Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:17 - ಕನ್ನಡ ಸತ್ಯವೇದವು J.V. (BSI)

17 ಪತಿಯು ಬಂದಾಗ ಆಕೆ ಅದೇ ಮಾತನ್ನು ಹೇಳಿ ಅವನಿಗೆ - ನೀನು ನಮ್ಮಲ್ಲಿ ಸೇರಿಸಿಕೊಂಡ ಆ ಇಬ್ರಿಯ ಸೇವಕನು ನನ್ನನ್ನು ಮಾನಭಂಗಪಡಿಸುವದಕ್ಕೆ ನನ್ನ ಬಳಿಗೆ ಬಂದನು. ನಾನು ಕೂಗಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಜಮಾನನು ಬಂದಾಗ ಆಕೆಯು ಅದೇ ಮಾತನ್ನು ಹೇಳಿ ಅವನಿಗೆ, “ನೀನು ನಮ್ಮಲ್ಲಿ ಸೇರಿಸಿಕೊಂಡ ಆ ಇಬ್ರಿಯ ಸೇವಕನು ನನ್ನನ್ನು ಮಾನಭಂಗಪಡಿಸುವುದಕ್ಕೆ ನನ್ನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಪತಿ ಬಂದಾಗ ಆಕೆ ಅವನಿಗೆ ಅದೇ ಮಾತನ್ನು ಹೇಳುತ್ತಾ, “ನೀವು ಮನೆಗೆ ಸೇರಿಸಿಕೊಂಡ ಆ ಹಿಬ್ರಿಯ ಸೇವಕನು ನನ್ನನ್ನು ಮಾನಭಂಗಪಡಿಸುವುದಕ್ಕಾಗಿ ನನ್ನ ಬಳಿಗೆ ಬಂದ. ನಾನು ಕೂಗಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪತಿಯು ಬಂದಾಗ ಆಕೆ ಅದೇ ರೀತಿ ಹೇಳಿ, “ನೀನು ಸೇರಿಸಿಕೊಂಡ ಈ ಇಬ್ರಿಯ ಗುಲಾಮನು ನನ್ನ ಮೇಲೆ ಬಲಾತ್ಕಾರ ಮಾಡಲು ಪ್ರಯತ್ನಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ಬಂದಾಗ ಅವನಿಗೂ ಅದರಂತೆಯೇ ಹೇಳುತ್ತಾ, “ನೀನು ನಮ್ಮ ಬಳಿಗೆ ತಂದ ಹಿಬ್ರಿಯ ಸೇವಕನು ನನ್ನನ್ನು ಅವಮಾನ ಮಾಡುವುದಕ್ಕೆ ನನ್ನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:17
15 ತಿಳಿವುಗಳ ಹೋಲಿಕೆ  

ಆಧಾರವಿಲ್ಲದ ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರ ಸಹಾಯಕ್ಕಾಗಿ ನ್ಯಾಯವಿರುದ್ಧವಾದ ಸಾಕ್ಷಿಯನ್ನು ನುಡಿಯಬಾರದು.


ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು - ಇದು ದೇವದೂಷಣೆಯ ಮಾತು; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ;


ಕಳ್ಳಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ಹಾಳಾಗುವನು.


ಕಳ್ಳಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ತಪ್ಪಿಸಿಕೊಳ್ಳನು.


ಸತ್ಯದ ತುಟಿ ಶಾಶ್ವತ; ಸುಳ್ಳಿನ ನಾಲಿಗೆ ಕ್ಷಣಿಕ.


ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ ಹೊಯ್ದಾಡುತ್ತಾ ನರಳುತ್ತೇನೆ. ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ.


ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದುಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ.


ಅವನನ್ನು ಕಂಡ ಕೂಡಲೆ - ಇಸ್ರಾಯೇಲ್ಯರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ ಅಂದನು.


ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.


ಕರೆದು ಅವರಿಗೆ - ನೋಡಿರಿ, ನನ್ನ ಯಜಮಾನರು ಒಬ್ಬ ಇಬ್ರಿಯನನ್ನು ನಮ್ಮೊಳಗೆ ಸೇರಿಸಿ ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾರೆ. ಅವನು ನನ್ನನ್ನು ಮಾನಭಂಗಪಡಿಸುವದಕ್ಕೆ ನನ್ನ ಹತ್ತಿರ ಬಂದನು. ನಾನು ಗಟ್ಟಿಯಾಗಿ ಕೂಗಿಕೊಂಡೆನು.


ಅವನ ದಣಿಯು ಮನೆಗೆ ಬರುವ ತನಕ ಆ ಬಟ್ಟೆಯನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಳು.


ಕೂಗುತ್ತಲೇ ಅವನು ತನ್ನ ಬಟ್ಟೆಯನ್ನು ಬಿಟ್ಟು ತಪ್ಪಿಸಿಕೊಂಡು ಓಡಿಹೋದನು ಎಂದು ಹೇಳಿದಳು.


ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ದ್ವೇಷಿಸುವನು; ಕಪಟದ ಬಾಯಿ ನಾಶಕರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು