ಆದಿಕಾಂಡ 37:29 - ಕನ್ನಡ ಸತ್ಯವೇದವು J.V. (BSI)29 ರೂಬೇನನು ತಿರಿಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನಿಲ್ಲದ್ದನ್ನು ಕಂಡು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ರೂಬೇನನು ತಿರುಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನು ಇಲ್ಲದೆ ಇರುವುದನ್ನು ಕಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ರೂಬೇನನು ಮರಳಿ ಆ ಬಾವಿಯ ಬಳಿಗೆ ಬಂದು ನೋಡಿದನು. ಅದರಲ್ಲಿ ಜೋಸೆಫನು ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆ ಸಮಯದಲ್ಲಿ ರೂಬೇನನು ತನ್ನ ಸಹೋದರರೊಡನೆ ಇರಲಿಲ್ಲ. ಅವರು ಯೋಸೇಫನನ್ನು ಮಾರಿದ್ದು ಅವನಿಗೆ ಗೊತ್ತಿರಲಿಲ್ಲ. ರೂಬೇನನು ಬಾವಿಗೆ ಹಿಂತಿರುಗಿ ಬಂದಾಗ, ಯೋಸೇಫನನ್ನು ಅಲ್ಲಿ ಕಾಣದೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ರೂಬೇನನು ಗುಂಡಿಯ ಬಳಿಗೆ ತಿರುಗಿ ಬಂದಾಗ, ಯೋಸೇಫನು ಗುಂಡಿಯಲ್ಲಿ ಇಲ್ಲದ್ದರಿಂದ, ತನ್ನ ವಸ್ತ್ರಗಳನ್ನು ಹರಿದುಕೊಂಡನು. ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು ತನ್ನ ಪರಿವಾರದವರಿಗೆ - ತಾನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ; ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನ ಮಾಡುವದಕ್ಕಾಗಲಿ ಸಾಯಿಸುವದಕ್ಕಾಗಲಿ ನನಗೆ ಸಾಮರ್ಥ್ಯವುಂಟೋ? ಇವನು ನನ್ನೊಡನೆ ಜಗಳವಾಡುವದಕ್ಕೆ ಕಾರಣ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿರಿ ಎಂದು ಹೇಳಿದನು.