ಆದಿಕಾಂಡ 39:14 - ಕನ್ನಡ ಸತ್ಯವೇದವು J.V. (BSI)14 ಕರೆದು ಅವರಿಗೆ - ನೋಡಿರಿ, ನನ್ನ ಯಜಮಾನರು ಒಬ್ಬ ಇಬ್ರಿಯನನ್ನು ನಮ್ಮೊಳಗೆ ಸೇರಿಸಿ ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾರೆ. ಅವನು ನನ್ನನ್ನು ಮಾನಭಂಗಪಡಿಸುವದಕ್ಕೆ ನನ್ನ ಹತ್ತಿರ ಬಂದನು. ನಾನು ಗಟ್ಟಿಯಾಗಿ ಕೂಗಿಕೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮನೆಯ ಸೇವಕರನ್ನು ಕರೆದು ಅವರಿಗೆ, “ನೋಡಿರಿ, ನನ್ನ ಯಜಮಾನನು ಒಬ್ಬ ಇಬ್ರಿಯನನ್ನು ನಮ್ಮೊಳಗೆ ಸೇರಿಸಿ ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾನೆ. ಅವನು ನನ್ನನ್ನು ಮಾನಭಂಗಪಡಿಸುವುದಕ್ಕೆ ನನ್ನ ಹತ್ತಿರ ಬಂದನು. ನಾನು ಗಟ್ಟಿಯಾಗಿ ಕೂಗಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ನೋಡಿ, ನನ್ನ ಯಜಮಾನರು ಮಾಡಿರುವ ಕೆಲಸ, ಒಬ್ಬ ಹಿಬ್ರಿಯನನ್ನು ಮನೆಗೆ ಸೇರಿಸಿಕೊಂಡು ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾರೆ. ಅವನು ಅತ್ಯಾಚಾರಕ್ಕಾಗಿ ನನ್ನ ಹತ್ತಿರಕ್ಕೆ ಬಂದ; ನಾನು ಗಟ್ಟಿಯಾಗಿ ಕೂಗಿಕೊಂಡೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಮನೆಯ ಹೊರಗಿದ್ದ ಸೇವಕರನ್ನು ಕರೆದು, “ನೋಡಿ, ನಮಗೆ ಅವಮಾನ ಮಾಡುವುದಕ್ಕಾಗಿ ಈ ಇಬ್ರಿಯ ಗುಲಾಮನನ್ನು ಇಲ್ಲಿಗೆ ತರಲಾಗಿದೆ. ಅವನು ಮನೆಯೊಳಗೆ ಬಂದು ನನ್ನ ಮೇಲೆ ಬಲಾತ್ಕಾರ ಮಾಡಲು ಪ್ರಯತ್ನಿಸಿದ. ಆಗ ನಾನು ಗಟ್ಟಿಯಾಗಿ ಕೂಗಿಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ತನ್ನ ಮನೆಯ ಸೇವಕರನ್ನು ಕರೆದು ಅವರಿಗೆ, “ನೋಡಿರಿ, ನಮ್ಮನ್ನು ಅವಮಾನ ಮಾಡುವುದಕ್ಕೆ ಈ ಹಿಬ್ರಿಯನು ನಮ್ಮಲ್ಲಿಗೆ ಬಂದಿದ್ದಾನೆ. ಅವನು ನನ್ನ ಮೇಲೆ ಅತ್ಯಾಚಾರಮಾಡುವುದಕ್ಕೆ ನನ್ನ ಹತ್ತಿರ ಬಂದನು. ಆಗ ನಾನು ಗಟ್ಟಿಯಾಗಿ ಕೂಗಿದೆನು. ಅಧ್ಯಾಯವನ್ನು ನೋಡಿ |