ಆದಿಕಾಂಡ 37:36 - ಕನ್ನಡ ಸತ್ಯವೇದವು J.V. (BSI)36 ವಿುದ್ಯಾನ್ಯರು ಯೋಸೇಫನನ್ನು ಐಗುಪ್ತದೇಶಕ್ಕೆ ತೆಗೆದುಕೊಂಡು ಹೋಗಿ ಫರೋಹನ ಬಳಿಯಲ್ಲಿದ್ದ ದೊಡ್ಡ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು; ಇವನು ಮೈಗಾವಲಿನವರ ದಳವಾಯಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಮಿದ್ಯಾನ್ಯರು ಜೋಸೆಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಫರೋಹನ ಆಸ್ಥಾನದಲ್ಲಿದ್ದ ಪೋಟೀಫರನಿಗೆ ಮಾರಿದರು; ಇವನು, ದೊಡ್ಡ ಉದ್ಯೋಗಸ್ಥನೂ ಮೈಗಾವಲಿನವರ ದಳಪತಿಯೂ ಆಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಮಿದ್ಯಾನಿನ ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿನಲ್ಲಿ ಮಾರಿದರು. ಅವರು ಅವನನ್ನು ಫರೋಹನ ಕಾವಲುಗಾರರಿಗೆ ನಾಯಕನಾಗಿದ್ದ ಪೋಟೀಫರನಿಗೆ ಮಾರಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಇದರೊಂದಿಗೆ, ಆ ಮಿದ್ಯಾನ್ಯರು ಯೋಸೇಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಪೋಟೀಫರನಿಗೆ ಮಾರಿದರು. ಇವನು ಫರೋಹನ ಉದ್ಯೋಗಸ್ಥನೂ ಮೈಗಾವಲಿನ ದಳಪತಿಯೂ ಆಗಿದ್ದನು. ಅಧ್ಯಾಯವನ್ನು ನೋಡಿ |