Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:12 - ಕನ್ನಡ ಸತ್ಯವೇದವು J.V. (BSI)

12 ಹೆಣ್ಣಿಗಾಗಿ ತೆರವನ್ನೂ ಕಾಣಿಕೆಯನ್ನೂ ನೀವು ಹೇಳುವ ಮೇರೆಗೆ ಎಷ್ಟಾದರೂ ಕೊಡುತ್ತೇನೆ. ಹೇಗೂ ಆ ಹುಡುಗಿಯನ್ನು ನನಗೆ ಮದುವೆ ಮಾಡಿಕೊಡಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವು ಹೇಳುವ ಮೇರೆಗೆ ಎಷ್ಟಾದರೂ ತೆರವನ್ನೂ ಕಾಣಿಕೆಯನ್ನೂ ಹೆಣ್ಣಿಗಾಗಿ ಕೊಡುತ್ತೇನೆ. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೆಣ್ಣಿಗಾಗಿ ತೆರವನ್ನೂ ಕಾಣಿಕೆಯನ್ನೂ ನೀವು ಹೇಳುವ ಮೇರೆಗೆ ಎಷ್ಟಾದರೂ ಕೊಡುತ್ತೇನೆ. ಹೇಗೂ ಆ ಹುಡುಗಿಯನ್ನು ನನಗೆ ಮದುವೆ ಮಾಡಿಕೊಡಿ,” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ದೀನಳನ್ನು ಮದುವೆಯಾಗಲು ನೀವು ನನಗೆ ಅವಕಾಶಕೊಟ್ಟರೆ ಸಾಕು. ನಾನು ನಿಮಗೆ ಯಾವ ಉಡುಗೊರೆಯನ್ನು ಬೇಕಾದರೂ ಕೊಡುವೆನು. ನೀವು ಏನು ಕೇಳಿದರೂ ಕೊಡುವೆನು. ಆದರೆ ನನಗೆ ದೀನಳನ್ನು ಮದುವೆ ಮಾಡಿಸಿಕೊಡಿ” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:12
13 ತಿಳಿವುಗಳ ಹೋಲಿಕೆ  

ಅದಕ್ಕವರು - ನಮಗೆ ಇಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಮತ್ತೇನೂ ಇಲ್ಲ ಅನ್ನಲಾಗಿ


ಮತ್ತು ಅವನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನಾನು ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದು ಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು ಎಂಬದಾಗಿ ಆಜ್ಞಾಪಿಸಿದನು.


ಇಪ್ಪತ್ತು ವರುಷ ನಿನ್ನ ಮನೆಯಲ್ಲಿದ್ದೆನು; ನಿನ್ನಿಬ್ಬರ ಹೆಣ್ಣುಮಕ್ಕಳಿಗಾಗಿ ಹದಿನಾಲ್ಕು ವರುಷವೂ ನಿನ್ನ ಆಡುಕುರಿಗಳಿಗಾಗಿ ಆರು ವರುಷವೂ ಸೇವೆ ಮಾಡಿದೆನು. ನೀನು ಹತ್ತು ಸಾರಿ ನನ್ನ ಸಂಬಳವನ್ನು ಬದಲಾಯಿಸಿದಿ.


ಯಾಕೋಬನು ರಾಹೇಲಳನ್ನು ಮೆಚ್ಚಿಕೊಂಡು - ನಿನ್ನ ಕಿರೀ ಮಗಳಾದ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುವೆನು ಎಂದು ಹೇಳಲು


ಆಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ಉಡುಗೊರೆಗಳನ್ನು ಕೊಟ್ಟನು.


ನಾನು ಹದಿನೈದು ರೂಪಾಯಿಯನ್ನೂ ಒಂದುವರೆ ಹೋಮೆರ್ ಜವೆಗೋದಿಯನ್ನೂ ಕೊಟ್ಟು ಅವಳನ್ನು ಕೊಂಡುಕೊಂಡು ಅವಳಿಗೆ -


ಶೆಕೆಮನು ಆ ಹುಡುಗಿಯ ತಂದೆಗೂ ಅಣ್ಣಂದಿರಿಗೂ - ನಿಮ್ಮ ದಯೆ ನನ್ನ ಮೇಲೆ ಇರಲಿ; ನೀವು ಹೇಳುವಷ್ಟು ಕೊಡುತ್ತೇನೆ;


ಶೆಕೆಮನು ತಮ್ಮ ತಂಗಿಯಾದ ದೀನಳನ್ನು ಕೆಡಿಸಿದ್ದರಿಂದ ಯಾಕೋಬನ ಮಕ್ಕಳು ಅವನಿಗೂ ಅವನ ತಂದೆಯಾದ ಹಮೋರನಿಗೂ ಕಪಟದಿಂದ ಉತ್ತರಕೊಟ್ಟು -


ಆ ಸೇವಕರು ದಾವೀದನಿಗೆ ಹಾಗೆಯೇ ಹೇಳಿದಾಗ ಅವನು - ಅರಸನ ಅಳಿಯನಾಗುವದು ಸಾಧಾರಣವಾದ ಸಂಗತಿಯೆಂದು ನೆನಸುತ್ತೀರೋ? ನಾನು ದರಿದ್ರನೂ ಅಲ್ಪನೂ ಆಗಿರುತ್ತೇನಲ್ಲಾ ಎಂದು ಉತ್ತರಕೊಟ್ಟನು.


ಒಡೆಯನು ಅದರ ಹತ್ತಿರದಲ್ಲೇ ಇದ್ದರೆ ಅವನಿಗೆ ಈಡುಕೊಡಬೇಕಾದ ಅಗತ್ಯವಿಲ್ಲ. ಅದನ್ನು ಬಾಡಿಗೆಗೆ ತೆಗೆದುಕೊಂಡ ಪಕ್ಷಕ್ಕೆ ಅದಕ್ಕೆ ಉಂಟಾದ ನಷ್ಟವು ಬಾಡಿಗೆಯ ಲೆಕ್ಕಕ್ಕೆ ಎಣೆಕೆಯಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು