Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:3 - ಕನ್ನಡ ಸತ್ಯವೇದವು J.V. (BSI)

3 ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು; ಆ ಹುಡುಗಿಯನ್ನು ಮೋಹಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಆ ಹುಡುಗಿಯನ್ನು ಪ್ರೀತಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನ ಮನಸ್ಸು ಯಕೋಬನ ಮಗಳಾದ ಆ ದೀನಳ ಮೇಲೆಯೇ ತಲ್ಲೀನಗೊಂಡಿತ್ತು. ಆಕೆಯನ್ನು ಮೋಹಿಸಿ ಅವಳ ಮನವೊಲಿಸುವಂಥ ಮಾತುಗಳನ್ನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಶೆಕೆಮನಿಗೆ ದೀನಳ ಮೇಲೆ ಪ್ರೀತಿಯುಂಟಾಗಿ ಆಕೆಯನ್ನು ಮದುವೆ ಮಾಡಿಕೊಳ್ಳಲು ಇಷ್ಟಪಟ್ಟನು. ಅವನು ತನ್ನನ್ನು ಮದುವೆಯಾಗಬೇಕೆಂದು ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಅವನು ಆ ಹುಡುಗಿಯನ್ನು ಪ್ರೀತಿಸಿ, ಆಕೆಯೊಂದಿಗೆ ಅನುರಾಗದಿಂದ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:3
11 ತಿಳಿವುಗಳ ಹೋಲಿಕೆ  

ಆಹಾ, ನಾನು ಅವಳನ್ನು ಒಲಿಸಿ ಅಡವಿಗೆ ಕರಕೊಂಡು ಹೋಗಿ ಅವಳೊಂದಿಗೆ ಹೃದಯಂಗಮವಾಗಿ ಮಾತಾಡುವೆನು.


ಯೆರೂಸಲೇವಿುನ ಸಂಗಡ ಹೃದಯಂಗಮವಾಗಿ ಮಾತಾಡಿರಿ; ಅದಕ್ಕೆ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.


ಹಿಜ್ಕೀಯನು ಯೆಹೋವನ [ಭಜನೆಯಲ್ಲಿ] ಗಟ್ಟಿಗರಾಗಿದ್ದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತಾಡಿದನು. ನೇಮಕವಾದ ಏಳು ದಿವಸಗಳವರೆಗೂ ಜನರು ಸಮಾಧಾನಯಜ್ಞಗಳನ್ನರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಕೊಂಡಾಡುತ್ತಾ ಔತಣ ಮಾಡಿದರು.


ಈಗ ಎದ್ದು ಹೋಗಿ ನಿನ್ನ ಸೇವಕರನ್ನು ದಯಾಭಾವದಿಂದ ಮಾತಾಡಿಸು; ಯೆಹೋವನಾಣೆ, ನೀನು ಹೀಗೆ ಮಾಡದಿದ್ದರೆ ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿನ್ನನ್ನು ಬಿಟ್ಟು ಹೋಗುವರು. ಯೌವನಕಾಲದಿಂದ ಈವರೆಗೆ ನಿನಗೆ ಬಂದ ಎಲ್ಲಾ ಕೇಡುಗಳಲ್ಲಿ ಇದೇ ಹೆಚ್ಚಿನದಾಗಿರುವದು ಎಂದು ಹೇಳಿದನು.


ದಾವೀದನು ಸೌಲನೊಡನೆ ಮಾತಾಡಿ ತೀರಿಸಿದ ಮೇಲೆ ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. ಅವನು ಇವನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.


ಆಗ ಅವರು ತಿರಿಗಿ ಗಟ್ಟಿಯಾಗಿ ಅತ್ತರು. ಒರ್ಫಳು ಅತ್ತೆಯನ್ನು ಮುದ್ದಿಟ್ಟು ಹೊರಟುಹೋದಳು; ರೂತಳಾದರೋ ಅತ್ತೆಯನ್ನೇ ಅಂಟಿಕೊಂಡಳು.


ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಮಾನಭಂಗ ಪಡಿಸಿದನು.


ಅವನು ತನ್ನ ತಂದೆಯಾದ ಹಮೋರನನ್ನು - ನೀನು ಆ ಹುಡುಗಿಯನ್ನು ನನಗೆ ಮದುವೆ ಮಾಡಿಸಬೇಕೆಂದು ಕೇಳಿಕೊಂಡನು.


ಅನಂತರ ಆಕೆಯ ಗಂಡನಾದ ಆ ಲೇವಿಯನು ಆಕೆಯನ್ನು ಪ್ರೀತಿಯಿಂದ ಮಾತಾಡಿಸಿ ತಿರಿಗಿ ಮನೆಗೆ ಕರತರಬೇಕೆಂದು ಒಬ್ಬ ಸೇವಕನನ್ನೂ ಎರಡು ಕತ್ತೆಗಳನ್ನೂ ತೆಗೆದುಕೊಂಡು ಅಲ್ಲಿಗೆ ಹೋದನು. ಆಕೆಯು ಅವನನ್ನು ತನ್ನ ತೌರ ಮನೆಯಲ್ಲಿ ಸೇರಿಸಿಕೊಂಡಳು; ಆಕೆಯ ತಂದೆಯೂ ಅವನನ್ನು ನೋಡಿ ಸಂತೋಷಪಟ್ಟನು.


ಆದದರಿಂದ ನೀವು ಸ್ವಲ್ಪವೂ ಭಯಪಡಬೇಡಿರಿ; ನಾನು ನಿಮ್ಮನ್ನೂ ನಿಮಗೆ ಸೇರಿದವರೆಲ್ಲರನ್ನೂ ಪೋಷಿಸುವೆನು ಎಂದು ಹೇಳಿ ಅವರನ್ನು ಸಂತೈಸಿ ಅವರ ಸಂಗಡ ಪ್ರೀತಿಯಿಂದ ಮಾತಾಡಿದನು.


ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನೀನು ನನ್ನನ್ನು ಇನ್ನು ಬಾಳೀ ಅನ್ನದೆ ಈಶೀ ಅನ್ನುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು