ಆದಿಕಾಂಡ 39:5 - ಕನ್ನಡ ಸತ್ಯವೇದವು J.V. (BSI)5 ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ ಆಸ್ತಿಯ ಮೇಲೆಯೂ ಅಧ್ಯಕ್ಷನಾಗಿ ಇಟ್ಟಂದಿನಿಂದ ಯೆಹೋವನು ಯೋಸೇಫನ ನಿವಿುತ್ತವಾಗಿ ಆ ಐಗುಪ್ತ್ಯನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ, ಆಸ್ತಿಯ ಮೇಲೆಯೂ ಮೇಲ್ವಿಚಾರಕನನ್ನಾಗಿ ಇಟ್ಟಿದ್ದರಿಂದ ಯೆಹೋವನು ಯೋಸೇಫನ ನಿಮಿತ್ತವಾಗಿ ಆ ಐಗುಪ್ತನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ, ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹೀಗೆ ತನ್ನ ಮನೆಮಂದಿರದ ಮೇಲೂ ಆಸ್ತಿಪಾಸ್ತಿಯ ಮೇಲೂ ಜೋಸೆಫನನ್ನೇ ಆಡಳಿತಗಾರನನ್ನಾಗಿ ನೇಮಿಸಿದ. ಜೋಸೆಫನ ಪ್ರಯುಕ್ತ ಸರ್ವೇಶ್ವರ ಆ ಈಜಿಪ್ಟಿನವನ ಮನೆತನವನ್ನು ಹರಸಿದರು. ಮನೆಯಲ್ಲೂ ಸರ್ವೇಶ್ವರ ಸ್ವಾಮಿಯ ಆಶೀರ್ವಾದವಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಪೋಟೀಫರನು ಯೋಸೇಫನಿಗೆ ಮನೆಯ ಮೇಲ್ವಿಚಾರಣೆಯನ್ನು ಕೊಟ್ಟು ಆಸ್ತಿಗೆ ಅವನನ್ನು ಜವಾಬ್ದಾರನನ್ನಾಗಿ ಮಾಡಿದ ಮೇಲೆ ಯೆಹೋವನು ಪೋಟೀಫರನ ಮನೆಯನ್ನೂ ಬೆಳೆಗಳನ್ನೂ ಆಸ್ತಿಯನ್ನೂ ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವನನ್ನು ಮನೆಯಲ್ಲಿಯೂ, ತನಗಿದ್ದ ಎಲ್ಲದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಯೆಹೋವ ದೇವರು ಆ ಈಜಿಪ್ಟಿನವನ ಮನೆಯನ್ನು ಯೋಸೇಫನಿಗಾಗಿ ಆಶೀರ್ವದಿಸಿದರು. ಮನೆಯಲ್ಲಿಯೂ ಹೊಲದಲ್ಲಿಯೂ ಅವನಿಗಿದ್ದ ಎಲ್ಲದರ ಮೇಲೆಯೂ ಯೆಹೋವ ದೇವರ ಆಶೀರ್ವಾದವಿತ್ತು. ಅಧ್ಯಾಯವನ್ನು ನೋಡಿ |