ಆದಿಕಾಂಡ 34:19 - ಕನ್ನಡ ಸತ್ಯವೇದವು J.V. (BSI)19 ಆ ಯೌವನಸ್ಥನು ಯಾಕೋಬನ ಮಗಳಲ್ಲಿ ಅನುರಕ್ತನಾಗಿದ್ದದರಿಂದ ಅವರು ಹೇಳಿದಂತೆ ಮಾಡುವದಕ್ಕೆ ತಡೆಮಾಡಲಿಲ್ಲ. ಅವನೇ ತನ್ನ ತಂದೆಯ ಮನೆಯವರೆಲ್ಲರಲ್ಲಿ ಘನವಂತನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿಕೊಂಡಿದ್ದರಿಂದ ಅವರು ಹೇಳಿದಂತೆ ಮಾಡುವುದಕ್ಕೆ ತಡಮಾಡಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆ ಯುವಕನು ಯಕೋಬನ ಮಗಳಲ್ಲಿ ಅನುರಕ್ತನಾಗಿದ್ದುದರಿಂದ ಅವರು ಹೇಳಿದಂತೆ ಮಾಡಲು ಹಿಂಜರಿಯಲಿಲ್ಲ; ಅಪ್ಪನ ಮನೆಗೆ ಅವನೇ ಮುಖ್ಯಸ್ಥನಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ದೀನಳ ಅಣ್ಣಂದಿರು ಹೇಳಿದ್ದನ್ನು ಮಾಡಲು ಶೆಕೆಮನು ಸಂತೋಷದಿಂದ ಒಪ್ಪಿಕೊಂಡನು. ಶೆಕೆಮನಿಗೆ ಅವರ ಕುಟುಂಬದಲ್ಲಿ ತುಂಬ ಗೌರವವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ, ಆ ಕಾರ್ಯವನ್ನು ಮಾಡುವುದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು. ಅಧ್ಯಾಯವನ್ನು ನೋಡಿ |