ಆದಿಕಾಂಡ 37:22 - ಕನ್ನಡ ಸತ್ಯವೇದವು J.V. (BSI)22 ರೂಬೇನನು ಅವನನ್ನು ಅವರ ಕೈಯಿಂದ ತಪ್ಪಿಸಿ ತಂದೆಗೆ ತಿರಿಗಿ ಒಪ್ಪಿಸಬೇಕೆಂದು ಅವರಿಗೆ - ಪ್ರಾಣಹತ್ಯ ಮಾಡಬೇಡಿರಿ; ಅವನನ್ನು ಕಾಡಿನಲ್ಲಿರುವ ಈ ಗುಂಡಿಯೊಳಗೆ ಹಾಕಬಹುದು; ಅವನ ಮೇಲೆ ಕೈಹಾಕಬೇಡಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ರೂಬೇನನು ಅವನನ್ನು ಅವರ ಕೈಯಿಂದ ತಪ್ಪಿಸಿ ತಂದೆಗೆ ತಿರುಗಿ ಒಪ್ಪಿಸಬೇಕೆಂದು ನೆನಸಿ ಅವರಿಗೆ, “ಇವನ ರಕ್ತ ಸುರಿಸಬೇಡಿರಿ, ಅವನನ್ನು ಈ ಕಾಡಿನಲ್ಲಿರುವ ಈ ಗುಂಡಿಯೊಳಗೆ ಹಾಕಿರಿ, ಅವನ ಮೇಲೆ ಕೈಹಾಕಬೇಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ರಕ್ತಪಾತ ಕೂಡದು, ಕಾಡಿನಲ್ಲಿರುವ ಈ ಬಾವಿ ಒಂದರಲ್ಲಿ ಹಾಕಿಬಿಡಿ, ಅವನ ಮೇಲೆ ಕೈಹಾಕಬೇಡಿ,” ಎಂದು ಅವನಿಗೆ ಹೇಳಿದ. ಅವನನ್ನು ಅವರಿಂದ ತಪ್ಪಿಸಿ ತಂದೆಗೆ ಮತ್ತೆ ಒಪ್ದಿಸಬೇಕೆಂಬ ಗುರಿ ರೂಬೇನನದಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅರಣ್ಯದಲ್ಲಿರುವ ಬರಿದಾದ ಬಾವಿಗೆ ಅವನನ್ನು ನೂಕಿಬಿಡಿ; ಆದರೆ ಅವನಿಗೆ ನೋವು ಮಾಡಬೇಡಿ” ಎಂದು ಹೇಳಿದನು. ತರುವಾಯ ಯೋಸೇಫನನ್ನು ಬಾವಿಯಿಂದ ಮೇಲೆತ್ತಿ ತಂದೆಗೆ ಅವನನ್ನು ಒಪ್ಪಿಸಬೇಕೆಂಬುದೇ ರೂಬೇನನ ಅಪೇಕ್ಷೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ರೂಬೇನನು ಅವನನ್ನು ಅವರ ಕೈಗಳಿಂದ ತಪ್ಪಿಸಿ, ತನ್ನ ತಂದೆಯ ಬಳಿಗೆ ತಿರುಗಿ ಕರೆದುಕೊಂಡುಹೋಗುವ ಉದ್ದೇಶದಿಂದ ಅವರಿಗೆ, “ರಕ್ತ ಚೆಲ್ಲಬೇಡಿರಿ, ಕಾಡಿನಲ್ಲಿರುವ ಈ ಗುಂಡಿಯಲ್ಲಿ ಹಾಕಿರಿ, ಆದರೆ ಅವನ ಮೇಲೆ ಕೈಹಾಕಬೇಡಿರಿ,” ಎಂದನು. ಅಧ್ಯಾಯವನ್ನು ನೋಡಿ |