Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:11 - ಕನ್ನಡ ಸತ್ಯವೇದವು J.V. (BSI)

11 ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು; ಆದರೆ ಅವನ ತಂದೆಯು ಅವನ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೀಗೆ ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆಯು ಅವನ ಮಾತುಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಣ್ಣಂದಿರೋ ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ತಂದೆ ಈ ವಿಷಯವನ್ನು ಮನಸ್ಸಿನಲ್ಲೇ ಮೆಲುಕುಹಾಕಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೋಸೇಫನ ಅಣ್ಣಂದಿರಿಗೆ ಅವನ ಮೇಲೆ ಹೊಟ್ಟೆಕಿಚ್ಚು ಹೆಚ್ಚಾಯಿತು. ಆದರೆ ಯೋಸೇಫನ ತಂದೆಯು ಆ ಕನಸುಗಳ ಬಗ್ಗೆ ಆಶ್ಚರ್ಯಚಕಿತನಾಗಿ ಆಲೋಚಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹೀಗೆ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:11
20 ತಿಳಿವುಗಳ ಹೋಲಿಕೆ  

ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು.


ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.


ಆದರೆ ಮರಿಯಳು ಆ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿಟ್ಟುಕೊಂಡು ಯೋಚಿಸುತ್ತಿದ್ದಳು.


ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡು ಮೊಗಗೆಟ್ಟೆನು; ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆನು.


ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆ ಎಂಬ ಶಾಸ್ತ್ರೋಕ್ತಿ ಬರೀ ಮಾತೆಂದು ಭಾವಿಸುತ್ತೀರೋ?


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಕಾಲಕಳೆಯುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ಇವುಗಳ ವಿಷಯದಲ್ಲಿ - ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ಹಿಂದೆ ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.


ಆದರೆ ಜನರು ಗುಂಪುಗುಂಪಾಗಿ ಬರುವದನ್ನು ನೋಡಿ ಯೆಹೂದ್ಯರು ಮತಾಭಿಮಾನದಿಂದ ತುಂಬಿದವರಾಗಿ ಪೌಲನು ಹೇಳಿದ ಮಾತುಗಳಿಗೆ ಎದುರ್ಚಂಡಿಸುತ್ತಾ ದೂಷಣೆ ಮಾಡುತ್ತಾ ಇದ್ದರು.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನಾಭಿಮಾನವನ್ನು ನೋಡಿ ನಾಚಿಕೆಪಡುವರು; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.


ಎಫ್ರಾಯೀವಿುನ ಹೊಟ್ಟೇಕಿಚ್ಚು ತೊಲಗುವದು, ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು; ಎಫ್ರಾಯೀಮು ಯೆಹೂದವನ್ನು ಮತ್ಸರಿಸದು, ಯೆಹೂದವು ಎಫ್ರಾಯೀಮನ್ನು ವಿರೋಧಿಸದು.


ಮತ್ತು ಸಮಸ್ತಪ್ರಯಾಸವನ್ನೂ ಕೈಗೂಡುವ ಸಕಲ ಕಾರ್ಯವನ್ನೂ ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಯೆಹೋವನು ಪ್ರತಿಷ್ಠಿಸಿದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಡಲು


ಬಂದಾಗ ಅವನಿಗೆ - ಯೆಹೋವನ ದಯೆಯನ್ನು ಹೊಂದಿದವನೇ, ಒಳಕ್ಕೆ ಬಾ; ಯಾಕೆ ಹೊರಗೆ ನಿಂತಿರುತ್ತೀ? ನಿನಗೋಸ್ಕರ ನನ್ನ ಮನೆಯನ್ನೂ ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ ಎಂದು ಹೇಳಿದನು.


ಒಂದಾನೊಂದು ಕಾಲದಲ್ಲಿ ಅವನ ಅಣ್ಣಂದಿರು ತಂದೆಯ ಆಡುಕುರಿಗಳನ್ನು ಶೆಕೆವಿುನಲ್ಲಿ ಮೇಯಿಸುವದಕ್ಕೆ ಹೋಗಿದ್ದಾಗ ಇಸ್ರಾಯೇಲನು


ಅವನು ಅವರ ವಿಷಯ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡು ಅವರಿಗೆ - ನೀವು ಗೂಢಚಾರರು; ನಮ್ಮ ದೇಶದ ದುರ್ಬಲ ಸ್ಥಳಗಳನ್ನು ನೋಡಿಕೊಳ್ಳುವದಕ್ಕಾಗಿ ಬಂದವರು ಎಂದು ಹೇಳಲು,


ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹುವ್ಯಸನವೂ ಕೋಪವೂ ಉಂಟಾಗಿ ಅವನು - ದಾವೀದನು ಹತ್ತು ಸಾವಿರ ಗಟ್ಟಳೆಯಾಗಿ ಕೊಂದನೆಂದೂ ನಾನು ಸಾವಿರಗಟ್ಟಳೆಯಾಗಿ ಕೊಂದೆನೆಂದೂ ಹಾಡುತ್ತಾರಲ್ಲಾ! ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾದ ಹಾಗಾಯಿತು ಅಂದುಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು