ಆದಿಕಾಂಡ 37:13 - ಕನ್ನಡ ಸತ್ಯವೇದವು J.V. (BSI)13 ಯೋಸೇಫನಿಗೆ - ನಿನ್ನ ಅಣ್ಣಂದಿರು ಶೆಕೆವಿುನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ; ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ ಬಾ ಎಂದು ಹೇಳಲು ಅವನು - ಇಗೋ ಇದ್ದೇನೆ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ, ಹೋಗು” ಎಂದು ಹೇಳಿದನು. ಅದಕ್ಕೆ ಅವನು, “ಆಗಲಿ, ಹೋಗುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಯಕೋಬನು ಜೋಸೆಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ, ಅಲ್ಲವೆ? ಅವರ ಬಳಿಗೆ ನಿನ್ನನ್ನು ಕಳಿಸಬೇಕೆಂದಿದ್ದೇನೆ,” ಎನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಇಸ್ರೇಲನು ಯೋಸೇಫನಿಗೆ, “ಶೆಕೆಮಿಗೆ ಹೋಗು. ನಿನ್ನ ಅಣ್ಣಂದಿರು ಅಲ್ಲಿ ನನ್ನ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ” ಎಂದು ಹೇಳಿದನು. ಯೋಸೇಫನು, “ಸರಿ, ಹೋಗುವೆನು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದ್ದರಿಂದ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಸಹೋದರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ. ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು,” ಎಂದನು. ಅದಕ್ಕೆ ಅವನು, “ಆಗಲಿ ಹೋಗುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿ |