Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:25 - ಕನ್ನಡ ಸತ್ಯವೇದವು J.V. (BSI)

25 ಅವರು ಆಕೆಯನ್ನು ಹೊರಕ್ಕೆ ತಂದಾಗ ಆಕೆ ತನ್ನ ಮಾವನಿಗೆ ಆ ಒತ್ತೆಯ ಸಾಮಾನುಗಳನ್ನು ಕಳುಹಿಸಿ - ಇವು ಯಾವನವೋ ಆ ಮನುಷ್ಯನಿಂದಲೇ ನಾನು ಬಸುರಾಗಿದ್ದೇನೆ; ಮುದ್ರೆ, ದಾರ, ಕೋಲು ಇವುಗಳ ಗುರುತನ್ನು ತಿಳಿಯಬಹುದು ಎಂದು ಹೇಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಕೆಯನ್ನು ಹೊರಕ್ಕೆ ತಂದಾಗ, ಆಕೆಯು ತನ್ನ ಮಾವನಿಗೆ, “ಈ ಸಾಮಾನುಗಳನ್ನು ಕಳುಹಿಸಿ, ಇವು ಯಾವ ಮನುಷ್ಯನದೋ, ಅವನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಮುದ್ರೆ, ದಾರ, ಕೋಲು ಇವುಗಳ ಗುರುತನ್ನು ತಿಳಿಯಬಹುದು” ಎಂದು ಕೇಳಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅಂತೆಯೇ ಎಳೆದು ತರುವಾಗ ಆಕೆ ತನ್ನ ಮಾವನಿಗೆ ಒತ್ತೆಯ ವಸ್ತುಗಳನ್ನು ಕಳುಹಿಸುತ್ತಾ, “ಇವು ಯಾವನವೊ ಅವನಿಂದಲೇ ನಾನು ಗರ್ಭಿಣಿಯಾದುದು; ಮುದ್ರೆಯುಂಗುರ, ಅದರ ದಾರ ಮತ್ತು ಕೈಗೋಲು ಇವುಗಳನ್ನು ಗುರುತಿಸಿ ತಿಳಿದುಕೊಳ್ಳಬಹುದು,” ಎಂದು ಹೇಳಿಕಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ಗಂಡಸರು ತಾಮಾರಳನ್ನು ಕೊಲ್ಲಲು ಆಕೆಯ ಬಳಿಗೆ ಹೋದರು. ಆದರೆ ಆಕೆ ತನ್ನ ಮಾವನಿಗೆ, “ನನ್ನನ್ನು ಗರ್ಭಿಣಿ ಮಾಡಿದವನು ಈ ವಸ್ತುಗಳ ಒಡೆಯ. ಈ ವಸ್ತುಗಳನ್ನು ನೋಡು! ಇವು ಯಾರವು? ಈ ಮುದ್ರೆಯೂ ದಾರವೂ ಯಾರವು? ಇದು ಯಾರ ಕೈಕೋಲು?” ಎಂಬ ಸಂದೇಶವನ್ನು ಹೇಳಿ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಕೆಯನ್ನು ಹೊರಗೆ ತಂದಾಗ, ಆಕೆಯು ತನ್ನ ಮಾವನಿಗೆ, “ಈ ಒತ್ತೆಯ ಸಾಮಾನುಗಳನ್ನು ಕೊಟ್ಟ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದ್ದರಿಂದ ಈ ಮುದ್ರೆಯೂ ದಾರವೂ ಕೋಲೂ ಯಾರವೆಂದು ತಿಳಿದುಕೋ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:25
7 ತಿಳಿವುಗಳ ಹೋಲಿಕೆ  

ಅವನು - ಏನು ಒತ್ತೆ ಇಡಲಿ ಎಂದು ಕೇಳಲು ಆಕೆ - ನಿನ್ನ ಮುದ್ರೆ, ದಾರ, ಕೈಕೋಲು ಈ ಮೂರನ್ನು ಇಡು ಅಂದಳು. ಅವನು ಅವುಗಳನ್ನು ಕೊಟ್ಟು ಆಕೆಯ ಸಂಗಮ ಮಾಡಲು ಆಕೆ ಅವನಿಗೆ ಬಸುರಾದಳು.


ಆ ನಿಲುವಂಗಿಯನ್ನು ತಮ್ಮ ತಂದೆಗೆ ಕಳುಹಿಸಿದರು; ತಂದವರು - ಇದು ನಮಗೆ ಸಿಕ್ಕಿತು; ಇದು ನಿನ್ನ ಮಗನ ಅಂಗಿ ಹೌದೋ ಅಲ್ಲವೋ ನೋಡು ಎಂದು ಅವನಿಗೆ ಹೇಳಲು


ಇದಲ್ಲದೆ ಸತ್ತವರಾದ ದೊಡ್ಡವರೂ ಚಿಕ್ಕವರೂ ಸಿಂಹಾಸನದ ಮುಂದೆ ನಿಂತಿರುವದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಮತ್ತು ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದಿದ್ದ ಸಂಗತಿಗಳ ಆಧಾರದಿಂದ ಅವರವರ ಕೃತ್ಯಗಳ ಪ್ರಕಾರ ಸತ್ತವರಿಗೆ ನ್ಯಾಯತೀರ್ಪಾಯಿತು.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವದು; ಮರಕ್ಕೆ, ನೀನು ನನ್ನ ತಂದೆ ಎಂತಲೂ ಕಲ್ಲಿಗೆ, ಹೆತ್ತ ತಾಯಿ ನೀನು ಎಂತಲೂ ಹೇಳುವ ಪ್ರಜೆಗಳು, ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು;


ನೀವು ಹೀಗೆ ಮಾಡಿದರೂ ನಾನು ಸುಮ್ಮನೆ ಇದ್ದದರಿಂದ ದೇವರೂ ನಮ್ಮಂಥವನೇ ಎಂದು ನೆನಸಿಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.


ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನವು ಬರುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದುಬರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು