Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:19 - ಕನ್ನಡ ಸತ್ಯವೇದವು J.V. (BSI)

19 ಬೇತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಗೆ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ರಾಹೇಲಳು ಸತ್ತ ಮೇಲೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಯನ್ನು ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅನಂತರ ರಾಖೇಲಳು ಸತ್ತುಹೋದಳು, ಆಕೆಯನ್ನು ಬೆತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಪಕ್ಕದಲ್ಲಿ ಸಮಾಧಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ರಾಹೇಲಳನ್ನು ಬೆತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಸಮಾಧಿ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸತ್ತು ಹೋದ ರಾಹೇಲಳನ್ನು ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಹೂಳಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:19
22 ತಿಳಿವುಗಳ ಹೋಲಿಕೆ  

ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; ಆತನ ಹೊರಡೋಣದ ಮೂಲವು ಪುರಾತನವೂ ಅನಾದಿಯೂ ಆದದ್ದು.


ನಾನು ಪದ್ದನ್ಅರಾವಿುನಿಂದ ಬರುತ್ತಿರಲು ಕಾನಾನ್‍ದೇಶದಲ್ಲಿ ಎಫ್ರಾತನ್ನು ಸೇರುವದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ದಾರಿಯಲ್ಲೇ ಸತ್ತು ನನ್ನನ್ನು ಅಗಲಿಹೋದಳು. ಬೇತ್ಲೆಹೇಮೆಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಆಕೆಗೆ ಸಮಾಧಿ ಮಾಡಿದೆನು ಎಂದು ಹೇಳಿದನು.


ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟುಮಾತ್ರವೂ ಸಣ್ಣದಲ್ಲ. ಒಬ್ಬ ಅಧಿಪತಿ ನಿನ್ನೊಳಗಿಂದಲೇ ಹೊರಡುವನು, ಆತನು ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕವನು ಎಂಬದಾಗಿ ಪ್ರವಾದಿಯ ಮುಖಾಂತರ ಬರೆದದೆ ಎಂದು ಹೇಳಿದರು.


ಇದಕ್ಕೆ ನೀವು ಸಾಕ್ಷಿಗಳು ಎಂದು ಹೇಳಿದ್ದಕ್ಕೆ ಊರುಬಾಗಲಲ್ಲಿ ಕೂಡಿದ್ದ ಹಿರಿಯರೂ ಎಲ್ಲಾ ಜನರೂ - ಹೌದು, ನಾವು ಸಾಕ್ಷಿಗಳು; ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಸತ್ಕಾರ್ಯವನ್ನು ಮಾಡು; ಬೇತ್ಲೆಹೇವಿುನಲ್ಲಿ ಘನವಂತನಾಗು.


ಆ ಮನುಷ್ಯನಿಗೆ ಎಲೀಮೆಲೆಕನೆಂದೂ ಅವನ ಹೆಂಡತಿಗೆ ನೊವೊವಿುಯೆಂದೂ ಇಬ್ಬರು ಮಕ್ಕಳಿಗೆ ಮಹ್ಲೋನ್, ಕಿಲ್ಯೋನ್ ಎಂದೂ ಹೆಸರು. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇವಿುನವರಾದ ಇವರು ಬಂದು ಮೋವಾಬ್ ದೇಶದಲ್ಲಿ ಪ್ರವಾಸವಾಗಿದ್ದಾಗ


ಅರಸನಾದ ಹೆರೋದನ ದಿನಗಳಲ್ಲಿ ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಲ್ಲಿ ಯೇಸು ಹುಟ್ಟಿದಾಗ ಮೂಡಣದೇಶದ ಜೋಯಿಸರು ಯೆರೂಸಲೇವಿುಗೆ ಬಂದು -


ಬೆಟ್ಟಗಳೇ, ಯೆಹೋವನ ವ್ಯಾಜ್ಯವನ್ನು ಕೇಳಿರಿ! ಭೂವಿುಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ; ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ.


ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ


ಅವರು ಬೇತೇಲಿನಿಂದ ಪ್ರಯಾಣ ಮಾಡುತ್ತಿರಲು ಎಫ್ರಾತೂರಿಗೆ ಸೇರುವದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳಿಗೆ ಹೆರಿಗೇ ಕಾಲಬಂತು.


ಆದರೆ ರಾಹೇಲಳು ಸತ್ತುಹೋದಳು; ಪ್ರಾಣಹೋಗುತ್ತಿರುವಾಗ ಆಕೆಯು ಆ ಮಗುವಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅದರ ತಂದೆಯು ಅದಕ್ಕೆ ಬೆನ್ಯಾಮೀನ್ ಎಂದು ಹೆಸರಿಟ್ಟನು. ಹಾಗೆ ರಾಹೇಲಳು ಮೃತಪಟ್ಟಳು.


ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನು ಸೌಲನ ಕಾಲದಲ್ಲಿ ಬಹು ವೃದ್ಧನಾಗಿದ್ದನು. ಇವನ ಎಂಟು ಮಂದಿ ಮಕ್ಕಳಲ್ಲಿ ದಾವೀದನೆಂಬವನು ಒಬ್ಬನು.


ಬೇತ್ಲೆಹೇವಿುನವರು 123


ಇಗೋ, ಅದು ಎಫ್ರಾತದಲ್ಲಿರುತ್ತದೆಂದು ಕೇಳಿದೆವು; ಯಹಾರ್ ಮೈದಾನದಲ್ಲಿ ನಮಗೆ ಸಿಕ್ಕಿತು.


ಯೆಹೂದದ ಬೇತ್ಲೆಹೇವಿುನವನೂ ಯೆಹೂದ ಕುಲದವನೂ ಆಗಿದ್ದ ಒಬ್ಬ ಯೌವನಸ್ಥನಾದ ಲೇವಿಯು


ಈ ಹೊತ್ತು ನೀನು ನನ್ನನ್ನು ಬಿಟ್ಟುಹೋದ ನಂತರ ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಹೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ಮನುಷ್ಯರನ್ನು ಕಾಣುವಿ; ಅವರು ನಿನಗೆ - ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆಯು ಕತ್ತೆಗಳ ಚಿಂತೆಬಿಟ್ಟು ನನ್ನ ಮಗನೆಲ್ಲಿ ಹೋದನೋ ಎಂಬದಾಗಿ ನಿನಗೋಸ್ಕರ ಹಂಬಲಿಸುತ್ತಿರುತ್ತಾನೆ ಎಂದು ಹೇಳುವರು.


ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇವಿುಗೆ ಹೋದನು. ಆ ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ ಎಂದು ಕೇಳಲು ಅವನು -


ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೇತ್ಲೆಹೇವಿುನಲ್ಲಿ ಕಾವಲುದಂಡನ್ನಿಟ್ಟಿದ್ದರು.


ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ - ಬೇತ್ಲೆಹೇಮ್ ಊರಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವದಾದರೆ ಎಷ್ಟೋ ಒಳ್ಳೇದು ಅಂದನು.


ಬೇತ್ಗಾದೇರಿನವರ ಮೂಲಪುರುಷನಾದ ಹಾರೇಫ್ ಎಂಬವರು.


ಅವು ಯಾವವಂದರೆ - ಬೇತ್ಲೆಹೆಮ್, ಏತಾಮ್, ತೆಕೋವ,


ವ್ಯೂಹಭರಿತದೇಶವೇ, ನಿನ್ನ ವ್ಯೂಹಗಳನ್ನು ಈಗ ಕೂಡಿಸು; ಆಹಾ, ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ; ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು