Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:18 - ಕನ್ನಡ ಸತ್ಯವೇದವು J.V. (BSI)

18 ಯಾಕೋಬನು ಪದ್ದನ್ಅರಾವಿುನಿಂದ ಬಂದ ಮೇಲೆ ಕಾನಾನ್‍ದೇಶದ ಶೆಕೆಮ್ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಿದನು. ಆ ಊರಿನ ಮುಂದೆ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸುರಕ್ಷಿತವಾಗಿ ಸೇರಿದನು. ಆ ಊರಿನ ಬಳಿಯಲ್ಲಿ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯಕೋಬನು ಮೆಸಪೊಟೇಮಿಯಾದಿಂದ ಹಿಂದಿರುಗಿ ಬಂದು ಕಾನಾನ್ ನಾಡಿನ ಶೆಕೆಮ್ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಿದನು. ಆ ಪಟ್ಟಣದ ಮುಂದೆಯೇ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಮೇಲೆ ಯಾಕೋಬನು ಕಾನಾನ್ ದೇಶದ ಶೆಕೆಮ್ ಪಟ್ಟಣಕ್ಕೆ ಬಂದು ತನ್ನ ಪಾಳೆಯನ್ನು ಪಟ್ಟಣದ ಸಮೀಪದಲ್ಲಿದ್ದ ಒಂದು ಹೊಲದಲ್ಲಿ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸೇರಿ, ಅದರ ಮುಂದೆ ತನ್ನ ಗುಡಾರಗಳನ್ನು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:18
16 ತಿಳಿವುಗಳ ಹೋಲಿಕೆ  

ಅವರನ್ನು ಶೇಕೆವಿುಗೆ ತೆಗೆದುಕೊಂಡು ಹೋಗಿ ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಬೆಳ್ಳಿಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.


ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆವಿುಗೆ ಹೋಗಿ ತನ್ನ ಸೋದರ ಮಾವಂದಿರಿಗೂ ತಾಯಿಯ ಬಂಧುಗಳೆಲ್ಲರಿಗೂ ಹೇಳಿದ್ದೇನಂದರೆ -


ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆವಿುನಲ್ಲಿ ಕೂಟಕ್ಕೆ ಕರಿಸಲು ಅವರ ಹಿರಿಯರೂ ಪ್ರಧಾನರೂ ನ್ಯಾಯಾಧಿಪತಿಗಳೂ ಅಧಿಕಾರಿಗಳೂ ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.


ಹೋಗುವಾಗ ಸಮಾರ್ಯಸೀಮೆಗೆ ಸೇರಿದ ಸುಖರೆಂಬ ಊರಿಗೆ ಬಂದನು. ಅದು ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂವಿುಯ ಹತ್ತಿರದಲ್ಲಿತ್ತು;


ಇಸಾಕನು ನಾಲ್ವತ್ತು ವರುಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳಾಗಿಯೂ ಅರಾಮ್ಯನಾದ ಲಾಬಾನನ ತಂಗಿಯಾಗಿಯೂ ಇದ್ದ ರೆಬೆಕ್ಕಳನ್ನು ಪದ್ದನ್ ಅರಾವಿುನಿಂದ ತರಿಸಿ ಹೆಂಡತಿಯಾಗಿ ಮಾಡಿಕೊಂಡನು.


ಯೋಹಾನನೂ ಸಲೀಮೂರಿನ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನಮಾಡಿಸುತ್ತಿದ್ದನು; ಅಲ್ಲಿ ಬಹಳ ನೀರಿತ್ತು; ಜನರು ಬಂದು ಸ್ನಾನಮಾಡಿಸಿಕೊಳ್ಳುತ್ತಾ ಇದ್ದರು;


ಆಕೆಯು ಯಾಕೋಬನಿಗೆ ಇವರನ್ನೂ ದೀನಳೆಂಬ ಹೆಣ್ಣುಮಗಳನ್ನೂ ಪದ್ದನ್ಅರಾವಿುನಲ್ಲಿ ಪಡೆದಳು. ಆಕೆಯಿಂದಾದ ಗಂಡು ಹೆಣ್ಣು ಮಕ್ಕಳು ಮೂವತ್ತು ಮೂರು ಮಂದಿ.


ಯಾಕೋಬನು ಪದ್ದನ್ಅರಾವಿುನಿಂದ ಬಂದಾಗ ದೇವರು ತಿರಿಗಿ ಅವನಿಗೆ ದರ್ಶನ ಕೊಟ್ಟು ಅವನನ್ನು ಆಶೀರ್ವದಿಸಿದನು.


ಪದ್ದನ್ಅರಾಮ್ ದೇಶದಲ್ಲಿರುವ ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೊರಟುಹೋಗಿ ಅಲ್ಲಿ ನಿನ್ನ ಸೋದರ ಮಾವನಾದ ಲಾಬಾನನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೋ ಎಂದು ಅಪ್ಪಣೆಕೊಟ್ಟು -


ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಕ್ಷೇತ್ರದಲ್ಲಿರುವ ಮೋರೆಯೆಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು.


ಯೋಸೇಫನಿಗೆ - ನಿನ್ನ ಅಣ್ಣಂದಿರು ಶೆಕೆವಿುನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ; ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ ಬಾ ಎಂದು ಹೇಳಲು ಅವನು - ಇಗೋ ಇದ್ದೇನೆ ಅಂದನು.


ನಾನು ಪದ್ದನ್ಅರಾವಿುನಿಂದ ಬರುತ್ತಿರಲು ಕಾನಾನ್‍ದೇಶದಲ್ಲಿ ಎಫ್ರಾತನ್ನು ಸೇರುವದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ದಾರಿಯಲ್ಲೇ ಸತ್ತು ನನ್ನನ್ನು ಅಗಲಿಹೋದಳು. ಬೇತ್ಲೆಹೇಮೆಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಆಕೆಗೆ ಸಮಾಧಿ ಮಾಡಿದೆನು ಎಂದು ಹೇಳಿದನು.


ದೇವರು ತನ್ನ ಪವಿತ್ರತ್ವವನ್ನು ಸಾಕ್ಷಿಮಾಡಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬೈಲನ್ನು ಅಳೆದುಕೊಡುವೆನು.


ಗಡ್ಡ ಬೋಳಿಸಿ ಬಟ್ಟೆಹರಿದು ಗಾಯಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಒಂದು ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.


ಲಾಬಾನನು ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಸಿದನು. ಲಾಬಾನನೂ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರವನ್ನು ಹಾಕಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು