ಆದಿಕಾಂಡ 35:5 - ಕನ್ನಡ ಸತ್ಯವೇದವು J.V. (BSI)5 ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ ದೇವರು ಹುಟ್ಟಿಸಿದ ಭಯವು ಸುತ್ತುಮುತ್ತಣ ಊರುಗಳಲ್ಲಿ ಇದ್ದದರಿಂದ ಆ ಊರುಗಳವರು ಯಾಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವರು ಪ್ರಯಾಣಮಾಡುತ್ತಿದ್ದಾಗ ದೇವರು ಸುತ್ತಮುತ್ತಣದ ಊರಿನವರಲ್ಲಿ ಭಯ ಹುಟ್ಟಿಸಿದರು. ಇದರಿಂದಾಗಿ ಆ ಊರಿವನರಾರೂ ಯಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯಾಕೋಬನು ಮತ್ತು ಅವನ ಗಂಡುಮಕ್ಕಳು ಆ ಸ್ಥಳದಿಂದ ಹೊರಟರು. ಆ ಪ್ರದೇಶದಲ್ಲಿದ್ದ ಜನರು ಅವರನ್ನು ಹಿಂಬಾಲಿಸಿ ಕೊಲ್ಲಬೇಕೆಂದಿದ್ದರು. ಆದರೆ ಅವರು ಭಯಪಟ್ಟು ಯಾಕೋಬನನ್ನು ಹಿಂಬಾಲಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ತರುವಾಯ ಅವರು ಮುಂದೆ ಪ್ರಯಾಣಮಾಡಿದರು. ಆಗ ಸುತ್ತಲಿರುವ ಪಟ್ಟಣಗಳವರ ಮೇಲೆ ದೇವರ ಭಯವು ಇದ್ದುದರಿಂದ, ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ. ಅಧ್ಯಾಯವನ್ನು ನೋಡಿ |