Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:26 - ಕನ್ನಡ ಸತ್ಯವೇದವು J.V. (BSI)

26 ಯೆಹೂದನು ತನ್ನ ಅಣ್ಣತಮ್ಮಂದಿರಿಗೆ - ನಾವು ನಮ್ಮ ತಮ್ಮನನ್ನು ಕೊಂದು ಆ ಕೊಲೆಯನ್ನು ಮರೆಮಾಡಿದರೆ ಪ್ರಯೋಜನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಹಾಕಿ ಅವನ ರಕ್ತವನ್ನು ಮರೆಮಾಡಿದರೆ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಆ ಕೊಲೆಯನ್ನು ಮರೆಮಾಡಿದರೆ ಪ್ರಯೋಜನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ಯೆಹೂದನು ತನ್ನ ಸಹೋದರರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಅವನ ಮರಣವನ್ನು ಮರೆಮಾಡಿದರೆ ನಮಗಾಗುವ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಯೆಹೂದನು ತನ್ನ ಸಹೋದರರಿಗೆ, “ನಾವು ನಮ್ಮ ಸಹೋದರನನ್ನು ಕೊಂದುಹಾಕಿ, ಅವನ ರಕ್ತವನ್ನು ಮರೆಮಾಡುವುದರಲ್ಲಿ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:26
16 ತಿಳಿವುಗಳ ಹೋಲಿಕೆ  

ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ ದುಷ್ಟಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ ಬನ್ನಿ; ಆಗ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಮಾತಾಡಿಕೊಂಡರು.


ಅದಕ್ಕೆ ಯೆಹೋವನು - ನೀನು ಏನು ಮಾಡಿದಿ? ನಿನ್ನ ತಮ್ಮನ ರಕ್ತವು ಭೂವಿುಯ ಕಡೆಯಿಂದ ನನ್ನನ್ನು ಕೂಗುತ್ತದೆ, ಕೇಳು.


ಆದರೆ ನೀವು ಆಗ ಮಾಡಿದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ. ಕಡೆಗೆ ಅವುಗಳಿಂದ ಬರುವದು ಮರಣವಲ್ಲವೇ.


ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಟ್ಟಾನು?


ಯೆರೂಸಲೇಮು ಸುರಿಸಿದ ರಕ್ತವು ಅದರಲ್ಲೇ ನಿಂತಿದೆ; ದೂಳು ಮುಚ್ಚೀತೆಂದು ಆ ಪಟ್ಟಣದವರು ಅದನ್ನು ನೆಲದ ಮೇಲೆ ಹೊಯ್ಯದೆ ಬರೀ ಬಂಡೆಯ ಮೇಲೆ ನಿಲ್ಲಿಸಿರುತ್ತಾರೆ;


ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ - ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.


ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? ಮಣ್ಣು ನಿನ್ನನ್ನು ಸ್ತುತಿಸುವದೋ? ಅದು ನಿನ್ನ ನಂಬಿಕೆಯನ್ನು ಹೊಗಳುವದೇನು?


ಭೂವಿುಯೇ, ನನ್ನ ರಕ್ತವನ್ನು ಮುಚ್ಚಬೇಡ! ನನ್ನ ಮೊರೆಗೆ ಬಿಡುವು ಸಿಕ್ಕದಿರಲಿ!


ದಾವೀದನು - ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ; ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು ಅಂದನು.


ವಿಧವಿಧವಾದ ಜೀವಹತ್ಯ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಚರ್ಚೆಗಳು ನಿಮ್ಮ ಊರಲ್ಲಿ ಉಂಟಾದಾಗ, ಸರಿಯಾಗಿ ವಿವೇಚಿಸುವದು ನಿಮ್ಮ ಶಕ್ತಿಗೆ ಮೀರಿದ ಪಕ್ಷಕ್ಕೆ ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆದುಕೊಳ್ಳುವ ಸ್ಥಳಕ್ಕೆ


ಆಗಲಿ, ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು.


ನಾನು ಇಬ್ರಿಯದೇಶಸ್ಥನು; ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನೇನೂ ತಪ್ಪಿಲ್ಲದವನಾಗಿ ಸೆರೆಯಲ್ಲಿ ಬಿದ್ದೆನು ಅಂದನು.


ಆದರೆ ಅವರು ತಮ್ಮತಮ್ಮೊಳಗೆ - ನಾವು ನಮ್ಮ ತಮ್ಮನಿಗೆ ಮಾಡಿದ್ದು ದ್ರೋಹವೇ ಸರಿ; ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ; ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ ಎಂದು ಮಾತಾಡಿಕೊಂಡರು.


ಆದರೆ ದೇವರು ಮೇಲಾಗಬೇಕೆಂದು ಸಂಕಲ್ಪಿಸಿದನು. ಈಗ ಅನುಭವಕ್ಕೆ ಬಂದ ಪ್ರಕಾರವೇ ಅನೇಕ ಪ್ರಾಣಿಗಳಿಗೆ ಸಂರಕ್ಷಣೆಯುಂಟಾಗುವಂತೆ ಮಾಡಿದನು.


ಎಲ್ನಾಥಾನನೂ ದೆಲಾಯನೂ ಗೆಮರ್ಯನೂ - ದಯಮಾಡಿ ಸುರಳಿಯನ್ನು ಸುಡಬಾರದೆಂದು ಅರಸನಿಗೆ ವಿಜ್ಞಾಪನೆಮಾಡಿದರೂ ಅವನು ಅವರ ಮಾತನ್ನು ಕೇಳಲಿಲ್ಲ.


ಯೆಹೋವನು ಕಾಯಿನನನ್ನು - ನಿನ್ನ ತಮ್ಮನಾದ ಹೇಬೆಲನು ಎಲ್ಲಿ ಎಂದು ಕೇಳಲು ಅವನು - ನಾನರಿಯೆ; ನನ್ನ ತಮ್ಮನನ್ನು ಕಾಯುವವನು ನಾನೋ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು