Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:20 - ಕನ್ನಡ ಸತ್ಯವೇದವು J.V. (BSI)

20 ಹಮೋರನೂ ಅವನ ಮಗನಾದ ಶೆಕೆಮನೂ ಊರುಬಾಗಿಲಿಗೆ ಹೋಗಿ ಊರಿನವರೆಲ್ಲರ ಸಂಗಡ ಮಾತಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಹಮೋರನೂ ಅವನ ಮಗನಾದ ಶೆಕೆಮನೂ ಊರ ಬಾಗಿಲಿಗೆ ಬಂದು ಊರಿನವರೆಲ್ಲರ ಸಂಗಡ ಮಾತನಾಡಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಎಂತಲೆ ಹಮೋರನು ಮತ್ತು ಅವನ ಮಗ ಶೆಕೆಮನು ಊರಬಾಗಿಲಿಗೆ ಬಂದರು. ಊರಿನವರನ್ನೆಲ್ಲಾ ಸಂಬೋಧಿಸುತ್ತಾ, ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹಮೋರನು ಮತ್ತು ಶೆಕೆಮನು ತಮ್ಮ ನಗರದ ಸಭಾಸ್ಥಳಕ್ಕೆ ಹೋದರು. ಅವರು ಪಟ್ಟಣದ ಗಂಡಸರೊಂದಿಗೆ ಮಾತಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಹಮೋರನೂ, ಅವನ ಮಗ ಶೆಕೆಮನೂ ತಮ್ಮ ಪಟ್ಟಣ ದ್ವಾರದ ಬಳಿಗೆ ಬಂದು, ತಮ್ಮ ಪಟ್ಟಣದ ಜನರ ಸಂಗಡ ಮಾತನಾಡಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:20
14 ತಿಳಿವುಗಳ ಹೋಲಿಕೆ  

ಬೋವಜನು ಹೋಗಿ ಊರುಬಾಗಲಲ್ಲಿ ಕೂತನು. ತಾನು ಹೇಳಿದ್ದ ಸಮೀಪಬಂಧುವು ಆ ಮಾರ್ಗವಾಗಿ ಹೋಗುತ್ತಿರುವದನ್ನು ಕಂಡು ಅವನನ್ನು - ಎಲಾ, ಅಪ್ಪಾ, ಇತ್ತ ಬಂದು ಕೂತುಕೋ ಎಂದು ಕರೆಯಲು ಅವನು ಬಂದು ಕೂತುಕೊಂಡನು.


ನೀವು ಮಾಡಬೇಕಾದ ಕಾರ್ಯಗಳು ಇವೇ - ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ ಸಮಾಧಾನಪ್ರದನ್ಯಾಯವನ್ನೂ ಸ್ಥಾಪಿಸಿರಿ;


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೇದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೇನಾಧೀಶ್ವರದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದಾನು.


ಶಿಷ್ಟಹಿಂಸಕರೇ, ಲಂಚಕೋರರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ, ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ಪ್ರಬಲ, ನನಗೆ ಗೊತ್ತಿದೆ.


ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥವಾದಿಯನ್ನು ದ್ವೇಷಿಸುತ್ತೀರಿ.


ಆಕೆಯ ಪತಿಯು ನ್ಯಾಯಸ್ಥಾನದಲ್ಲಿ ದೇಶದ ಹಿರಿಯರ ಮಧ್ಯೆ ಕೂತಿರುವಾಗ ಪ್ರಸಿದ್ಧನಾಗಿ ಕಾಣುವನು.


ಊರ ಮುಂದಿನ ಚಾವಡಿಗೆ ಹೋದಾಗಲೂ ಚೌಕದಲ್ಲಿ ಆಸನವನ್ನು ಹಾಕಿಸಿಕೊಂಡಾಗಲೂ


ಅವನು ಹೊತ್ತಾರೆಯಲ್ಲೆದ್ದು ಊರುಬಾಗಲ ಬಳಿಯಲ್ಲಿ ನಿಂತುಕೊಳ್ಳುವನು. ಯಾವನಾದರೂ ತನ್ನ ವ್ಯಾಜ್ಯತೀರಿಸಿಕೊಳ್ಳುವದಕ್ಕಾಗಿ ಅರಸನ ಬಳಿಗೆ ಹೋಗುವದನ್ನು ಅಬ್ಷಾಲೋಮನು ಕಂಡರೆ ಅಂಥವನನ್ನು ತನ್ನ ಬಳಿಗೆ ಕರೆದು ನೀನು ಯಾವ ಊರಿನವನು ಎಂದು ಕೇಳುವನು. ಅವನು - ನಿನ್ನ ಸೇವಕನಾದ ನಾನು ಇಸ್ರಾಯೇಲ್ಯರ ಇಂಥ ಕುಲಕ್ಕೆ ಸೇರಿದವನು ಎಂದು ಉತ್ತರ ಕೊಡುವನು.


ಆ ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲುಗಳಿಂದ ಕೊಲ್ಲಬೇಕು.


ಇಷ್ಟರಲ್ಲಿ ಎಫ್ರೋನನೇ ಅಲ್ಲಿ ಹಿತ್ತಿಯರ ನಡುವೆ ಕೂತಿದ್ದನು. ಹೀಗಿರಲಾಗಿ ಹಿತ್ತಿಯನಾದ ಎಫ್ರೋನನು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಎದುರಿನಲ್ಲಿ ಅಬ್ರಹಾಮನಿಗೆ -


ನಿನ್ನ ಸಂತತಿಯನ್ನು ಹೆಚ್ಚಿಸೇ ಹೆಚ್ಚಿಸುವೆನು; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು.


ಆ ಯೌವನಸ್ಥನು ಯಾಕೋಬನ ಮಗಳಲ್ಲಿ ಅನುರಕ್ತನಾಗಿದ್ದದರಿಂದ ಅವರು ಹೇಳಿದಂತೆ ಮಾಡುವದಕ್ಕೆ ತಡೆಮಾಡಲಿಲ್ಲ. ಅವನೇ ತನ್ನ ತಂದೆಯ ಮನೆಯವರೆಲ್ಲರಲ್ಲಿ ಘನವಂತನಾಗಿದ್ದನು.


ಆ ಜನರು ನಮ್ಮೊಡನೆ ಸಮಾಧಾನದಿಂದಿದ್ದಾರೆ; ಅವರು ನಮ್ಮ ದೇಶದಲ್ಲೇ ವಾಸಮಾಡಿಕೊಂಡು ವ್ಯಾಪಾರ ಮಾಡಲಿ; ಈ ದೇಶವು ಅವರಿಗೂ ನಮಗೂ ಸಾಕಾಗುವಷ್ಟು ವಿಸ್ತಾರವಾಗಿದೆಯಷ್ಟೆ; ನಾವು ಅವರ ಹೆಣ್ಣು ಮಕ್ಕಳನ್ನು ಮದುವೆ ಮಾಡಿಕೊಳ್ಳೋಣ, ನಮ್ಮ ಹೆಣ್ಣು ಮಕ್ಕಳನ್ನು ಅವರಿಗೆ ಕೊಡೋಣ.


ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರುಬಾಗಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅಪಮಾನಹೊಂದುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು