Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:4 - ಕನ್ನಡ ಸತ್ಯವೇದವು J.V. (BSI)

4 ಅವನ ಮೇಲೆ ದಯೆ ಇಟ್ಟು ಅವನನ್ನು ಸ್ವಂತ ಸೇವಕನನ್ನಾಗಿ ನೇವಿುಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದುದರಿಂದ ಅವನ ದಣಿಯು ಯೋಸೇಫನ ಮೇಲೆ ದಯೆ ಇಟ್ಟು, ಅವನನ್ನು ಸ್ವಂತ ಸೇವಕನನ್ನಾಗಿ ನೇಮಿಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜೋಸೆಫ್ ಅವನ ಕೃಪೆಗೆ ಪಾತ್ರನಾದ. ದಣಿ ಅವನನ್ನು ತನ್ನ ಆಪ್ತಸೇವಕನನ್ನಾಗಿ ನೇಮಿಸಿಕೊಂಡ. ಅದು ಮಾತ್ರವಲ್ಲ, ತನ್ನ ಮನೆಯಲ್ಲೇ ಮೇಲ್ವಿಚಾರಕನನ್ನಾಗಿ ಮಾಡಿ, ತನ್ನ ಆಸ್ತಿಪಾಸ್ತಿಯನ್ನೆಲ್ಲ ಅವನ ವಶಕ್ಕೆ ಒಪ್ಪಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪೋಟೀಫರನು ಯೋಸೇಫನ ವಿಷಯದಲ್ಲಿ ತುಂಬ ಸಂತೋಷಪಟ್ಟು ಸ್ವಂತ ಸೇವಕನನ್ನಾಗಿ ಮಾಡಿಕೊಂಡನು; ಅಲ್ಲದೆ ಮನೆಯ ಮೇಲ್ವಿಚಾರಣೆಯನ್ನು ಒಪ್ಪಿಸಿಕೊಟ್ಟನು; ತನ್ನ ಆಸ್ತಿಗೆಲ್ಲಾ ಮೇಲಾಧಿಕಾರಿಯನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ ಯೋಸೇಫನು ಪೋಟೀಫರನ ದೃಷ್ಟಿಯಲ್ಲಿ ದಯೆಹೊಂದಿ ಅವನ ಸೇವೆ ಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ, ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:4
23 ತಿಳಿವುಗಳ ಹೋಲಿಕೆ  

ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಯಜಮಾನನ ಮಾತಿಗೆ ಕಾಯುವವನು ಮಾನವನ್ನನುಭವಿಸುವನು.


ಆದರೆ ಅವನು ಒಪ್ಪದೆ - ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿ ನಾನು ಇರುವದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೆ ಇದ್ದಾನೆ;


ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರೀ ಸೇವಕನಿಗೆ -


ನೀನು ನಿನ್ನ ದಾಸನ ಮೇಲೆ ದಯವಿಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿಹೋಗಲಾರೆನು: ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು.


ತನ್ನ ಕೆಲಸದಲ್ಲಿ ಚಟುವಟಿಕೆಯಾಗಿರುವವನನ್ನು ನೋಡು; ಇಂಥವನು ರಾಜರನ್ನು ಸೇವಿಸುವನಲ್ಲದೆ ನೀಚರನ್ನು ಸೇವಿಸುವದಿಲ್ಲ.


ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರಮಾಡುವನು; ಮನೆಮಕ್ಕಳೊಂದಿಗೆ ಬಾಧ್ಯತೆಯನ್ನು ಹೊಂದುವನು.


ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ ಅವನ ಶತ್ರುಗಳನ್ನೂ ವಿುತ್ರರನ್ನಾಗಿ ಮಾಡುವನು.


ಯಾಕೋಬನು - ಹಾಗೆ ಅಪ್ಪಣೆಕೊಡಕೂಡದು; ನೀನು ನನ್ನ ಮೇಲೆ ಕಟಾಕ್ಷವಿಟ್ಟು ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು. ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ.


ಬೊಗ್ಗಿ ನಮಸ್ಕರಿಸಿ - ಸ್ವಾವಿು, ದಯವಿರಲಿ; ದಾಸನ ಬಳಿಗೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ.


ಜಾಣನಾದ ಸೇವಕನಿಗೆ ರಾಜನ ಕೃಪೆ; ಮಾನಗೇಡಿಗೆ ರಾಜನ ರೌದ್ರ.


ತರುವಾಯ ಸೌಲನು ಇಷಯನ ಬಳಿಗೆ ದೂತರನ್ನು ಅಟ್ಟಿ ಅವನಿಗೆ - ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲಿ ಸೇವೆಮಾಡಲಿ ಎಂದು ತಿಳಿಸಿದನು.


ಏಸಾವನು - ನಾನು ದಾರಿಯಲ್ಲಿ ಕಂಡ ಆ ಪಶುಗಳ ಹಿಂಡುಗಳು ಯಾತಕ್ಕೆ ಎಂದು ಕೇಳಲು ಯಾಕೋಬನು - ಸ್ವಾವಿುಯವರ ದಯ ನನಗೆ ದೊರಕಬೇಕೆಂದು ನಾನು ತಮಗೆ ಕಳುಹಿಸಿಕೊಟ್ಟೆನು ಅಂದನು.


ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸೀಜನವೂ ಉಂಟಾದವು; ತಮ್ಮ ದಯವಿರಬೇಕೆಂದು ಪ್ರಭುಗಳಿಗೆ ತಿಳಿಸುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆಂದು ಹೇಳಿರಿ ಅಂದನು.


ಅದಕ್ಕೆ ಅಬ್ರಾಮನು - ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನಾಗಿ ಹೋಗುವೆನಾದದರಿಂದ ನನ್ನ ಆಸ್ತಿಯೆಲ್ಲಾ ದಮಸ್ಕದ ಎಲೀಯೆಜರನ ಪಾಲಾಗುವದಲ್ಲಾ ಅಂದನು.


ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬವನು ಅವನಿಗೆ ವಿರೋಧವಾಗಿ ಒಳಸಂಚುಮಾಡಿದನು. ಅರಸನು ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನೆಂಬವನ ಮನೆಯಲ್ಲಿ ಕುಡಿದು ಮತ್ತನಾಗಿರುವಾಗ


ಅವನು - ನೊವೊವಿುಯ ಸಂಗಡ ಬಂದ ಮೋವಾಬ್‍ಸ್ತ್ರೀಯು;


ಬಾಲಕನಾದ ಸಮುವೇಲನಾದರೋ ಬೆಳೆಯುತ್ತಾ ಬಂದ ಹಾಗೆಲ್ಲಾ ಯೆಹೋವನ ಮತ್ತು ಮನುಷ್ಯರ ದಯೆಗೆ ಪಾತ್ರನಾದನು.


ಹೇಗೈಯು ಆಕೆಯನ್ನು ಮೆಚ್ಚಿ ತನ್ನ ದಯೆಗೆ ಪಾತ್ರಳಾದ ಆಕೆಗೋಸ್ಕರ ತಕ್ಕ ಲೇಪನ ದ್ರವ್ಯಗಳನ್ನೂ ಭೋಜನಾಂಶವನ್ನೂ ಆರಿಸಿದ ಏಳು ಮಂದಿ ಸೇವಕಿಯರನ್ನೂ ಅರಮನೆಯಿಂದ ಬೇಗನೆ ಏರ್ಪಡಿಸಿ ಆಕೆಯನ್ನೂ ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮಭಾಗದಲ್ಲಿರಿಸಿದನು.


ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ ಸಮ್ಮತಿಯನ್ನೂ ಪಡೆದುಕೊಳ್ಳುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು