Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:30 - ಕನ್ನಡ ಸತ್ಯವೇದವು J.V. (BSI)

30 ಯಾಕೋಬನು ಸಿಮೆಯೋನ್ ಲೇವಿಯರಿಗೆ - ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರು ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ; ಈ ದೇಶದವರು ಒಟ್ಟಾಗಿ ನನ್ನ ಮೇಲೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು ಅಲ್ಲವೇ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆಗ ಯಕೋಬನು, ಸಿಮೆಯೋನ್ ಮತ್ತು ಲೇವಿಯರಿಗೆ, “ನೀವು ನನ್ನ ಹೆಸರನ್ನು ಈ ನಾಡಿನ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯಮಾಡಿಬಿಟ್ಟರಿ; ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಕೆಲವರೇ. ಈ ನಾಡಿನವರೆಲ್ಲರು ಒಟ್ಟಿಗೆ ಬಂದು ನನ್ನ ಮೇಲೆ ಬಿದ್ದರೆ ನಾನು ಮಾತ್ರವಲ್ಲ, ನನ್ನ ಮನೆಯವರೆಲ್ಲರೂ ನಿರ್ಮೂಲವಾಗುತ್ತೇವೆ ಅಲ್ಲವೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದರೆ ಯಾಕೋಬನು ಸಿಮೆಯೋನನಿಗೆ ಮತ್ತು ಲೇವಿಗೆ, “ನೀವು ನನ್ನನ್ನು ಅಪಾಯಕ್ಕೆ ಗುರಿಮಾಡಿದಿರಿ. ಈ ದೇಶದಲ್ಲಿರುವ ಎಲ್ಲಾ ಕಾನಾನ್ಯರು ಮತ್ತು ಪೆರಿಜೀಯರು ನನ್ನನ್ನು ದ್ವೇಷಿಸಿ ನನಗೆ ವಿರೋಧವಾಗುವರು. ನನಗಿರುವ ಜನರು ಕೆಲವರೇ. ಈ ದೇಶದಲ್ಲಿರುವ ಜನರು ಒಟ್ಟಾಗಿ ಸೇರಿಕೊಂಡು ನನಗೆ ವಿರೋಧವಾಗಿ ಹೋರಾಡಿದರೆ ನಾನೂ ನನ್ನ ಜನರೆಲ್ಲರೂ ನಾಶವಾಗುವೆವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಯಾಕೋಬನು ಸಿಮೆಯೋನನಿಗೂ, ಲೇವಿಗೂ, “ನೀವು ನನ್ನನ್ನು ಈ ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯವಾಗುವಂತೆ ಮಾಡಿ, ನನ್ನನ್ನು ಕಳವಳಪಡಿಸಿದಿರಿ. ನಾವು ಸ್ವಲ್ಪ ಜನರು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ದಾಳಿಮಾಡುವರು. ಆಗ ನಾನೂ, ನನ್ನ ಮನೆಯವರೂ ನಾಶವಾಗುವೆವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:30
33 ತಿಳಿವುಗಳ ಹೋಲಿಕೆ  

ಆತನು - ನಿಮಗೆ ಈ ದೇಶವನ್ನು ಕೊಡುವೆನು; ಅದು ನಿಮ್ಮ ಸಂತತಿಯವರಿಗೆ ಸ್ವಾಸ್ತ್ಯವಾಗಿರುವದು ಎಂದು ಹೇಳಿದನು.


ಸೌಲನು ಫಿಲಿಷ್ಟಿಯರ ಠಾಣವನ್ನು ನಾಶಮಾಡಿದ್ದರಿಂದ ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಾಯೇಲ್ಯರು ತಿಳಿದು ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.


ಅಲ್ಲಿ ಯೆಹೋಶುವನು ಅವನಿಗೆ - ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ಹೊತ್ತು ಯೆಹೋವನು ನಿನ್ನ ಮೇಲೆ ಆಪತ್ತನ್ನು ಬರಮಾಡುವನು ಎಂದು ಹೇಳಿದ ಕೂಡಲೆ ಇಸ್ರಾಯೇಲ್ಯರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಅವನಿಗಿದ್ದದ್ದೆಲ್ಲವನ್ನೂ ಕಲ್ಲೆಸೆದು ಬೆಂಕಿಯಿಂದ ಸುಟ್ಟುಬಿಟ್ಟರು.


ಫರೋಹನೂ ಅವನ ಸೇವಕರೂ ನಮ್ಮನ್ನು ನೋಡಿ ಹೇಸಿಕೊಳ್ಳುವಂತೆ ನೀವು ಮಾಡಿದಿರಿ; ನಮ್ಮನ್ನು ಸಂಹಾರಮಾಡುವದಕ್ಕೆ ಅವರ ಕೈಗೆ ಕತ್ತಿಯನ್ನು ಕೊಟ್ಟ ಹಾಗಾಯಿತು; ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ ಎಂದು ಹೇಳಿದರು.


ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನೂ ಅಮ್ಮೋನಿಯರೂ ತಿಳಿದು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಯಿಂದಲೂ ಅರಾಮ್ ಮಾಕದಿಂದಲೂ ಚೋಬಾರಾಜ್ಯದಿಂದಲೂ ರಥಗಳನ್ನೂ ರಾಹುತರನ್ನೂ ತರಿಸುವದಕ್ಕೋಸ್ಕರ ಸಾವಿರ ತಲಾಂತು ಬೆಳ್ಳಿಯನ್ನು ಕಳುಹಿಸಿದರು.


ಆತನು - ನಿಮಗೆ ಈ ದೇಶವನ್ನು ಕೊಡುವೆನು; ಅದು ನಿಮ್ಮ ಸಂತತಿಯವರಿಗೆ ಸ್ವಾಸ್ತ್ಯವಾಗಿರುವದು ಎಂದು ಹೇಳಿದನು.


ದಾವೀದನ ಹೆಸರು ಸ್ವಜನರಾದ ಇಸ್ರಾಯೇಲ್ಯರಲ್ಲಿ ಅಸಹ್ಯವಾದದರಿಂದ ಇವನು ತನ್ನ ನಿತ್ಯ ದಾಸನಾಗಿರುವನೆಂದು ಆಕೀಷನು ನಂಬಿಕೊಂಡನು.


ಇದರಿಂದ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳ ಹುಟ್ಟಿತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ಇದ್ದರು.


ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.


ತನ್ನ ಕುಟುಂಬವನ್ನು ಬಾಧಿಸುವವನಿಗೆ ಗಾಳಿಯೇ ಗಂಟು; ಮೂರ್ಖನು ಜ್ಞಾನವಂತನ ಅಧೀನದಲ್ಲಿ ಬಿದ್ದಿರುವನು;


ಪರೋಪಕಾರವು ತನಗೂ ಉಪಕಾರ; ಕ್ರೂರನು ತನ್ನ ಶರೀರವನ್ನೂ ಹಿಂಸಿಸುವನು.


ಆತನ ಸೇವಕನಾದ ಇಸ್ರಾಯೇಲನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ,


ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲ್ಯರನ್ನು ಆಪತ್ತಿಗೆ ಗುರಿಮಾಡಿದ ಆಕಾರನು ಕರ್ಮೀಯಿಂದ ಹುಟ್ಟಿದನು.


ಅದಕ್ಕೆ ಅವನು - ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು.


ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರು ತಿಳಿದು ಹಣಕೊಟ್ಟು ಬೇತ್‍ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಟೋಬ್ ದೇಶದಿಂದ ಹನ್ನೆರಡು ಸಾವಿರ ಮಂದಿ ದಂಡಾಳುಗಳನ್ನೂ ತರಿಸಿದರು.


ದಾವೀದನು ತನ್ನ ಮನಸ್ಸಿನಲ್ಲಿ - ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇಬೇಕು. ಆದದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವದೇ ಉತ್ತಮ. ಆಮೇಲೆ ಸೌಲನು ಇಸ್ರಾಯೇಲ್‍ಪ್ರಾಂತಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು, ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು ಅಂದುಕೊಂಡು


ಅದಕ್ಕೆ ಸಮುವೇಲನು - ನಾನು ಹೋಗುವದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ ಅನ್ನಲು ಆತನು - ನೀನು ಒಂದು ಕಡಸನ್ನು ತೆಗೆದುಕೊಂಡು ಹೋಗಿ ಯೆಹೋವನಿಗೋಸ್ಕರ ಯಜ್ಞಮಾಡುವದಕ್ಕೆ ಬಂದಿದ್ದೇನೆಂದು ಹೇಳಿ ಇಷಯನನ್ನು ಅದಕ್ಕೆ ಕರೆ.


ನಿಮ್ಮನ್ನು ಎಲ್ಲಾ ಜನಾಂಗಗಳಲ್ಲಿ ಹೆಚ್ಚು ಮಂದಿ ಎಂದು ಇಷ್ಟಪಟ್ಟು ಆದುಕೊಳ್ಳಲಿಲ್ಲ; ನೀವು ಎಲ್ಲಾ ಜನಾಂಗಗಳಿಗಿಂತಲೂ ಸ್ವಲ್ಪಮಂದಿಯಷ್ಟೆ.


ಭೂವಿುಯ ಮೇಲೆ ಸಂಚರಿಸುವ ಮೃಗದ ರೂಪವನ್ನಾಗಲಿ ಆಕಾಶದಲ್ಲಿ ಹಾರಾಡುವ ಪಕ್ಷಿಯ ರೂಪವನ್ನಾಗಲಿ


ಅವರಲ್ಲದೆ ಐಗುಪ್ತದೇಶದಲ್ಲಿ ಯೋಸೇಫನಿಗೆ ಹುಟ್ಟಿದವರು ಇಬ್ಬರು. ಐಗುಪ್ತದೇಶಕ್ಕೆ ಹೋದ ಯಾಕೋಬನ ಕುಟುಂಬದವರೆಲ್ಲರು ಒಟ್ಟಾಗಿ ಎಪ್ಪತ್ತು ಮಂದಿ.


ಕೇಳು, ನೀನು ಸುಂದರಿ ಎಂದು ನಾನು ಬಲ್ಲೆ; ಐಗುಪ್ತದೇಶದವರು ನಿನ್ನನ್ನು ಕಂಡು - ಈಕೆಯು ಇವನ ಹೆಂಡತಿ ಎಂದು ನನ್ನನ್ನು ಕೊಂದು ನಿನ್ನನ್ನು ಉಳಿಸಾರು.


ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.


ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಮಾನಭಂಗ ಪಡಿಸಿದನು.


ಅವರ ಮಕ್ಕಳನ್ನೂ ಹೆಂಡರನ್ನೂ ಸೆರೆಹಿಡಿದು ಮನೆಯಲ್ಲಿದ್ದದ್ದನ್ನೆಲ್ಲಾ ಬಾಚಿಕೊಂಡರು.


ಅವರು - ನಮ್ಮ ತಂಗಿಯನ್ನು ಸೂಳೆಯಂತೆ ನಡಿಸಬಹುದೋ ಎಂದು ಹೇಳಿದರು.


ಯಾಕೋಬನ ಸೊಸೆಯರಲ್ಲದೆ ಯಾಕೋಬನಿಂದಲೇ ಹುಟ್ಟಿ ಅವನೊಂದಿಗೆ ಐಗುಪ್ತದೇಶಕ್ಕೆ ಹೋದವರು ಒಟ್ಟು ಅರುವತ್ತಾರು ಮಂದಿ.


ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಮಂದಿ ಮಾತ್ರ ಉಳಿಯುವಿರಿ.


ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಕ್ಷೇತ್ರದಲ್ಲಿರುವ ಮೋರೆಯೆಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು.


ಹೋಗಿ ನಿನ್ನ ತಂದೆಯು ಮನೆಕಾಯುವದಕ್ಕೆ ಬಿಟ್ಟಿರುವ ಅವನ ಉಪಪತ್ನಿಗಳೊಡನೆ ಸಂಗವಿುಸು. ಹೀಗೆ ಮಾಡುವದಾದರೆ ನೀನು ನಿನ್ನ ತಂದೆಗೆ ಅಸಹ್ಯವಾದಿಯೆಂದು ಎಲ್ಲಾ ಇಸ್ರಾಯೇಲ್ಯರಿಗೆ ತಿಳಿಯುವದರಿಂದ ನಿನ್ನ ಪಕ್ಷದವರು ಬಲಗೊಳ್ಳುವರು ಎಂದು ಉತ್ತರ ಕೊಟ್ಟನು.


ಸೊಲೊಮೋನನ ಜೀವಮಾನದಲ್ಲೆಲ್ಲಾ ಇಸ್ರಾಯೇಲ್ಯರಿಗೆ ಮಹಾಬಾಧಕನಾದ ಹದದನಲ್ಲದೆ ಇವನೂ ವೈರಿಯಾಗಿದ್ದನು. ಇವನು ಅರಾಮ್‍ದೇಶದಲ್ಲಿ ಆಳುವವನಾಗಿ ಇಸ್ರಾಯೇಲ್ಯರನ್ನು ಬಹಳವಾಗಿ ದ್ವೇಷಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು