Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:22 - ಕನ್ನಡ ಸತ್ಯವೇದವು J.V. (BSI)

22 ಸೆರೆಮನೆಯ ಯಜಮಾನನು ಸೆರೆಯಲ್ಲಿದ್ದವರೆಲ್ಲರನ್ನೂ ಯೋಸೇಫನ ವಶಕ್ಕೆ ಕೊಟ್ಟುಬಿಟ್ಟನು. ಅಲ್ಲಿ ಮಾಡಬೇಕಾದದ್ದನ್ನೆಲ್ಲಾ ಯೋಸೇಫನೇ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸೆರೆಮನೆಯ ಯಜಮಾನನು ಸೆರೆಯಲ್ಲಿದ್ದವರೆಲ್ಲರನ್ನೂ ಯೋಸೇಫನ ವಶಕ್ಕೆ ಒಪ್ಪಿಸಿ ಅವನನ್ನು ಮೇಲ್ವಿಚಾರಕನನ್ನಾಗಿ ಮಾಡಿದನು. ಅವರು ಮಾಡಬೇಕಾದ ಎಲ್ಲ ಕೆಲಸವನ್ನು ಯೋಸೇಫನೇ ಮಾಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆ ಸೆರೆಯಜಮಾನ ಸೆರೆಯಲ್ಲಿದ್ದ ಎಲ್ಲರನ್ನು ಜೋಸೆಫನ ವಶಕ್ಕೆ ಬಿಟ್ಟನು. ಅಲ್ಲಿಯ ಕೆಲಸಕಾರ್ಯವೆಲ್ಲ ಜೋಸೆಫನ ನೇತೃತ್ವದಲ್ಲಿ ನಡೆಯುವಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅವನು ಎಲ್ಲಾ ಕೈದಿಗಳನ್ನು ಯೋಸೇಫನ ವಶಕ್ಕೆ ಒಪ್ಪಿಸಿದನು. ಅಲ್ಲಿ ಮಾಡಬೇಕಾದದ್ದನ್ನೆಲ್ಲಾ ಯೋಸೇಫನೇ ಮಾಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದ್ದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅಲ್ಲಿ ಮಾಡಬೇಕಾದದ್ದನ್ನೆಲ್ಲಾ ಯೋಸೇಫನೇ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:22
8 ತಿಳಿವುಗಳ ಹೋಲಿಕೆ  

ಅವನ ಮೇಲೆ ದಯೆ ಇಟ್ಟು ಅವನನ್ನು ಸ್ವಂತ ಸೇವಕನನ್ನಾಗಿ ನೇವಿುಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು.


ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾಸೌಖ್ಯದಿಂದ ಆನಂದಿಸುವರು.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು.


ಈ ಮನೆಯಲ್ಲಿ ಅವನೂ ನನಗಿಂತ ದೊಡ್ಡವನಲ್ಲ; ನೀನು ಅವನ ಧರ್ಮಪತ್ನಿಯಾದದರಿಂದ ನಿನ್ನನ್ನು ಮಾತ್ರ ನನಗೆ ಅಧೀನಮಾಡಲಿಲ್ಲ; ಹೀಗಿರುವಲ್ಲಿ ನಾನು ಇಂಥಾ ಮಹಾದುಷ್ಕೃತ್ಯವನ್ನು ನಡಿಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ ಎಂದು ತನ್ನ ದಣಿಯ ಹೆಂಡತಿಗೆ ಉತ್ತರಕೊಟ್ಟನು.


ಅವನನ್ನು ಹಿಡಿಸಿ ಅರಸನು ಸೆರೆಯವರನ್ನು ಕಟ್ಟಿಹಾಕಿಸುತ್ತಿದ್ದ ಸೆರೆಮನೆಯಲ್ಲಿ ಹಾಕಿಸಿದನು. ಅಲ್ಲಿ ಯೋಸೇಫನು ಸೆರೆಯಲ್ಲಿ ಇರಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು