Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:20 - ಕನ್ನಡ ಸತ್ಯವೇದವು J.V. (BSI)

20 ಯೆಹೂದನು ತಾನು ಇಟ್ಟಿದ್ದ ಒತ್ತೆಯನ್ನು ಆ ಹೆಂಗಸಿನಿಂದ ಬಿಡಿಸಿಕೊಳ್ಳುವದಕ್ಕೋಸ್ಕರ ತನ್ನ ಸ್ನೇಹಿತನಾದ ಆ ಅದುಲ್ಲಾಮ್ಯನ ಕೈಯಲ್ಲಿ ಹೋತಮರಿಯನ್ನು ಕಳುಹಿಸಲು ಆಕೆ ಅವನಿಗೆ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೂದನು ತಾನು ಇಟ್ಟಿದ್ದ ಒತ್ತೆಯನ್ನು ಆ ಹೆಂಗಸಿನ ಕೈಯಿಂದ ಬಿಡಿಸಿಕೊಳ್ಳುವುದಕ್ಕೊಸ್ಕರ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಲ್ಲಿ ಹೋತಮರಿಯನ್ನು ಕಳುಹಿಸಿದಾಗ ಆಕೆಯು ಅವನಿಗೆ ಸಿಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯೆಹೂದನು ತಾನು ಇಟ್ಟಿದ್ದ ಒತ್ತೆಯನ್ನು ಆ ಹೆಂಗಸಿನಿಂದ ಬಿಡಿಸಿಕೊಳ್ಳುವ ಸಲುವಾಗಿ ತನ್ನ ಗೆಳೆಯ ಆ ಅದುಲ್ಲಾಮ್ಯನ ಸಂಗಡ ಹೋತಮರಿಯನ್ನು ಕಳಿಸಿದನು. ಆಕೆ ಅವನಿಗೆ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೂದನು ಮಾತು ಕೊಟ್ಟಿದ್ದಂತೆಯೇ ಒಂದು ಆಡುಮರಿಯನ್ನು ತನ್ನ ಸ್ನೇಹಿತನಾದ ಹೀರಾನ ಮೂಲಕ ಏನಯಿಮಿಗೆ ಕಳುಹಿಸಿ ಆ ಮುದ್ರೆಯನ್ನೂ ಊರುಗೋಲನ್ನೂ ತೆಗೆದುಕೊಂಡು ಬರುವಂತೆ ಅವನಿಗೆ ತಿಳಿಸಿದನು. ಆದರೆ ಅವನು ಅವಳನ್ನು ಕಂಡುಹಿಡಿಯಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೂದನು ಆ ಸ್ತ್ರೀಯ ಕೈಯಿಂದ ಈಡು ತೆಗೆದುಕೊಳ್ಳುವದಕ್ಕೆ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಿಂದ ಮೇಕೆಯ ಮರಿಯನ್ನು ಕಳುಹಿಸಿದಾಗ ಆಕೆಯು ಸಿಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:20
8 ತಿಳಿವುಗಳ ಹೋಲಿಕೆ  

ಅದೇ ದಿನದಲ್ಲಿ ಹೆರೋದನೂ ಪಿಲಾತನೂ ಒಬ್ಬರಿಗೊಬ್ಬರು ಸ್ನೇಹಿತರಾದರು; ಅದಕ್ಕಿಂತ ಮೊದಲು ವೈರಿಗಳಾಗಿದ್ದರು.


ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗನು.


ಇತ್ತ ಸಂಸೋನನ ಹೆಂಡತಿಯನ್ನು ಆ [ಮೂವತ್ತು] ಮಂದಿಯಲ್ಲಿ ಅವನಿಗೆ ಸ್ನೇಹಿತನಾಗಿದ್ದವನಿಗೆ ಮದುವೆಮಾಡಿ ಕೊಟ್ಟರು.


ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.


ಆಮೇಲೆ ಅವನು ಅಬ್ರಹಾಮನನ್ನು ಕರಿಸಿ - ನೀನು ನಮಗೆ ಮಾಡಿದ್ದೇನು? ನಾನು ಯಾವ ತಪ್ಪು ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ಮಾಡಬಾರದ ಕಾರ್ಯಗಳನ್ನು ನನಗೆ ಮಾಡಿದೆ ಎಂದು ಹೇಳಿ -


ಆ ಕಾಲದಲ್ಲಿ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಗಟ್ಟಾ ಇಳಿದು ಅದುಲ್ಲಾಮೂರಿನವನಾದ ಹೀರಾ ಎಂಬವನ ಹತ್ತಿರ ಇದ್ದುಕೊಂಡನು.


ಆಕೆ ಎದ್ದುಹೋದ ಮೇಲೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ತಿರಿಗಿ ವಿಧವಾವಸ್ತ್ರಗಳನ್ನು ಉಟ್ಟುಕೊಂಡಳು.


ಅವನು ಅವಳ ಊರಿನವರನ್ನು - ಏನಯಿವಿುನ ಸಮೀಪದಲ್ಲಿ ದಾರಿಯ ಬಳಿಯಲ್ಲಿ ಕೂತಿದ್ದ ದೇವದಾಸಿ ಎಲ್ಲಿರುವಳು ಎಂದು ಕೇಳಿದ್ದಕ್ಕೆ ಅವರು - ಇಲ್ಲಿ ಯಾವ ದೇವದಾಸಿಯೂ ಇಲ್ಲ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು