Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:27 - ಕನ್ನಡ ಸತ್ಯವೇದವು J.V. (BSI)

27 ಅವರು ಹತವಾದನಂತರ ಯಾಕೋಬನ ಮಕ್ಕಳು ಬಂದು - ಇವರು ನಮ್ಮ ತಂಗಿಯನ್ನು ಅವಮಾನಪಡಿಸಿದರಲ್ಲಾ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವರು ಹತವಾದ ನಂತರ ಯಾಕೋಬನ ಮಕ್ಕಳು ಬಂದು, ಇವರು ನಮ್ಮ ತಂಗಿಯನ್ನು ಮಾನಭಂಗಪಡಿಸಿದ್ದಾರೆ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯಕೋಬನ ಇತರ ಮಕ್ಕಳು ಹತರಾದವರ ಬಳಿಗೆ ಬಂದು, ‘ತಂಗಿಯನ್ನು ಅವಮಾನ ಪಡಿಸಿದವರು ಇವರೇ ಅಲ್ಲವೆ’, ಎಂದುಕೊಂಡು ಆ ಊರನ್ನೇ ಸೂರೆಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯಾಕೋಬನ ಗಂಡುಮಕ್ಕಳು ಪಟ್ಟಣದೊಳಗೆ ಹೋಗಿ ಅಲ್ಲಿದ್ದ ಪ್ರತಿಯೊಂದನ್ನು ತೆಗೆದುಕೊಂಡರು. ತಮ್ಮ ತಂಗಿಗೆ ಶೆಕೆಮನು ಮಾಡಿದ ಮಾನಭಂಗದಿಂದ ಅವರು ಇನ್ನೂ ಕೋಪದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವರು ತಮ್ಮ ಸಹೋದರಿಯನ್ನು ಕೆಡಿಸಿದ್ದರಿಂದ ಯಾಕೋಬನ ಮಕ್ಕಳು ಬಂದು ಆ ಊರನ್ನೇ ಕೊಳ್ಳೆಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:27
13 ತಿಳಿವುಗಳ ಹೋಲಿಕೆ  

ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


ಅದೇ ಮೇರೆಗೆ ರಾಜಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮ ವಿರೋಧಿಗಳ ಕಾಟವನ್ನು ನಿಲ್ಲಿಸಿ ಪ್ರಾಣರಕ್ಷಿಸಿಕೊಳ್ಳುವದಕ್ಕಾಗಿ ಕೂಡಿಕೊಂಡು ಎದ್ದು ತಮ್ಮ ಹಗೆಗಳಲ್ಲಿ ಎಪ್ಪತ್ತೈದುಸಾವಿರ ಮಂದಿಯನ್ನು ಸಂಹರಿಸಿದರು; ಆದರೆ ಸುಲಿಗೆಮಾಡುವದಕ್ಕೆ ಕೈ ಹಾಕಲಿಲ್ಲ.


ಇವರು ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಮಕ್ಕಳು. ಇಷ್ಟು ಮಂದಿಯನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.


ನೀನು ಅವರಿಗೆ - ಇಸ್ರಾಯೇಲ್ಯರೇ, ನಾಳೆಗೋಸ್ಕರ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದುಂಟು. ನೀವು ಅದನ್ನು ತೆಗೆದುಹಾಕುವವರೆಗೂ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಅನ್ನುತ್ತಾನೆ.


ಯೆಹೂದಕುಲದವನೂ ಜೆರಹನ ಗೋತ್ರದವನೂ ಜಬ್ದೀಯ ಕುಟುಂಬದವನೂ ಕರ್ಮೀಯ ಮಗನೂ ಆದ ಆಕಾನನು ಯೆಹೋವನಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡದರಿಂದ ಇಸ್ರಾಯೇಲ್ಯರೆಲ್ಲರೂ ದ್ರೋಹಿಗಳಾದರು. ಯೆಹೋವನ ಕೋಪವು ಅವರ ಮೇಲೆ ಉರಿಯಹತ್ತಿತು.


ಆ ಮನುಷ್ಯನು - ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಈ ಮಾತನ್ನು ಕೇಳಿ ಮೋಶೆ - ಆ ಕಾರ್ಯವು ಬೈಲಿಗೆ ಬಂತಲ್ಲಾ ಅಂದುಕೊಂಡು ಅಂಜಿದನು.


ಅವರು - ನಮ್ಮ ತಂಗಿಯನ್ನು ಸೂಳೆಯಂತೆ ನಡಿಸಬಹುದೋ ಎಂದು ಹೇಳಿದರು.


ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಮಾನಭಂಗ ಪಡಿಸಿದನು.


ಹಮೋರ್ ಮತ್ತು ಅವನ ಮಗನಾದ ಶೆಕೆಮ್ ಸಹಿತವಾಗಿ ಪುರುಷರೆಲ್ಲರನ್ನೂ ದಾಕ್ಷಿಣ್ಯವಿಲ್ಲದೆ ಕೊಂದು ಶೆಕೆಮನ ಮನೆಯಿಂದ ದೀನಳನ್ನು ಕರೆದುಕೊಂಡು ಹೊರಟುಹೋದರು.


ಅವರ ಕುರಿ ದನ ಕತ್ತೆಗಳನ್ನೂ ಊರಲ್ಲಿಯೂ ಅಡವಿಯಲ್ಲಿಯೂ ಇದ್ದ ಅವರ ಆಸ್ತಿಯೆಲ್ಲವನ್ನೂ ಸುಲುಕೊಂಡು


ಕಾಡಿನಿಂದ ಸೌದೆಯನ್ನು ತರಬೇಕಾಗುವದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವದಿಲ್ಲ; ಆಯುಧಗಳನ್ನೇ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆ ಹೊಡೆದವರನ್ನು ತಾವು ಕೊಳ್ಳೆಹೊಡೆಯುವರು; ಇದು ಕರ್ತನಾದ ಯೆಹೋವನ ನುಡಿ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಶತ್ರುವು ನಿನ್ನ ದೇಶವನ್ನು ಮುತ್ತಿಕೊಳ್ಳುವನು, ನಿನ್ನ ಶಕ್ತಿಯನ್ನು ಕುಂದಿಸಿಬಿಡುವನು, ನಿನ್ನ ಅರಮನೆಗಳು ಸೂರೆಯಾಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು