Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:27 - ಕನ್ನಡ ಸತ್ಯವೇದವು J.V. (BSI)

27 ಅವನನ್ನು ಆ ಇಷ್ಮಾಯೇಲ್ಯರಿಗೆ ಮಾರಿಬಿಡೋಣ ಬನ್ನಿ; ನಾವು ಅವನ ಮೇಲೆ ಕೈಹಾಕಬಾರದು; ಅವನು ನಮ್ಮ ಒಡಹುಟ್ಟಿದ ತಮ್ಮನಲ್ಲವೇ ಎಂದು ಹೇಳಿದನು. ಆ ಮಾತಿಗೆ ಅವನ ಅಣ್ಣಂದಿರು ಒಪ್ಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಬನ್ನಿರಿ, ಅವನನ್ನು ಆ ಇಷ್ಮಾಯೇಲ್ಯರಿಗೆ ಮಾರಿಬಿಡೋಣ. ನಾವು ಅವನ ಮೇಲೆ ಕೈಹಾಕಬಾರದು. ಅವನು ನಮ್ಮ ಒಡಹುಟ್ಟಿದ ತಮ್ಮನಲ್ಲವೇ” ಎಂದು ಹೇಳಿದನು. ಆ ಮಾತಿಗೆ ಅವನ ಅಣ್ಣಂದಿರು ಒಪ್ಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅವನನ್ನು ಆ ಇಷ್ಮಾಯೇಲರಿಗೆ ಮಾರಿಬಿಡೋಣ, ಬನ್ನಿ; ನಾವು ಅವನ ಮೇಲೆ ಕೈ ಹಾಕಬಾರದು, ಅವನು ನಮ್ಮ ತಮ್ಮನಲ್ಲವೆ? ರಕ್ತಸಂಬಂಧಿಯಲ್ಲವೆ?” ಎಂದು ಹೇಳಿದ. ಅವನ ಆ ಮಾತಿಗೆ ಅಣ್ಣತಮ್ಮಂದಿರು ಒಪ್ಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಈ ವ್ಯಾಪಾರಿಗಳಿಗೆ ನಾವು ಅವನನ್ನು ಮಾರಿದರೆ ನಮಗೆ ಹೆಚ್ಚು ಲಾಭವಾಗುವುದು; ಆಮೇಲೆ ನಮ್ಮ ತಮ್ಮನನ್ನು ಕೊಂದ ಅಪರಾಧವೂ ನಮ್ಮ ಮೇಲಿರುವುದಿಲ್ಲ” ಎಂದು ಹೇಳಿದನು. ಅದಕ್ಕೆ ಉಳಿದ ಸಹೋದರರೆಲ್ಲ ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಬನ್ನಿರಿ, ಇಷ್ಮಾಯೇಲರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಏಕೆಂದರೆ ಅವನು ನಮ್ಮ ಸಹೋದರನೂ ನಮ್ಮ ದೇಹವೂ ರಕ್ತವೂ ಆಗಿದ್ದಾನೆ,” ಎಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:27
15 ತಿಳಿವುಗಳ ಹೋಲಿಕೆ  

ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಟ್ಟಾನು?


ಆದರೆ ಅವರು ತಮ್ಮತಮ್ಮೊಳಗೆ - ನಾವು ನಮ್ಮ ತಮ್ಮನಿಗೆ ಮಾಡಿದ್ದು ದ್ರೋಹವೇ ಸರಿ; ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ; ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ ಎಂದು ಮಾತಾಡಿಕೊಂಡರು.


ಒಂದು ದಿವಸ ಸೌಲನು - ಇವನು ನನ್ನ ಕೈಯಿಂದಲ್ಲ, ಫಿಲಿಷ್ಟಿಯರ ಕೈಯಿಂದ ಸಾಯಲಿ ಎಂದು ಆಲೋಚಿಸಿಕೊಂಡು ದಾವೀದನಿಗೆ - ನೀನು ನನ್ನ ವೀರನಾಗಿ ಹೋಗಿ ಯೆಹೋವನ ಯುದ್ಧಗಳನ್ನು ನಡಿಸು; ನಾನು ನನ್ನ ಹಿರೀ ಮಗಳಾದ ಮೇರಬಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ ಅಂದನು.


ಲವಂಗಚೆಕ್ಕೆ, ರಕ್ತಬೋಳ, ಧೂಪ, ಸುಗಂಧತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮ, ಮಾನುಷಪ್ರಾಣ ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಹೇಳಿಕೊಳ್ಳುತ್ತಾ ದುಃಖಿಸುವರು.


ನಾನು ಅವನನ್ನು ನಿಮಗೆ ಹಿಡುಕೊಟ್ಟರೆ ನನಗೆ ಏನು ಕೊಡುತ್ತೀರಿ? ಅಂದನು. ಅವರು ಅವನಿಗೆ ಮೂವತ್ತು ರೂಪಾಯಿ ತೂಗಿ ಕೊಟ್ಟರು.


ನಾವು ನವ್ಮಿುಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತೀರಿ; ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು ಅನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು.


ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿ.


ಆ ದಾಸನು ಆಗಲೇ ಸಾಯದೆ ಒಂದೆರಡು ದಿವಸ ಉಳಿದರೆ ಯಜಮಾನನಿಗೆ ಶಿಕ್ಷೆಯನ್ನು ವಿಧಿಸಕೂಡದು; ಆ ದಾಸನು ಅವನ ಸೊತ್ತಷ್ಟೆ.


ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಮರಣಶಿಕ್ಷೆಯಾಗಬೇಕು.


ರೂಬೇನನು ಅವನನ್ನು ಅವರ ಕೈಯಿಂದ ತಪ್ಪಿಸಿ ತಂದೆಗೆ ತಿರಿಗಿ ಒಪ್ಪಿಸಬೇಕೆಂದು ಅವರಿಗೆ - ಪ್ರಾಣಹತ್ಯ ಮಾಡಬೇಡಿರಿ; ಅವನನ್ನು ಕಾಡಿನಲ್ಲಿರುವ ಈ ಗುಂಡಿಯೊಳಗೆ ಹಾಕಬಹುದು; ಅವನ ಮೇಲೆ ಕೈಹಾಕಬೇಡಿರಿ ಎಂದು ಹೇಳಿದನು.


ಲಾಬಾನನು ಅವನಿಗೆ - ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದೀ ಎಂದು ಹೇಳಿದನು. ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು.


ಆದರೆ ದೇವರು ಮೇಲಾಗಬೇಕೆಂದು ಸಂಕಲ್ಪಿಸಿದನು. ಈಗ ಅನುಭವಕ್ಕೆ ಬಂದ ಪ್ರಕಾರವೇ ಅನೇಕ ಪ್ರಾಣಿಗಳಿಗೆ ಸಂರಕ್ಷಣೆಯುಂಟಾಗುವಂತೆ ಮಾಡಿದನು.


ಆ ನಮ್ಮ ಸಹೋದರರ ಕುಲಕ್ಕೂ ನಮ್ಮ ಕುಲಕ್ಕೂ ಅವರ ಮಕ್ಕಳಿಗೂ ನಮ್ಮ ಮಕ್ಕಳಿಗೂ ಏನು ಹೆಚ್ಚುಕಡಿಮೆ? ನೋಡಿರಿ, ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು; ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಇಷ್ಟರಲ್ಲೇ ಅಪಹರಿಸಿದರು; ನಮ್ಮ ಯತ್ನವೇನೂ ಸಾಗುವದಿಲ್ಲ. ನಮ್ಮ ಹೊಲತೋಟಗಳು ಪರಾಧೀನವಾದವು ಎಂದು ಗುಣುಗುಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು