ಆದಿಕಾಂಡ 38:14 - ಕನ್ನಡ ಸತ್ಯವೇದವು J.V. (BSI)14 ಆಗ ಆಕೆ - ಶೇಲಹನು ಪ್ರಾಯಸ್ಥನಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಲಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾವಸ್ತ್ರಗಳನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು [ವೇಶ್ಯಾಸ್ತ್ರೀಯಂತೆ] ಅಲಂಕೃತಳಾಗಿ ತಿಮ್ನಾವೂರಿನ ದಾರಿಯಲ್ಲಿರುವ ಏನಯಿಮೂರಿನ ಬಾಗಿಲ ಬಳಿಯಲ್ಲಿ ಕೂತುಕೊಂಡಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಆಕೆಯು ಶೇಲಹನು ಪ್ರಾಯಸ್ಥನಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಲಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾ ವಸ್ತ್ರವನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು ವೇಶ್ಯಾಸ್ತ್ರೀಯಂತೆ ಅಲಂಕೃತಳಾಗಿ ತಿಮ್ನಾ ಊರಿನ ದಾರಿಯಲ್ಲಿರುವ ಏನಯಿಮ್ ಊರಿನ ಬಾಗಿಲ ಬಳಿಯಲ್ಲಿ ಕುಳಿತುಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಆಕೆ, ‘ಶೇಲಹನು ಪ್ರಾಯಸ್ಥನಾಗಿದ್ದರೂ ನನ್ನನ್ನು ಅವನಿಗೆ ಮದುವೆ ಮಾಡಿಕೊಡಲಿಲ್ಲವಲ್ಲಾ’ ಎಂದುಕೊಂಡು ತನ್ನ ವಿಧವೆ ವಸ್ತ್ರಗಳನ್ನು ತೆಗೆದಿಟ್ಟಳು. ಮುಸುಕನ್ನು ಹಾಕಿಕೊಂಡು ತನ್ನನ್ನೇ ಮರೆಸಿಕೊಂಡಳು. ತಿಮ್ನಾ ಊರಿನ ದಾರಿಯಲ್ಲಿ ಇರುವ ಏನಯಿಮ್ ಊರಿನ ಬಾಗಿಲ ಬಳಿಯಲ್ಲೆ ಕುಳಿತುಕೊಂಡಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ತಾಮಾರಳು ಯಾವಾಗಲೂ ವಿಧವೆಯ ವಸ್ತ್ರಗಳನ್ನು ಧರಿಸಿಕೊಂಡಿರುತ್ತಿದ್ದಳು. ಆದರೆ ಈಗ ಆಕೆ ಬೇರೆ ಬಟ್ಟೆಗಳನ್ನು ಧರಿಸಿಕೊಂಡು ತನ್ನ ಮುಖವನ್ನು ಮುಸುಕಿನಿಂದ ಮುಚ್ಚಿಕೊಂಡು ತಿಮ್ನಾ ಊರಿನ ಸಮೀಪದಲ್ಲಿರುವ ಏನಯಿಮೂರಿನ ದಾರಿಯಲ್ಲಿ ಕುಳಿತುಕೊಂಡಳು. ಯೆಹೂದನ ಚಿಕ್ಕಮಗನಾದ ಶೇಲಹನು ಬೆಳೆದು ದೊಡ್ಡವನಾಗಿರುವುದು ತಾಮಾರಳಿಗೆ ತಿಳಿದಿತ್ತು. ಆದರೆ ಆಕೆಗೆ ಅವನನ್ನು ಮದುವೆ ಮಾಡಿಸಲು ಯೆಹೂದನು ಆಲೋಚಿಸಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು, ಮುಸುಕುಹಾಕಿ ಮುಚ್ಚಿಕೊಂಡು, ತಿಮ್ನಾ ಊರಿನ ಮಾರ್ಗದಲ್ಲಿರುವ ಏನಯಿಮೂರಿನ ಬಹಿರಂಗ ಸ್ಥಳದಲ್ಲಿ ಕೂತುಕೊಂಡಳು. ಏಕೆಂದರೆ ಶೇಲಹನು ದೊಡ್ಡವನಾಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲವೆಂದು ಹಾಗೆ ಮಾಡಿದಳು. ಅಧ್ಯಾಯವನ್ನು ನೋಡಿ |