ಆದಿಕಾಂಡ 35:1 - ಕನ್ನಡ ಸತ್ಯವೇದವು J.V. (BSI)1 ದೇವರು ಯಾಕೋಬನಿಗೆ - ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾಹತ್ತಿ ಬೇತೇಲಿಗೆ ಹೋಗಿ ಅಲ್ಲೇ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ; ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದೇವರು ಯಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋಗಿ ಅಲ್ಲೇ ವಾಸಮಾಡು. ನೀನು ನಿನ್ನ ಅಣ್ಣ ಏಸಾವನ ಬಳಿಯಿಂದ ಓಡಿಹೋಗುವಾಗ ನಿನಗಲ್ಲಿ ದರ್ಶನ ಇತ್ತ ದೇವರು ನಾನೇ. ನನಗೊಂದು ಬಲಿಪೀಠವನ್ನು ಅಲ್ಲಿ ಕಟ್ಟಿಸು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವರು ಯಾಕೋಬನಿಗೆ, “ನೀನು ಬೇತೇಲ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸು ಮತ್ತು ಆರಾಧನೆಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿಹೋಗುತ್ತಿದ್ದಾಗ ದೇವರಾದ ‘ಏಲ್’ ನಿನಗೆ ಅಲ್ಲಿ ಕಾಣಿಸಿಕೊಳ್ಳಲಿಲ್ಲವೇ! ಆತನ ಆರಾಧನೆಗಾಗಿ ಅಲ್ಲಿ ಯಜ್ಞವೇದಿಕೆಯನ್ನು ಕಟ್ಟಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದೇವರು ಯಾಕೋಬನಿಗೆ, “ನೀನು ಇಲ್ಲಿಂದ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು, ನಿನ್ನ ಸಹೋದರ ಏಸಾವನ ಎದುರಿನಿಂದ ಓಡಿ ಹೋಗುತ್ತಿದ್ದಾಗ, ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟು,” ಎಂದರು. ಅಧ್ಯಾಯವನ್ನು ನೋಡಿ |