ಆದಿಕಾಂಡ 35:2 - ಕನ್ನಡ ಸತ್ಯವೇದವು J.V. (BSI)2 ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ - ನಿಮ್ಮಲ್ಲಿರುವ ಅನ್ಯದೇವರುಗಳನ್ನು ತಳ್ಳಿಬಿಟ್ಟು ನಿಮ್ಮನ್ನು ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿರಿ; ನಾವು ಬೇತೇಲಿಗೆ ಹೊರಟುಹೋಗೋಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ “ನಿಮ್ಮ ಮಧ್ಯಲ್ಲಿರುವ ಅನ್ಯ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಯಕೋಬನು ತನ್ನ ಮನೆಯವರಿಗೂ ಹಾಗು ತನ್ನ ಸಂಗಡ ಇದ್ದ ಎಲ್ಲರಿಗೂ, “ನಿಮ್ಮಲ್ಲಿ ಇರುವ ಅನ್ಯ ದೇವರುಗಳನ್ನು ತೊರೆದುಬಿಡಿ; ನಿಮ್ಮನ್ನೇ ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿ; ನಾವು ಬೇತೇಲಿಗೆ ಹೊರಟುಹೋಗೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದ್ದರಿಂದ ಯಾಕೋಬನು ತನ್ನ ಕುಟುಂಬದವರಿಗೂ ತನ್ನ ಎಲ್ಲಾ ಸೇವಕರಿಗೂ, “ನಿಮ್ಮಲ್ಲಿರುವ ಮರದ ಮತ್ತು ಲೋಹದ ಎಲ್ಲಾ ಅನ್ಯದೇವರುಗಳನ್ನು ನಾಶಮಾಡಿರಿ. ನಿಮ್ಮನ್ನು ಶುದ್ಧಿ ಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಧರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಯಾಕೋಬನು ತನ್ನ ಮನೆಯವರಿಗೂ, ತನ್ನ ಸಂಗಡ ಇದ್ದವರೆಲ್ಲರಿಗೂ, “ನಿಮ್ಮ ಮಧ್ಯದಲ್ಲಿರುವ ಅನ್ಯದೇವರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ, ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ. ಅಧ್ಯಾಯವನ್ನು ನೋಡಿ |