ಆದಿಕಾಂಡ 34:24 - ಕನ್ನಡ ಸತ್ಯವೇದವು J.V. (BSI)24 ಹಮೋರನೂ ಅವನ ಮಗನಾದ ಶೆಕೆಮನೂ ಹೇಳಿದ ಮಾತಿಗೆ ಊರಿನವರೆಲ್ಲರೂ ಸಮ್ಮತಿಪಟ್ಟದ್ದರಿಂದ ಅವರಲ್ಲಿದ್ದ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ, ಹಮೋರನ ಮಗನಾದ ಶೆಕೆಮನೂ ಹೇಳಿದ ಮಾತಿಗೆ ಊರಿನವರೆಲ್ಲರೂ ಸಮ್ಮತಿಸಿದ್ದರಿಂದ ಅವರಲ್ಲಿದ್ದ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಹಮೋರನ ಮತ್ತು ಅವನ ಮಗ ಶೆಕೆಮನ ಈ ಮಾತಿಗೆ ಊರಿನವರೆಲ್ಲರು ಸಮ್ಮತಿಸಿದರು. ಅಂತೆಯೇ ಅವರಲ್ಲಿದ್ದ ಗಂಡಸರೆಲ್ಲರು ಸುನ್ನತಿಮಾಡಿಸಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಸಭಾಸ್ಥಳದಲ್ಲಿದ್ದ ಗಂಡಸರೆಲ್ಲರೂ ಹಮೋರ ಮತ್ತು ಶೆಕೆಮರ ಮಾತಿಗೆ ಒಪ್ಪಿಕೊಂಡರು. ಬಳಿಕ ಎಲ್ಲಾ ಗಂಡಸರು ಸುನ್ನತಿ ಮಾಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಪಟ್ಟಣದ ದ್ವಾರದಲ್ಲಿ ಹೋಗುವ ಗಂಡಸರೆಲ್ಲರೂ ಹಮೋರನೂ, ಅವನ ಮಗ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ, ಒಪ್ಪಿಕೊಂಡರು. ಹೀಗೆ ಪಟ್ಟಣದಲ್ಲಿದ್ದ ಎಲ್ಲಾ ಗಂಡಸರು ಸುನ್ನತಿ ಮಾಡಿಸಿಕೊಂಡರು. ಅಧ್ಯಾಯವನ್ನು ನೋಡಿ |