Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:19 - ಕನ್ನಡ ಸತ್ಯವೇದವು J.V. (BSI)

19 ಅವನು ತನ್ನ ಗುಡಾರಗಳನ್ನು ಹಾಕಿಸಿದ ಭೂವಿುಯನ್ನು ಹಮೋರನ ಮಕ್ಕಳಿಗೆ ನೂರು ವರಹಾ ಕೊಟ್ಟು ಅವರಿಂದ ಕೊಂಡುಕೊಂಡನು. ಹಮೋರನು ಶೆಕೆಮನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ತನ್ನ ಗುಡಾರಗಳನ್ನು ಹಾಕಿಸಿದ ಭೂಮಿಯನ್ನು ಹಮೋರನ ಮಕ್ಕಳಿಗೆ ನೂರು ನಾಣ್ಯ ಕೊಟ್ಟು ಅವರಿಂದ ಕೊಂಡುಕೊಂಡನು. ಹಮೋರನು ಶೆಕೆಮನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಗುಡಾರ ಹಾಕಿಸಿದ ಭೂಮಿಯನ್ನು, ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಗೆ ನೂರು ವರಹಗಳನ್ನು ಕೊಟ್ಟು ಅವರಿಂದ ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯಾಕೋಬನು ನೂರು ಬೆಳ್ಳಿನಾಣ್ಯಗಳನ್ನು ಕೊಟ್ಟು ಶೆಕೆಮನ ತಂದೆಯಾದ ಹಮೋರನ ಕುಟುಂಬದಿಂದ ಆ ಹೊಲವನ್ನು ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನು ತನ್ನ ಗುಡಾರಗಳನ್ನು ಹಾಕಿದ ಭೂಮಿಯನ್ನು ಶೆಕೆಮಿನ ತಂದೆ ಹಮೋರನ ಮಕ್ಕಳ ಕೈಯಿಂದ ನೂರು ನಾಣ್ಯಗಳಿಗೆ ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:19
10 ತಿಳಿವುಗಳ ಹೋಲಿಕೆ  

ಅವರನ್ನು ಶೇಕೆವಿುಗೆ ತೆಗೆದುಕೊಂಡು ಹೋಗಿ ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಬೆಳ್ಳಿಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.


ಹೋಗುವಾಗ ಸಮಾರ್ಯಸೀಮೆಗೆ ಸೇರಿದ ಸುಖರೆಂಬ ಊರಿಗೆ ಬಂದನು. ಅದು ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂವಿುಯ ಹತ್ತಿರದಲ್ಲಿತ್ತು;


ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವಾಸ್ತ್ಯವಾಯಿತು.


ಅಲ್ಲಿ ಯಾಕೋಬನು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.


ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವದನ್ನು ಕೇಳು; ಆ ಭೂವಿುಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿಮಾಡುವೆನು ಎಂದು ಹೇಳಿದನು.


ನಾನೂರು ರೂಪಾಯಿ ಬಾಳುವ ಭೂವಿುಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು ಅಂದನು.


ಎಬೆದನ ಮಗನಾದ ಗಾಳನೂ ಅವರ ಸಂಗಡ ಕೂಡಿಕೊಂಡು - ಅಬೀಮೆಲೆಕನು ಎಷ್ಟರವನು? ಶೆಕೆವಿುನವರಾದ ನಾವು ಎಷ್ಟರವರು? ನಾವು ಅಬೀಮೆಲೆಕನನ್ನು ಯಾಕೆ ಸೇವಿಸಬೇಕು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪುರಾಧಿಕಾರಿಯು ಜೆಬುಲನಲ್ಲವೋ? ನಾವು ಅವನನ್ನು ಯಾಕೆ ಸೇವಿಸಬೇಕು? ಶೆಕೆಮನ ತಂದೆಯಾದ ಹಮೋರನ ವಂಶದವರನ್ನೇ ಸೇವಿಸುವಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು