ಆದಿಕಾಂಡ 34:13 - ಕನ್ನಡ ಸತ್ಯವೇದವು J.V. (BSI)13 ಶೆಕೆಮನು ತಮ್ಮ ತಂಗಿಯಾದ ದೀನಳನ್ನು ಕೆಡಿಸಿದ್ದರಿಂದ ಯಾಕೋಬನ ಮಕ್ಕಳು ಅವನಿಗೂ ಅವನ ತಂದೆಯಾದ ಹಮೋರನಿಗೂ ಕಪಟದಿಂದ ಉತ್ತರಕೊಟ್ಟು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಶೆಕೆಮನು ತಮ್ಮ ತಂಗಿಯಾದ ದೀನಳನ್ನು ಮಾನಭಂಗ ಮಾಡಿದ್ದರಿಂದ ಯಾಕೋಬನ ಮಕ್ಕಳು ಅವನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಶೆಕೆಮನು ತಮ್ಮ ತಂಗಿ ದೀನಳನ್ನು ಕೆಡಿಸಿದ್ದರಿಂದ ಯಕೋಬನ ಮಕ್ಕಳು ಅವನಿಗೂ ಅವನ ತಂದೆ ಹಮೋರನಿಗೂ ಕಪಟದಿಂದ ಈ ಉತ್ತರಕೊಟ್ಟರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯಾಕೋಬನ ಗಂಡುಮಕ್ಕಳು ಶೆಕೆಮನಿಗೂ ಅವನ ತಂದೆಗೂ ಸುಳ್ಳು ಹೇಳಲು ನಿರ್ಧರಿಸಿದರು. ತಮ್ಮ ತಂಗಿಯಾದ ದೀನಳಿಗೆ ಶೆಕೆಮನು ಅಂಥ ಕೆಟ್ಟಕಾರ್ಯವನ್ನು ಮಾಡಿದ್ದರಿಂದ ಅವರು ಇನ್ನೂ ಆವೇಶದಿಂದ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಯಾಕೋಬನ ಮಕ್ಕಳು ಶೆಕೆಮನಿಗೂ, ಅವನ ತಂದೆ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಏಕೆಂದರೆ ಅವನು ತಮ್ಮ ತಂಗಿ ದೀನಳನ್ನು ಕೆಡಿಸಿದ್ದನು. ಅಧ್ಯಾಯವನ್ನು ನೋಡಿ |