Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:17 - ಕನ್ನಡ ಸತ್ಯವೇದವು J.V. (BSI)

17 ಅವನು - ಹಿಂಡಿನಿಂದ ಒಂದು ಹೋತಮರಿಯನ್ನು ಕಳುಹಿಸಿಕೊಡುತ್ತೇನೆ ಅಂದಾಗ ಆಕೆ - ನೀನು ಅದನ್ನು ಕೊಡುವ ತನಕ ನನ್ನಲ್ಲಿ ಏನಾದರೂ ಒತ್ತೆಯಿಡಬೇಕು ಎಂದು ಹೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು, “ಹಿಂಡಿನಿಂದ ಒಂದು ಹೋತಮರಿಯನ್ನು ಕಳುಹಿಸುತ್ತೇನೆ” ಅಂದಾಗ ಆಕೆ, “ನೀನು ಆದನ್ನು ಕೊಡುವ ತನಕ ನನ್ನಲ್ಲಿ ಏನಾದರೂ ಒತ್ತೆಯಿಡಬೇಕು” ಎಂದು ಹೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಹಿಂಡಿನಿಂದ ಒಂದು ಹೋತಮರಿಯನ್ನು ಕಳಿಸುತ್ತೇನೆ,” ಎಂದ ಆತ. ಆಗ ಆಕೆ, "ಅದನ್ನು ಕಳಿಸುವ ತನಕ ನನ್ನಲ್ಲಿ ಏನಾದರು ಒತ್ತೆಯಿಡಬೇಕು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೂದನು, “ನನ್ನ ಮಂದೆಯಿಂದ ನಿನಗೆ ಒಂದು ಆಡುಮರಿಯನ್ನು ಕಳುಹಿಸಿಕೊಡುವೆ” ಎಂದು ಉತ್ತರಿಸಿದನು. ಅವಳು “ಸರಿ, ನೀನು ನನಗೆ ಆಡುಮರಿಯನ್ನು ಕಳುಹಿಸಿ ಕೊಡುವ ತನಕ ನನ್ನಲ್ಲಿ ಏನಾದರೂ ಒತ್ತೆಯಿಡಬೇಕು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು, “ಮಂದೆಯಿಂದ ನಿನಗೆ ಮೇಕೆಯ ಮರಿಯನ್ನು ಕಳುಹಿಸುತ್ತೇನೆ,” ಎಂದನು. ಅವಳು, “ನೀನು ಅದನ್ನು ಕಳುಹಿಸುವವರೆಗೆ ಈಡು ಕೊಡುವೆಯೋ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:17
8 ತಿಳಿವುಗಳ ಹೋಲಿಕೆ  

ಎಲ್ಲಾ ಕಡೆ ಸೂಳೆಯರಿಗೆ ಹಣಕೊಡುವದುಂಟು; ನೀನಾದರೂ ನಿನ್ನ ಎಲ್ಲಾ ವಿುಂಡರಿಗೆ ನೀನೇ ಕೊಡುತ್ತೀ; ಅವರು ಎಲ್ಲಾ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಇನಾಮು ಕೊಡುತ್ತಿ.


ಯೆಹೂದನು ತಾನು ಇಟ್ಟಿದ್ದ ಒತ್ತೆಯನ್ನು ಆ ಹೆಂಗಸಿನಿಂದ ಬಿಡಿಸಿಕೊಳ್ಳುವದಕ್ಕೋಸ್ಕರ ತನ್ನ ಸ್ನೇಹಿತನಾದ ಆ ಅದುಲ್ಲಾಮ್ಯನ ಕೈಯಲ್ಲಿ ಹೋತಮರಿಯನ್ನು ಕಳುಹಿಸಲು ಆಕೆ ಅವನಿಗೆ ಸಿಕ್ಕಲಿಲ್ಲ.


ಯಜಮಾನನು ಇದನ್ನು ಕೇಳಿ ಅನ್ಯಾಯಗಾರನಾದ ಆ ಮನೆವಾರ್ತೆಯವನನ್ನು - ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಯಾಕಂದರೆ ಲೌಕಿಕರು ತಮ್ಮಂಥವರ ವಿಷಯದಲ್ಲಿ ಬೆಳಕಿನ ರಾಜ್ಯದವರಿಗಿಂತಲೂ ಜಾಣರಾಗಿದ್ದಾರೆ.


ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ; ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆಮಾಡಿಕೋ.


ನಾನು ನಿನ್ನ ಸಂಗಮ ಮಾಡುವದಕ್ಕೆ ಒಪ್ಪುತ್ತೀಯಾ ಅನ್ನಲು ಆಕೆ - ನನ್ನಲ್ಲಿ ಬರಬೇಕಾದರೆ ನೀನು ಏನು ಕೊಡುತ್ತೀ ಎಂದು ಕೇಳಿದಳು.


ಅವನು - ಏನು ಒತ್ತೆ ಇಡಲಿ ಎಂದು ಕೇಳಲು ಆಕೆ - ನಿನ್ನ ಮುದ್ರೆ, ದಾರ, ಕೈಕೋಲು ಈ ಮೂರನ್ನು ಇಡು ಅಂದಳು. ಅವನು ಅವುಗಳನ್ನು ಕೊಟ್ಟು ಆಕೆಯ ಸಂಗಮ ಮಾಡಲು ಆಕೆ ಅವನಿಗೆ ಬಸುರಾದಳು.


ಕೆಲವು ದಿನಗಳಾದ ಮೇಲೆ ಗೋದಿಯ ಸುಗ್ಗಿಯಲ್ಲಿ ಸಂಸೋನನು ಒಂದು ಹೋತಮರಿಯನ್ನು ತೆಗೆದುಕೊಂಡು ತನ್ನ ಹೆಂಡತಿಯನ್ನು ನೋಡುವದಕ್ಕೋಸ್ಕರ ಹೊರಟುಹೋಗಿ ಆಕೆಯ ತಂದೆಗೆ - ನನ್ನನ್ನು ನನ್ನ ಹೆಂಡತಿಯ ಹತ್ತಿರ ಒಳಗಿನ ಕೋಣೆಗೆ ಹೋಗಗೊಡಿಸು ಅನ್ನಲು ಅವನು - ಹೋಗಬಾರದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು