Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:18 - ಕನ್ನಡ ಸತ್ಯವೇದವು J.V. (BSI)

18 ಅವನು - ಏನು ಒತ್ತೆ ಇಡಲಿ ಎಂದು ಕೇಳಲು ಆಕೆ - ನಿನ್ನ ಮುದ್ರೆ, ದಾರ, ಕೈಕೋಲು ಈ ಮೂರನ್ನು ಇಡು ಅಂದಳು. ಅವನು ಅವುಗಳನ್ನು ಕೊಟ್ಟು ಆಕೆಯ ಸಂಗಮ ಮಾಡಲು ಆಕೆ ಅವನಿಗೆ ಬಸುರಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು, “ಏನು ಒತ್ತೇ ಇಡಲಿ” ಎಂದು ಕೇಳಿದನು. ಆಗ ಆಕೆಯು “ನಿನ್ನ ಮುದ್ರೆ, ನಿನ್ನ ದಾರ, ನಿನ್ನ ಕೈಕೋಲು ಈ ಮೂರನ್ನು ಒತ್ತೆಯಾಗಿ ಇಡು” ಅಂದಳು. ಅವನು ಅವುಗಳನ್ನು ಕೊಟ್ಟು ಆಕೆಯನ್ನು ಸಂಗಮಿಸಲು ಆಕೆಯು ಅವನಿಗೆ ಗರ್ಭಿಣಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಏನು ಒತ್ತೆಯಿಡಬೇಕು?” ಎಂದು ಅವನು ಕೇಳಲು ಆಕೆ, “ನಿನ್ನ ಮುದ್ರೆ ಉಂಗುರ, ಅದರ ದಾರ ಮತ್ತು ನಿನ್ನ ಕೈಕೋಲು, ಈ ಮೂರನ್ನೂ ಇಡು,” ಎಂದಳು. ಅವನು ಅವುಗಳನ್ನು ಕೊಟ್ಟು ಆಕೆಯನ್ನು ಸಂಭೋಗಿಸಿದನು. ಆಕೆ ಅವನಿಗೆ ಗರ್ಭವತಿ ಆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೂದನು, “ಏನು ಒತ್ತೆಯಿಡಲಿ?” ಎಂದು ಕೇಳಿದನು. ತಾಮಾರಳು, “ನಿನ್ನ ಪತ್ರಗಳ ಮೇಲೆ ಉಪಯೋಗಿಸುವ ನಿನ್ನ ಮುದ್ರೆಯನ್ನೂ ಅದರ ದಾರವನ್ನೂ ಮತ್ತು ನಿನ್ನ ಊರುಗೋಲನ್ನೂ ಕೊಡು” ಎಂದು ಉತ್ತರಿಸಿದಳು. ಯೆಹೂದನು ಅವುಗಳನ್ನು ಆಕೆಗೆ ಕೊಟ್ಟನು. ಯೆಹೂದನು ಆಕೆಯನ್ನು ಕೂಡಿದನು; ಅವಳು ಗರ್ಭಿಣಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅದಕ್ಕೆ ಅವನು, “ನಿನಗೆ ಕೊಡತಕ್ಕ ಈಡು ಏನು?” ಎಂದಾಗ. ಅವಳು, “ನಿನ್ನ ಮುದ್ರೆಯೂ ನಿನ್ನ ದಾರವೂ ನಿನ್ನ ಕೈಯಲ್ಲಿರುವ ಕೋಲೂ,” ಎಂದಳು. ಆಗ ಅವನು ಅವುಗಳನ್ನು ಆಕೆಗೆ ಕೊಟ್ಟು, ಆಕೆಯನ್ನು ಕೂಡಿದನು. ಹೀಗೆ ಅವಳು ಅವನಿಂದ ಗರ್ಭಿಣಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:18
8 ತಿಳಿವುಗಳ ಹೋಲಿಕೆ  

ತಂದೆಯು ತನ್ನ ಆಳುಗಳಿಗೆ - ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನು ಇಡಿರಿ; ಕಾಲಿಗೆ ಜೋಡು ಮೆಡಿಸಿರಿ;


ವ್ಯಭಿಚಾರದ್ರಾಕ್ಷಾರಸಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.


ಯೆಹೋವನು ಹೀಗನ್ನುತ್ತಾನೆ - ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತು ಹಾಕುತ್ತಿದ್ದೆನು!


ಅವನು - ಹಿಂಡಿನಿಂದ ಒಂದು ಹೋತಮರಿಯನ್ನು ಕಳುಹಿಸಿಕೊಡುತ್ತೇನೆ ಅಂದಾಗ ಆಕೆ - ನೀನು ಅದನ್ನು ಕೊಡುವ ತನಕ ನನ್ನಲ್ಲಿ ಏನಾದರೂ ಒತ್ತೆಯಿಡಬೇಕು ಎಂದು ಹೇಳಿದ್ದಕ್ಕೆ


ಆಕೆ ಎದ್ದುಹೋದ ಮೇಲೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ತಿರಿಗಿ ವಿಧವಾವಸ್ತ್ರಗಳನ್ನು ಉಟ್ಟುಕೊಂಡಳು.


ತನ್ನ ಕೈಯಿಂದ ಮುದ್ರಿಕೆಯನ್ನು ತೆಗೆದು ಯೋಸೇಫನ ಕೈಗೆ ಇಟ್ಟು ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರಪಣಿಯನ್ನು ಹಾಕಿಸಿ


ಸೊಸೆಯ ಸಹವಾಸ ಮಾಡಬಾರದು; ಆಕೆ ಮಗನ ಹೆಂಡತಿಯಾದವಳಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು