Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:4 - ಕನ್ನಡ ಸತ್ಯವೇದವು J.V. (BSI)

4 ಆದಾ ಎಂಬಾಕೆಯು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದಾಳು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಸಾವನಿಗೆ ಆದಾಳು ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಏಸಾವನಿಗೆ ಮತ್ತು ಆದಾಳಿಗೆ ಎಲೀಫಜನೆಂಬ ಮಗನಿದ್ದನು. ಬಾಸೆಮತಳಿಗೆ ರೆಗೂವೇಲನೆಂಬ ಮಗನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದಾಳು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಯೂವೇಲನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:4
7 ತಿಳಿವುಗಳ ಹೋಲಿಕೆ  

ಏಸಾವನ ವಂಶಸ್ಥರು ಯಾರಂದರೆ - ಏಲೀಫಜ್, ರೆಯೂವೇಲ್, ಯೆಯೂಷ್, ಯಳಾಮ್, ಕೋರಹ ಇವರೇ.


ತರುವಾಯ ಅವರು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಬಂದಾಗ ಅವನು - ನೀವು ಈ ಹೊತ್ತು ಬೇಗ ಬಂದಿರಿ, ಇದು ಹೇಗೆ ಎಂದು ಕೇಳಲಾಗಿ ಅವರು -


ತೇಮಾನ್ಯನಾದ ಎಲೀಫಜನು ಶೂಹ್ಯನಾದ ಬಿಲ್ದದನು ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ - ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ ಅವನನ್ನು ಸಂತಯಿಸೋಣ ಬನ್ನಿರಿ ಎಂದು ಗೊತ್ತುಮಾಡಿಕೊಂಡು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.


ಮೋಶೆ ತನ್ನ ಮಾವನಾಗಿದ್ದ ವಿುದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ - ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲ್ಯರಿಗೆ ಮೇಲನ್ನುಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದದರಿಂದ ನೀನು ನಮ್ಮ ಜೊತೆಯಲ್ಲಿ ಬಾ; ನವ್ಮಿುಂದ ನಿನಗೂ ಮೇಲುಂಟಾಗುವದೆಂದು ಹೇಳಿದನು.


ಏಸಾವನು ನಾಲ್ವತ್ತು ವರುಷದವನಾದಾಗ ಹಿತ್ತಿಯನಾದ ಬೇರಿಯ ಮಗಳಾದ ಯೆಹೂದೀತಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆಮಾಡಿಕೊಂಡನು.


ಅನಾಹಳ ಮಗಳಾಗಿದ್ದ ಒಹೊಲೀಬಾಮ; ಮತ್ತು ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಬಾಸೆಮತ್ ಇವರೇ.


ಒಹೊಲೀಬಾಮಳು ಯೆಗೂಷನನ್ನೂ ಯಳಾಮನನ್ನೂ ಕೋರಹನನ್ನೂ ಹೆತ್ತಳು. ಕಾನಾನ್‍ದೇಶದಲ್ಲಿ ಏಸಾವನಿಗೆ ಹುಟ್ಟಿದ ಮಕ್ಕಳು ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು