Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:9 - ಕನ್ನಡ ಸತ್ಯವೇದವು J.V. (BSI)

9 ಆದರೆ ಓನಾನನು ಈ ರೀತಿಯಾಗಿ ಆಗುವ ಸಂತಾನವು ತನ್ನದಾಗುವದಿಲ್ಲವೆಂದು ತಿಳಿದು ಅಣ್ಣನಿಗೆ ಸಂತತಿಯನ್ನು ಹುಟ್ಟಿಸಲೊಲ್ಲದೆ ತನ್ನ ಅತ್ತಿಗೆಯಲ್ಲಿ ಸಂಗಮಮಾಡುವಾಗೆಲ್ಲಾ ತನ್ನ ವೀರ್ಯವನ್ನು ನೆಲದ ಪಾಲು ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ಓನಾನನು ಈ ರೀತಿ ಆಗುವ ಸಂತಾನವು ತನ್ನದಾಗುವುದಿಲ್ಲವೆಂದು ತಿಳಿದು ಅಣ್ಣನಿಗೆ ಸಂತತಿಯನ್ನು ಹುಟ್ಟಿಸಬಾರದೆಂದು ಯೋಚಿಸಿ ತನ್ನ ಅತ್ತಿಗೆಯೊಂದಿಗೆ ಸಂಗಮಿಸುವಾಗೆಲ್ಲಾ ಅವಳು ಗರ್ಭಧರಿಸದಂತೆ ತನ್ನ ವೀರ್ಯವನ್ನು ನೆಲದ ಮೇಲೆ ಸುರಿಸುತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದರೆ ಓನಾನನು, ಹೀಗೆ ಆಗುವ ಸಂತಾನ ತನ್ನದಾಗುವುದಿಲ್ಲವೆಂದು ತಿಳಿದುಕೊಂಡನು. ಅಣ್ಣನಿಗೆ ಸಂತತಿ ಹುಟ್ಟಿಸಲು ಅವನು ಒಪ್ಪಲಿಲ್ಲ. ತನ್ನ ಅತ್ತಿಗೆಯಲ್ಲಿ ಸಂಭೋಗ ಮಾಡುವಾಗಲೆ ತನ್ನ ವೀರ್ಯವನ್ನು ಹಾಸಿಗೆಪಾಲು ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ತಾಮಾರಳಲ್ಲಿ ತನಗೆ ಹುಟ್ಟುವ ಮಕ್ಕಳು ತನ್ನವರಾಗುವುದಿಲ್ಲವೆಂದು ಅರಿತುಕೊಂಡು ಓನಾನನು ಆಕೆಯನ್ನು ಕೂಡಿದರೂ ವೀರ್ಯವನ್ನು ನೆಲದ ಪಾಲು ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು, ತನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡದ ಹಾಗೆ, ತನ್ನ ವೀರ್ಯವನ್ನು ನೆಲದ ಮೇಲೆ ಚೆಲ್ಲಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:9
11 ತಿಳಿವುಗಳ ಹೋಲಿಕೆ  

ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆ ಎಂಬ ಶಾಸ್ತ್ರೋಕ್ತಿ ಬರೀ ಮಾತೆಂದು ಭಾವಿಸುತ್ತೀರೋ?


ಮತ್ಸರವೂ ಪಕ್ಷಭೇದವೂ ಇರುವ ಕಡೆ ಗಲಿಬಿಲಿಯೂ ಸಕಲವಿಧ ನೀಚಕೃತ್ಯಗಳೂ ಇರುವವು.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಕಾಲಕಳೆಯುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ಆದರೆ ತೀಕ್ಷ್ಣವಾದ ಮತ್ಸರವೂ ಪಕ್ಷಭೇದವೂ ನಿಮ್ಮ ಹೃದಯದೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.


ಕೋಪವು ಕ್ರೂರ, ಕ್ರೋಧವು ಪ್ರವಾಹ; ಮಾತ್ಸರ್ಯಕ್ಕೆ ಎದುರಾಗಿ ಯಾರು ನಿಂತಾರು?


ಕರಕರೆಯಿಂದ ಮೂರ್ಖನಿಗೆ ನಾಶನವು. ರೋಷದಿಂದ ಮೂಢನಿಗೆ ಮರಣವು ಸಂಭವಿಸುವದಲ್ಲವೇ.


ಹೊಲದ ಖಾತೆಯು ಸತ್ತುಹೋದ ಮಹ್ಲೋನನ ಹೆಸರಿನಲ್ಲೇ ನಿಂತು ಅವನ ಬಂಧುಗಳಲ್ಲಿಯೂ ಊರಲ್ಲಿಯೂ ಅವನ ಸಂತಾನವು ಉಳಿಯುವಂತೆ ಮೋವಾಬ್ಯಳೂ ಅವನ ಹೆಂಡತಿಯೂ ಆದ ರೂತಳನ್ನು ಹೆಂಡತಿಯನ್ನಾಗಿ ತೆಗೆದುಕೊಂಡಿದ್ದೇನೆ;


ಅವಳಲ್ಲಿ ಹುಟ್ಟುವ ಚೊಚ್ಚಲುಮಗನು ಸತ್ತವನ ಮಗನೆಂದು ಎಣಿಸಲ್ಪಡಬೇಕು; ಹೀಗೆ ಆಗುವದರಿಂದ ಸತ್ತವನ ಹೆಸರು ಇಸ್ರಾಯೇಲ್ಯರೊಳಗಿಂದ ನಾಶವಾಗಿ ಹೋಗುವದಿಲ್ಲ.


ಆಕೆಯು - ನನ್ನ ಮಕ್ಕಳೇ, ನೀವು ನನ್ನೊಡನೆ ಬರುವದೇಕೆ? ಹಿಂದಿರುಗಿ ಹೋಗಿರಿ; ನಿಮಗೆ ಗಂಡಂದಿರನ್ನು ಕೊಡುವದಕ್ಕೆ ನನ್ನ ಗರ್ಭದಲ್ಲಿ ಬೇರೆ ಮಕ್ಕಳಿಲ್ಲವಲ್ಲಾ.


ಈ ನಡತೆ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದದರಿಂದ ಆತನು ಅವನನ್ನೂ ಸಾಯಿಸಿದನು.


ಅಣ್ಣ ತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ ಅವನ ಹೆಂಡತಿ ಬೇರೆ ಪುರುಷನನ್ನು ಮದುವೆಯಾಗಬಾರದು. ಅವಳ ಮೈದುನ ಅವಳನ್ನು ಹೆಂಡತಿಯಾಗಿ ತೆಗೆದುಕೊಂಡು ಮೈದುನ ಧರ್ಮವನ್ನು ನೆರವೇರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು