ಆದಿಕಾಂಡ 37:20 - ಕನ್ನಡ ಸತ್ಯವೇದವು J.V. (BSI)20 ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ ದುಷ್ಟಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ ಬನ್ನಿ; ಆಗ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಬನ್ನಿರಿ, ಈಗ ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ, ಕಾಡುಮೃಗವು ಅವನನ್ನು ತಿಂದು ಬಿಟ್ಟಿತೆಂದು ಹೇಳೋಣ. ಆಗ ಅವನ ಕನಸುಗಳು ಏನಾಗುವವೋ? ನೋಡೋಣ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಾವು ಅವನನ್ನು ಕೊಂದು ಈ ಬಾವಿಯೊಂದರಲ್ಲಿ ಹಾಕಿಬಿಡೋಣ. 'ಕಾಡುಮೃಗ ಅವನನ್ನು ತಿಂದುಬಿಟ್ಟಿತು'; ಎಂದು ಹೇಳಿದರೆ ಆಯಿತು, ಬನ್ನಿ, ಆಗ ಅವನ ಕನಸುಗಳು ಏನಾಗುತ್ತವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅವನನ್ನು ಕೊಲ್ಲಲು ಇದೇ ತಕ್ಕ ಸಮಯ. ಅವನನ್ನು ಕೊಂದು ನೀರಿಲ್ಲದ ಬಾವಿಯೊಳಗೆ ದಬ್ಬಿ, ಕ್ರೂರ ಪ್ರಾಣಿಯೊಂದು ಅವನನ್ನು ತಿಂದುಬಿಟ್ಟಿತೆಂದು ನಮ್ಮ ತಂದೆಗೆ ಹೇಳೋಣ. ಆಗ ಅವನ ಕನಸುಗಳೆಲ್ಲ ಹೇಗೆ ನಿಜವಾಗುತ್ತವೊ ನೋಡೋಣ” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಬನ್ನಿರಿ, ಈಗ ಅವನನ್ನು ಕೊಂದು, ಯಾವುದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ. ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿ |