Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:1 - ಕನ್ನಡ ಸತ್ಯವೇದವು J.V. (BSI)

1 ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದ ದೀನಳು ಒಂದಾನೊಂದು ದಿವಸ ಆ ದೇಶದ ಸ್ತ್ರೀಯರನ್ನು ನೋಡುವದಕ್ಕೆ ಹೊರಗೆ ಬಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದ ಮಗಳಾದ ದೀನಳು ಒಂದು ದಿನ ಆ ದೇಶದ ಸ್ತ್ರೀಯರನ್ನು ನೋಡುವುದಕ್ಕೆ ಹೊರಗೆ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯಕೋಬನಿಗೆ ಲೇಯಳಲ್ಲಿ ಹುಟ್ಟಿದ ದೀನಳು ಒಂದು ದಿನ ಆ ನಾಡಿನ ಮಹಿಳೆಯರನ್ನು ನೋಡಲು ಹೊರಗೆ ಹೋಗಿ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೀನಳು ಲೇಯಾ ಮತ್ತು ಯಾಕೋಬನ ಮಗಳು. ದೀನಳು ಒಂದು ದಿನ ಆ ದೇಶದ ಸ್ತ್ರೀಯರನ್ನು ನೋಡಲು ಹೊರಗೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಲೇಯಳು ಯಾಕೋಬನಿಗೆ ಹೆತ್ತ ಮಗಳಾದ ದೀನಳು ದೇಶದ ಸ್ತ್ರೀಯರನ್ನು ನೋಡುವುದಕ್ಕಾಗಿ ಹೊರಗೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:1
10 ತಿಳಿವುಗಳ ಹೋಲಿಕೆ  

ತರುವಾಯ ಆಕೆಯು ಹೆಣ್ಣುಮಗುವನ್ನು ಹೆತ್ತು ಅದಕ್ಕೆ ದೀನಾ ಎಂದು ಹೆಸರಿಟ್ಟಳು.


ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಅತ್ತಿತ್ತ ಹೋಗುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.


ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದಲ್ಲದೆ ಹರಟೆಮಾತಾಡುವವರೂ ಇತರರ ಕೆಲಸದಲ್ಲಿ ಕೈಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ.


ಆಕೆಯು ಯಾಕೋಬನಿಗೆ ಇವರನ್ನೂ ದೀನಳೆಂಬ ಹೆಣ್ಣುಮಗಳನ್ನೂ ಪದ್ದನ್ಅರಾವಿುನಲ್ಲಿ ಪಡೆದಳು. ಆಕೆಯಿಂದಾದ ಗಂಡು ಹೆಣ್ಣು ಮಕ್ಕಳು ಮೂವತ್ತು ಮೂರು ಮಂದಿ.


ಲೇಯಳು - ನಾನು ಧನ್ಯಳಾದೆ; ಸ್ತ್ರೀಯರು ನನ್ನನ್ನು ಧನ್ಯಳೆಂದು ಹೊಗಳುವರು ಎಂದು ಹೇಳಿ ಅದಕ್ಕೆ ಆಶೇರೆಂದು ಹೆಸರಿಟ್ಟಳು.


ಇಸಾಕನು ಯಾಕೋಬನನ್ನು ಆಶೀರ್ವದಿಸಿ ಪದ್ದನ್ಅರಾವಿುನಲ್ಲಿ ಹೆಣ್ಣನ್ನು ತೆಗೆದುಕೊಳ್ಳುವದಕ್ಕೆ ಕಳುಹಿಸಿದ್ದನ್ನೂ ಅವನು ಯಾಕೋಬನನ್ನು ಆಶೀರ್ವದಿಸುವಾಗ ಅವನಿಗೆ - ನೀನು ಕಾನಾನ್ಯರ ಹೆಣ್ಣನ್ನು ತೆಗೆದುಕೊಳ್ಳಬೇಡವೆಂದು ಅಪ್ಪಣೆಕೊಟ್ಟದ್ದನ್ನೂ


ರೆಬೆಕ್ಕಳು ಇಸಾಕನಿಗೆ - ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಯಿತು. ಯಾಕೋಬನೂ ಈ ದೇಶದವರಲ್ಲಿ ಹೆಣ್ಣನ್ನು ಆದುಕೊಂಡು ಇಂಥಾ ಹಿತ್ತಿಯ ಸ್ತ್ರೀಯನ್ನು ಮದುವೆಮಾಡಿಕೊಂಡರೆ ನಾನು ಇನ್ನೂ ಬದುಕುವದರಿಂದ ಪ್ರಯೋಜನವೇನು ಎಂದು ಹೇಳಿದಳು.


ಏಸಾವನು ನಾಲ್ವತ್ತು ವರುಷದವನಾದಾಗ ಹಿತ್ತಿಯನಾದ ಬೇರಿಯ ಮಗಳಾದ ಯೆಹೂದೀತಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆಮಾಡಿಕೊಂಡನು.


ಮನೆಯಲ್ಲೇ ಕೆಲಸಮಾಡುವವರೂ ಸುಶೀಲೆಯರೂ ನಿಮ್ಮ ಗಂಡಂದಿರಿಗೆ ಅಧೀನರೂ ಆಗಿರಬೇಕೆಂದು ಬುದ್ಧಿ ಕಲಿಸುವ ಹಾಗೆ ಬೋಧಿಸು.


ಅಲ್ಲಿ ಯಾಕೋಬನು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು