ಆದಿಕಾಂಡ 36:6 - ಕನ್ನಡ ಸತ್ಯವೇದವು J.V. (BSI)6 ಏಸಾವನು ತನ್ನ ಹೆಂಡರನ್ನೂ ಗಂಡು ಹೆಣ್ಣುಮಕ್ಕಳನ್ನೂ ತನ್ನ ಮನೆಗೆ ಸೇರಿದ ಸೇವಕರೆಲ್ಲರನ್ನೂ ತನಗಿದ್ದ ಎಲ್ಲಾ ಪಶುಗಳ ಹಿಂಡುಗಳನ್ನೂ ತಾನು ಕಾನಾನ್ ದೇಶದಲ್ಲಿ ಸಂಪಾದಿಸಿದ್ದ ಆಸ್ತಿಯೆಲ್ಲವನ್ನೂ ತೆಗೆದುಕೊಂಡು ತನ್ನ ತಮ್ಮನಾದ ಯಾಕೋಬನ ಬಳಿಯಿಂದ ಪರದೇಶಕ್ಕೆ ಹೊರಟುಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ತರುವಾಯ ಏಸಾವನು ತನ್ನ ಹೆಂಡತಿಯರನ್ನೂ, ಗಂಡುಹೆಣ್ಣು ಮಕ್ಕಳನ್ನೂ, ತನ್ನ ಮನೆಗೆ ಸೇರಿದ ಸೇವಕರೆಲ್ಲರನ್ನೂ, ತನಗಿದ್ದ ಎಲ್ಲಾ ಪಶುಪ್ರಾಣಿಗಳ ಹಿಂಡುಗಳನ್ನೂ ಕಾನಾನ್ ದೇಶದಲ್ಲಿ ಸಂಪಾದಿಸಿದ್ದ ಆಸ್ತಿಯೆಲ್ಲವನ್ನೂ ತೆಗೆದುಕೊಂಡು ತನ್ನ ತಮ್ಮನಾದ ಯಾಕೋಬನ ಬಳಿಯಿಂದ ಬೇರೆ ದೇಶಕ್ಕೆ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಏಸಾವನು ತನ್ನ ಹೆಂಡತಿಯರನ್ನೂ ಗಂಡುಹೆಣ್ಣು ಮಕ್ಕಳನ್ನೂ ತನ್ನ ಮನೆಗೆ ಸೇರಿದ ಎಲ್ಲರನ್ನೂ, ತನಗಿದ್ದ ಪಶುಪ್ರಾಣಿಗಳನ್ನೂ ಕಾನಾನ್ ನಾಡಿನಲ್ಲಿ ತಾನು ಸಂಪಾದಿಸಿದ್ದ ಆಸ್ತಿಪಾಸ್ತಿ ಎಲ್ಲವನ್ನೂ ತೆಗೆದುಕೊಂಡು ತನ್ನ ತಮ್ಮ ಯಕೋಬನ ಬಳಿಯಿಂದ ಹೊರನಾಡಿಗೆ ಹೊರಟುಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6-8 ಯಾಕೋಬ ಮತ್ತು ಏಸಾವರ ಕುಟುಂಬಗಳು ಬಹಳ ವೃದ್ಧಿಯಾದ ಕಾರಣ ಕಾನಾನ್ ದೇಶವು ಅವರಿಗೆ ಸಾಕಾಗಲಿಲ್ಲ. ಆದ್ದರಿಂದ ಏಸಾವನು ತನ್ನ ತಮ್ಮನಾದ ಯಾಕೋಬನಿಂದ ದೂರ ಹೋದನು. ಏಸಾವನು ತನ್ನ ಹೆಂಡತಿಯರನ್ನೂ ಗಂಡುಹೆಣ್ಣುಮಕ್ಕಳನ್ನೂ ಎಲ್ಲಾ ಸೇವಕರನ್ನೂ ದನಗಳನ್ನೂ ಮತ್ತು ಇತರ ಪಶುಗಳನ್ನೂ ತನಗೆ ಕಾನಾನಿನಲ್ಲಿದ್ದ ಪ್ರತಿಯೊಂದು ಆಸ್ತಿಯನ್ನೂ ತೆಗೆದುಕೊಂಡು ಸೇಯೀರ್ ಬೆಟ್ಟದ ಸೀಮೆಗೆ ಹೋದನು. (ಏಸಾವನಿಗೆ ಎದೋಮ್ ಎಂಬ ಹೆಸರೂ ಇದೆ. ಎದೋಮ್ ಎಂಬುದು ಸೇಯೀರ್ ದೇಶದ ಮತ್ತೊಂದು ಹೆಸರು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಪುತ್ರಪುತ್ರಿಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ಪಶುಗಳನ್ನೂ ಕಾನಾನ್ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು, ತನ್ನ ಸಹೋದರನಾದ ಯಾಕೋಬನ ಬಳಿಯಿಂದ ಸ್ವಲ್ಪ ದೂರವಿದ್ದ ಮತ್ತೊಂದು ಊರಿಗೆ ಹೋದನು. ಅಧ್ಯಾಯವನ್ನು ನೋಡಿ |