಿಂಡುಗಳೂ ದಾಸದಾಸಿಯರೂ ಒಂಟೆಕತ್ತೆಗಳೂ ಹೇರಳವಾಗಿದ್ದವು.


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು; ಅದಕ್ಕೆ ಇಹಪರಗಳಲ್ಲಿಯೂ ಜೀವವಾಗ್ದಾನ ಉಂಟು.


ದುಃಖಪಡುವವರಾಗಿದ್ದರೂ ಯಾವಾಗಲೂ ಸಂತೋಷಪಡುವವರೂ, ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯವನ್ನುಂಟುಮಾಡುವವರೂ, ಏನೂ ಇಲ್ಲದವರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.


ಆದಕಾರಣ ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;


ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದು - ನೀನು ಹಾದಿಗಳಿಗೂ ಬೇಲಿಗಳ ಬಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರಕೊಂಡು ಬಾ, ನನ್ನ ಮನೆ ತುಂಬಲಿ.


ಆದರೆ ಅವರು ಅವನನ್ನು ಒತ್ತಾಯಪಡಿಸಿದ್ದರಿಂದ ಅವನು ಬೇಸರಗೊಂಡು ಕಳುಹಿಸುವದಕ್ಕೆ ಅಪ್ಪಣೆಕೊಟ್ಟನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಎಲೀಯನನ್ನು ಕಾಣದೆ


ದಾವೀದನು ಚಿಕ್ಲಗಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿ - ಇಗೋ, ಯೆಹೋವನ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ ಎಂದು ಹೇಳಿಸಿದನು.


ಆಕೆಯು - ನನಗೊಂದು ದಾನಕೊಡಬೇಕು; ನನ್ನನ್ನು ಬೆಗ್ಗಾಡಿಗೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು ಅಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು.


ನನಗೊಂದು ದಾನ ಕೊಡಬೇಕು; ನನ್ನನ್ನು ಬೆಗ್ಗಾಡಿಗೆ ಕೊಟ್ಟುಬಿಟ್ಟಿಯಲ್ಲಾ; ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು ಅಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು.


ಯಾಕೋಬನು - ಹಾಗೆ ಅಪ್ಪಣೆಕೊಡಕೂಡದು; ನೀನು ನನ್ನ ಮೇಲೆ ಕಟಾಕ್ಷವಿಟ್ಟು ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು. ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ.


ತರುವಾಯ ಏಸಾವನು - ನಾವು ಮುಂದಕ್ಕೆ ಪ್ರಯಾಣವನ್ನು ಬೆಳೆಸೋಣ; ನಾನು ಮುಂದಾಗಿ ಹೋಗುತ್ತೇನೆ ಅಂದನು.


ಆದಕಾರಣ ಅವನು ಆ ಕಾಣಿಕೆಯನ್ನು ತನಗೆ ಮುಂಚಿತವಾಗಿ ಹೊಳೆಯಿಂದಾಚೆಗೆ ದಾಟಿಸಿ ತಾನು ಆ ರಾತ್ರಿ ತನ್ನ ಪಾಳೆಯದೊಳಗೆ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು