Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:22 - ಕನ್ನಡ ಸತ್ಯವೇದವು J.V. (BSI)

22 ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗವಿುಸಿದನು; ಮತ್ತು ಆ ಸಂಗತಿಯು ಇಸ್ರಾಯೇಲನಿಗೆ ತಿಳಿದುಬಂತು. ಯಾಕೋಬನ ಗಂಡು ಮಕ್ಕಳು ಹನ್ನೆರಡು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇಸ್ರಯೇಲನು ಆ ನಾಡಿನಲ್ಲಿ ವಾಸವಾಗಿದ್ದಾಗ ರೂಬೇನ್ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗಮಿಸಿದನು, ಈ ಸಂಗತಿ ತಿಳಿದುಬಂದಾಗ ಇಸ್ರಯೇಲನಿಗೆ ಕಡುಕೋಪವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇಸ್ರೇಲನು ಸ್ವಲ್ಪಕಾಲದವರೆಗೆ ಅಲ್ಲಿ ಇಳಿದುಕೊಂಡನು. ಅವನು ಅಲ್ಲಿದ್ದಾಗ ರೂಬೇನನು ಇಸ್ರೇಲನ ದಾಸಿಯಾದ ಬಿಲ್ಹಳೊಡನೆ ಮಲಗಿಕೊಂಡನು. ಇಸ್ರೇಲನು ಇದರ ಬಗ್ಗೆ ಕೇಳಿದಾಗ ತುಂಬ ಕೋಪಗೊಂಡನು. ಯಾಕೋಬನಿಗೆ (ಇಸ್ರೇಲ) ಹನ್ನೆರಡು ಗಂಡುಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ, ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿ ಬಿಲ್ಹಳ ಸಂಗಡ ಮಲಗಿದನು. ಈ ವಿಷಯ ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಪುತ್ರರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:22
36 ತಿಳಿವುಗಳ ಹೋಲಿಕೆ  

ಇಸ್ರಾಯೇಲನ ಚೊಚ್ಚಲಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲನಾಗಿದ್ದರೂ ಅವನು ತನ್ನ ತಂದೆಯ ಹಾಸಿಗೆಯನ್ನು ಹೊಲೆಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು.


ಮಲತಾಯಿಯ ಸಂಗ ಮಾಡಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ.


ನಿಮ್ಮಲ್ಲಿ ಜಾರತ್ವವುಂಟೆಂದು ಜನರು ಸಾಧಾರಣವಾಗಿ ಹೇಳುತ್ತಾರೆ. ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.


ಅರಸನಾದ ದಾವೀದನು ಯೆರೂಸಲೇವಿುಗೆ ಬಂದ ಮೇಲೆ ತಾನು ಮನೆಕಾಯುವದಕ್ಕೋಸ್ಕರ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾದ ಒಂದು ಮನೆಯಲ್ಲಿಟ್ಟು ಅವರಿಗೆ ಅನ್ನವಸ್ತ್ರಕೊಡುತ್ತಿದ್ದನು; ಆದರೆ ಅವರನ್ನು ತಿರಿಗಿ ಕೂಡಲಿಲ್ಲ. ಅವರು ಜೀವದಿಂದಿರುವವರೆಗೂ ವಿಧವೆಯರಂತಿದ್ದು ಕಾವಲಲ್ಲಿರಬೇಕಾಯಿತು.


ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಯಜ್ಞದ ಕುರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.


ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ನೇವಿುಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿವಸದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಮೂಲಪಿತೃಗಳನ್ನು ಪಡೆದನು.


ಆದರೆ ರಾಹೇಲಳು ಸತ್ತುಹೋದಳು; ಪ್ರಾಣಹೋಗುತ್ತಿರುವಾಗ ಆಕೆಯು ಆ ಮಗುವಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅದರ ತಂದೆಯು ಅದಕ್ಕೆ ಬೆನ್ಯಾಮೀನ್ ಎಂದು ಹೆಸರಿಟ್ಟನು. ಹಾಗೆ ರಾಹೇಲಳು ಮೃತಪಟ್ಟಳು.


ಹೀಗಿರುವಲ್ಲಿ ಲೇವಿಯ ವಂಶಸ್ಥನಾದ ಒಬ್ಬ ಮನುಷ್ಯನು ಲೇವಿಯ ಕುಲದ ಕನ್ನಿಕೆಯನ್ನು ಮದುವೆ ಮಾಡಿಕೊಂಡನು.


ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನು ಅಮ್ಮೀನಾದಾಬನ ಮಗನಾದ ನಹಶೋನನು.


ಅವರ ಹೆಸರುಗಳು ಯಾವವಂದರೆ - ರೂಬೇನ್ ಕುಲದ ಜಕ್ಕೂರನ ಮಗನಾದ ಶಮ್ಮೂವ,


ನೀವು ಯೊರ್ದನ್ ಹೊಳೆಯನ್ನು ದಾಟಿದಾಗ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್, ಬೆನ್ಯಾಮೀನ್ ಎಂಬೀ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಆಶೀರ್ವಾದಗಳನ್ನು ಉಚ್ಚರಿಸಬೇಕು.


ಅವರು - ಮಲತಾಯಿಯನ್ನು ಸಂಗವಿುಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ಅಮಾಲೇಕ್ಯರ ಪ್ರದೇಶದಲ್ಲಿ ನೆಲೆಗೊಂಡಿರುವ ಎಫ್ರಾಯೀಮ್ಯರೂ ಅವರ ಜೊತೆಯಲ್ಲಿ ಬೆನ್ಯಾಮೀನ್ಯರೂ ಬಂದರು; ಮಾಕೀರನ ಗೋತ್ರದಿಂದ ಪ್ರಧಾನರೂ ಜೆಬುಲೂನ್ ಕುಲದಿಂದ ದಂಡಧಾರಿಗಳಾದ ಸೇನಾನಾಯಕರೂ


ಬಹುವೃದ್ಧನಾದ ಏಲಿಯು ತನ್ನ ಮಕ್ಕಳು ಎಲ್ಲಾ ಇಸ್ರಾಯೇಲ್ಯರಲ್ಲಿ ನಡಿಸುತ್ತಿರುವದನ್ನೂ ಅವರು ದೇವದರ್ಶನದ ಗುಡಾರದ ಬಾಗಲಿನಲ್ಲಿ ಸೇವೆಮಾಡುವ ಸ್ತ್ರೀಯರೊಡನೆ ಸಂಗವಿುಸುತ್ತಿರುವದನ್ನೂ ಕೇಳಿ ಅವರಿಗೆ -


ಅರಸನಾದ ದಾವೀದನು ಈ ಸಂಗತಿಯನ್ನು ಕೇಳಿ ಬಹಳವಾಗಿ ಕೋಪಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು