Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:6 - ಕನ್ನಡ ಸತ್ಯವೇದವು J.V. (BSI)

6 ಅವನು ತನ್ನ ಆಸ್ತಿಯನ್ನೆಲ್ಲಾ ಯೋಸೇಫನ ವಶಕ್ಕೆ ಒಪ್ಪಿಸಿದನು; ಇವನು ತನ್ನ ಬಳಿಯಲ್ಲೇ ಇದ್ದದರಿಂದ ತಾನು ತಿನ್ನುವ ಆಹಾರ ಒಂದನ್ನೇ ಹೊರತು ಬೇರೆ ಯಾವದನ್ನೂ ಚಿಂತಿಸಲಿಲ್ಲ. ಇದಲ್ಲದೆ ಯೋಸೇಫನು ರೂಪದಲ್ಲಿಯೂ ಮುಖಭಾವದಲ್ಲಿಯೂ ಸುಂದರನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ತನ್ನ ಆಸ್ತಿಯನ್ನೆಲ್ಲಾ ಯೋಸೇಫನ ವಶಕ್ಕೆ ಒಪ್ಪಿಸಿದನು. ಇವನು ತನ್ನ ಬಳಿಯಲ್ಲೇ ಇದ್ದುದರಿಂದ ತಾನು ತಿನ್ನುವ ಆಹಾರ ಒಂದನ್ನೇ ಹೊರತು ಬೇರೆ ಯಾವ ವಿಷಯದಲ್ಲೂ ಚಿಂತಿಸುತ್ತಿರಲಿಲ್ಲ. ಯೋಸೇಫನು ರೂಪವಂತನೂ, ಸುಂದರನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪೋಟೀಫರನು ಹೀಗೆ ತನ್ನದನ್ನೆಲ್ಲ ಜೋಸೆಫನ ವಶಕ್ಕೆ ಒಪ್ಪಿಸಿ, ‘ಅವನು ಇದ್ದಾನಲ್ಲಾ’ ಎಂದುಕೊಂಡು, ತಾನು ತಿನ್ನುತ್ತಿದ್ದ ಆಹಾರ ಒಂದನ್ನು ಬಿಟ್ಟು, ಬೇರೆ ಏನನ್ನೂ ಕುರಿತು ಚಿಂತಿಸದೆ ಇದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಪೋಟೀಫರನು ತಾನು ಊಟಮಾಡುವ ಆಹಾರವೊಂದನ್ನು ಬಿಟ್ಟು ಉಳಿದೆಲ್ಲದರ ಜವಾಬ್ದಾರಿಯನ್ನು ಯೋಸೇಫನಿಗೆ ವಹಿಸಿ ನಿಶ್ಚಿಂತೆಯಿಂದ ಇದ್ದನು. ಯೋಸೇಫನು ನೋಡಲು ಸುಂದರನಾಗಿಯೂ ರೂಪವಂತನಾಗಿಯೂ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹೀಗಿರುವುದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ, ತನ್ನ ಊಟದ ವಿಷಯದಲ್ಲಿ ಹೊರತು ಬೇರೆ ಯಾವುದರ ವಿಷಯದಲ್ಲಿಯೂ ಚಿಂತಿಸದೆ ಇದ್ದನು. ಯೋಸೇಫನು ಸುರೂಪಿಯೂ ಸುಂದರನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:6
12 ತಿಳಿವುಗಳ ಹೋಲಿಕೆ  

ಪತಿಹೃದಯವು ಆಕೆಯಲ್ಲಿ ಭರವಸಪಡುವದು; ಅವನು ಕೊಳ್ಳೆಕೊಳ್ಳೆಯಾಗಿ ಸಂಪಾದಿಸುವನು.


ಅವನು ಕೆಂಬಣ್ಣದವನೂ ಸುಂದರನೇತ್ರನೂ ನೋಟಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ - ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ ಎಂದು ಆಜ್ಞಾಪಿಸಲು


ಲೇಯಾ ಎಂಬಾಕೆಯ ಕಣ್ಣುಗಳು ಕಾಂತಿಹೀನವಾಗಿದ್ದವು; ರಾಹೇಲಳು ರೂಪವತಿಯೂ ಲಾವಣ್ಯವತಿಯೂ ಆಗಿದ್ದಳು.


ಅವನು ಅವನಿಗೆ - ಭಲಾ! ನೀನು ಒಳ್ಳೇ ಆಳು; ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಕೆಯುಳ್ಳವನಾಗಿದ್ದದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು ಎಂದು ಹೇಳಿದನು.


ಆ ಸಮಯದಲ್ಲೇ ಮೋಶೆಯು ಹುಟ್ಟಿದನು. ಅವನು ದಿವ್ಯಸುಂದರನಾಗಿದ್ದನು; ಮತ್ತು ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.


ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು; ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾದವನು ಬಹಳವಾದದ್ದರಲ್ಲಿಯೂ ಅನ್ಯಾಯಗಾರನಾಗುವನು.


ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿದರು. ಐಗುಪ್ತ್ಯರು ಇಬ್ರಿಯರ ಸಹಪಂಕ್ತಿಯಲ್ಲಿ ಊಟಮಾಡುವದಿಲ್ಲ; ಅದು ಅವರಿಗೆ ಅಸಹ್ಯ.


ಯೆಹೋವನು ಅವನ ಸಂಗಡ ಇದ್ದು ಅವನು ನಡಿಸಿದ್ದೆಲ್ಲವನ್ನು ಕೈಗೂಡಿಸಿದ್ದರಿಂದ ಅವನ ವಶದಲ್ಲಿದ್ದ ಯಾವದೊಂದರ ವಿಷಯದಲ್ಲಿಯೂ ಸೆರೆಮನೆಯ ಯಜಮಾನನು ಏನೂ ಚಿಂತಿಸಲಿಲ್ಲ.


ಆದರೆ ಅವನು ಒಪ್ಪದೆ - ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿ ನಾನು ಇರುವದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೆ ಇದ್ದಾನೆ;


ಅವನ ಮೇಲೆ ದಯೆ ಇಟ್ಟು ಅವನನ್ನು ಸ್ವಂತ ಸೇವಕನನ್ನಾಗಿ ನೇವಿುಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು.


ಫಿಲಿಷ್ಟಿಯನು ಕೆಂಬಣ್ಣದವನೂ ಸುಂದರನೂ ಯೌವನಸ್ಥನೂ ಆದ ದಾವೀದನನ್ನು ನೋಡಿ ತಿರಸ್ಕಾರದಿಂದ ಅವನಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು