Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:2 - ಕನ್ನಡ ಸತ್ಯವೇದವು J.V. (BSI)

2 ಅವರ ಮಕ್ಕಳನ್ನೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಟ್ಟಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮುಂದುಗಡೆಯಲ್ಲಿ ದಾಸಿಯರನ್ನೂ ಅವರ ಮಕ್ಕಳನ್ನೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರನ್ನು ಬೇರೆ ಬೇರೆ ಮಾಡಿ ಮುಂದುಗಡೆಯಲ್ಲಿ ದಾಸಿಯರನ್ನೂ ಅವರ ಮಕ್ಕಳನ್ನೂ, ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ, ಕಡೆಯಲ್ಲಿ ರಾಖೇಲಳನ್ನೂ ಜೋಸೆಫನನ್ನೂ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯಾಕೋಬನು ದಾಸಿಯರನ್ನು ಮತ್ತು ಅವರ ಮಕ್ಕಳನ್ನು ಮುಂಭಾಗದಲ್ಲಿಯೂ ಲೇಯಳನ್ನು ಮತ್ತು ಅವಳ ಮಕ್ಕಳನ್ನು ಅವರ ಹಿಂಭಾಗದಲ್ಲಿಯೂ, ರಾಹೇಲಳನ್ನು ಮತ್ತು ಯೋಸೇಫನನ್ನು ಕೊನೆಯ ಸ್ಥಳದಲ್ಲೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದಾಸಿಯರನ್ನೂ, ಅವರ ಮಕ್ಕಳನ್ನೂ ಮುಂದುಗಡೆಯಲ್ಲಿಯೂ; ಅವರ ಹಿಂದೆ ಲೇಯಳನ್ನೂ, ಆಕೆಯ ಮಕ್ಕಳನ್ನೂ; ಕಟ್ಟಕಡೆಯಲ್ಲಿ ರಾಹೇಲಳನ್ನೂ, ಯೋಸೇಫನನ್ನೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:2
8 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು.


ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದವನಾದ್ದರಿಂದ ಇಸ್ರಾಯೇಲನು ಅವನನ್ನು ತನ್ನ ಎಲ್ಲಾ ಮಕ್ಕಳಿಗಿಂತ ಹೆಚ್ಚಾಗಿ ಪ್ರೀತಿಸಿ ಅವನಿಗೆ ನಿಲುವಂಗಿಯನ್ನು ಮಾಡಿಸಿಕೊಟ್ಟಿದ್ದನು.


ಯಾಕೋಬನು ರಾಹೇಲಳನ್ನೂ ಕೂಡಿ ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿಯಲ್ಲಿ ಇನ್ನೂ ಏಳುವರುಷ ಸೇವೆ ಮಾಡಿದನು.


ಯಾಕೋಬನು ಕಣ್ಣೆತ್ತಿ ನೋಡಿದಾಗ ಏಸಾವನು ನಾನೂರು ಮಂದಿ ಮನುಷ್ಯರ ಸಮೇತ ಬರುವದನ್ನು ಕಂಡನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿ ಮುಂದುಗಡೆಯಲ್ಲಿ ದಾಸಿಯರನ್ನೂ


ತಾನೇ ಅವರ ಮುಂದಾಗಿ ಹೋಗಿ ತನ್ನ ಅಣ್ಣನಿಗೆ ಸಮೀಪಿಸುತ್ತಿರುವಾಗ ಏಳು ಸಾರಿ ನೆಲದ ತನಕ ಬೊಗ್ಗಿ ನಮಸ್ಕರಿಸಿದನು.


ನಿಮ್ಮ ಮಾತೃಭೂವಿುಯು ಮಾನಭಂಗಕ್ಕೆ ಈಡಾಗುವದು, ನಿಮ್ಮನ್ನು ಹೆತ್ತ ರಾಜ್ಯವು ನಾಚಿಕೊಳ್ಳುವದು; ಆಹಾ, ಅದು ಕಾಡು, ಕಗ್ಗಾಡು, ಬೆಗ್ಗಾಡು, ಜನಾಂಗಗಳಲ್ಲಿ ಕನಿಷ್ಠವೂ ಆಗುವದು.


ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು; ದೊಡ್ಡವಳ ಹೆಸರು ಲೇಯಾ, ಚಿಕ್ಕವಳ ಹೆಸರು ರಾಹೇಲ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು