ಆದಿಕಾಂಡ 39:23 - ಕನ್ನಡ ಸತ್ಯವೇದವು J.V. (BSI)23 ಯೆಹೋವನು ಅವನ ಸಂಗಡ ಇದ್ದು ಅವನು ನಡಿಸಿದ್ದೆಲ್ಲವನ್ನು ಕೈಗೂಡಿಸಿದ್ದರಿಂದ ಅವನ ವಶದಲ್ಲಿದ್ದ ಯಾವದೊಂದರ ವಿಷಯದಲ್ಲಿಯೂ ಸೆರೆಮನೆಯ ಯಜಮಾನನು ಏನೂ ಚಿಂತಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೆಹೋವನು ಅವನ ಸಂಗಡ ಇದ್ದು ಅವನು ನಡಿಸಿದ್ದೆಲ್ಲವನ್ನು ಸಫಲಗೊಳಿಸಿದ್ದರಿಂದ ಅವನ ವಶಕ್ಕೆ ಒಪ್ಪಿಸಿದ್ದ ಯಾವ ವಿಷಯದ ಕುರಿತಾಗಿಯೂ ಸೆರೆಮನೆಯ ಯಜಮಾನನು ಯೋಚಿಸದೆ ನಿಶ್ಚಿಂತನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸರ್ವೇಶ್ವರ ಜೋಸೆಫನೊಂದಿಗೆ ಇದ್ದರು. ಅವನು ಕೈಗೊಂಡ ಕೆಲಸವೆಲ್ಲ ಜಯವಾಗುವಂತೆ ಮಾಡುತ್ತಿದ್ದರು. ಈ ಕಾರಣ ಸೆರೆಮನೆಯ ಯಜಮಾನ ಅಲ್ಲಿಯ ಎಲ್ಲ ವಿಷಯದಲ್ಲೂ ನಿಶ್ಚಿಂತನಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೆಹೋವನು ಯೋಸೇಫನ ಸಂಗಡವಿದ್ದು ಅವನ ಎಲ್ಲಾ ಕೆಲಸಕಾರ್ಯಗಳನ್ನು ಯಶಸ್ವಿಗೊಳಿಸುತ್ತಿದ್ದದ್ದರಿಂದ ಮುಖ್ಯಾಧಿಕಾರಿಯು ಎಲ್ಲಾ ವಿಷಯಗಳನ್ನು ಯೋಸೇಫನಿಗೆ ವಹಿಸಿ ನಿಶ್ಚಿಂತೆಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೆಹೋವ ದೇವರು ಅವನ ಸಂಗಡ ಇದ್ದುದರಿಂದಲೂ ಅವನು ಮಾಡುವುದನ್ನು ಯೆಹೋವ ದೇವರು ಅಭಿವೃದ್ಧಿಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವುದಕ್ಕೂ ಚಿಂತೆ ಮಾಡದೆ ಇದ್ದನು. ಅಧ್ಯಾಯವನ್ನು ನೋಡಿ |