Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:9 - ಕನ್ನಡ ಸತ್ಯವೇದವು J.V. (BSI)

9 ಈ ಮನೆಯಲ್ಲಿ ಅವನೂ ನನಗಿಂತ ದೊಡ್ಡವನಲ್ಲ; ನೀನು ಅವನ ಧರ್ಮಪತ್ನಿಯಾದದರಿಂದ ನಿನ್ನನ್ನು ಮಾತ್ರ ನನಗೆ ಅಧೀನಮಾಡಲಿಲ್ಲ; ಹೀಗಿರುವಲ್ಲಿ ನಾನು ಇಂಥಾ ಮಹಾದುಷ್ಕೃತ್ಯವನ್ನು ನಡಿಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ ಎಂದು ತನ್ನ ದಣಿಯ ಹೆಂಡತಿಗೆ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?” ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ಮನೆಯಲ್ಲಿ ನನಗಿಂತ ಹೆಚ್ಚಿನ ಅಧಿಕಾರ ಪಡೆದವರು ಒಬ್ಬರೂ ಇಲ್ಲ; ನಿಮ್ಮನ್ನು ಬಿಟ್ಟು ಮಿಕ್ಕ ಎಲ್ಲವನ್ನು ನನಗೆ ಅಧೀನಮಾಡಿದ್ದಾರೆ. ನೀವು ಅವರ ಧರ್ಮಪತ್ನಿ ಅಲ್ಲವೆ? ಹೀಗಿರುವಲ್ಲಿ, ನಾನು ಇಂತಹ ಮಹಾದುಷ್ಕೃತ್ಯವೆಸಗಿ ದೇವರಿಗೆ ವಿರುದ್ಧ ಹೇಗೆ ಪಾಪಮಾಡಲಿ?” ಎಂದು ಆಕೆಗೆ ಉತ್ತರಕೊಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನ ಧಣಿಯು ಈ ಮನೆಯ ಸರ್ವಾಧಿಕಾರವನ್ನು ನನಗೆ ಕೊಟ್ಟಿದ್ದರೂ ತನ್ನ ಧರ್ಮಪತ್ನಿಯಾದ ನಿನ್ನನ್ನು ನನಗೆ ಅಧೀನಪಡಿಸಿಲ್ಲ. ಹೀಗಿರಲು ಇಂಥಾ ಮಹಾ ದುಷ್ಕೃತ್ಯವನ್ನು ನಡೆಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈ ಮನೆಯಲ್ಲಿ ನನಗಿಂತ ದೊಡ್ಡವನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವುದರಿಂದ, ನಿನ್ನನ್ನು ಹೊರತುಪಡಿಸಿ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ಮಹಾ ದುಷ್ಕೃತ್ಯ ಮಾಡಿ, ದೇವರಿಗೆ ವಿರೋಧವಾಗಿ ಪಾಪ ಮಾಡುವುದು ಹೇಗೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:9
34 ತಿಳಿವುಗಳ ಹೋಲಿಕೆ  

ಆಗ ದಾವೀದನು ನಾತಾನನಿಗೆ - ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ ಎಂದು ಹೇಳಿದನು. ನಾತಾನನು ಅವನಿಗೆ - ಯೆಹೋವನು ನಿನ್ನ ಪಾಪವನ್ನು ಕ್ಷವಿುಸಿದ್ದಾನೆ, ನೀನು ಸಾಯುವದಿಲ್ಲ;


ಮೂರನೆಯ ದಿನದಲ್ಲಿ ಯೋಸೇಫನು ಅವರನ್ನು ಕರಸಿ - ನಾನು ದೇವರಿಗೆ ಭಯಪಡುವವನು; ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.


ಅದಕ್ಕೆ ದೇವರು - ನೀನು ಇದನ್ನು ಯರ್ಥಾರ್ಥಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನಾನಂತೂ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.


ದೇವರಿಂದ ಹುಟ್ಟಿದವನು ಪಾಪಮಾಡನು; ದೇವರ ಜೀವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡುವವನಾಗಿರಲಾರನು.


ತಿಳಿಯದೆ ಪೆಟ್ಟುಗಳಿಗೆ ಯೋಗ್ಯವಾದದ್ದನ್ನು ನಡಿಸಿದವನು ಸ್ವಲ್ಪ ಪೆಟ್ಟು ತಿನ್ನುವನು. ಯಾವನಿಗೆ ಬಹಳವಾಗಿ ಕೊಟ್ಟದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವದು; ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳುವರು.


ನಿನಗೇ ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದಲ್ಲಾ.


ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಲ್ಲವೇ.


ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು - ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ನ್ಯಾಯನಿವಾಸವೆನಿಸಿಕೊಂಡ ಯೆಹೋವನಿಗೆ, ಹೌದು, ತಮ್ಮ ಪಿತೃಗಳ ನಿರೀಕ್ಷೆಯಾದ ಯೆಹೋವನಿಗೆ ಪಾಪಮಾಡಿದರಲ್ಲಾ ಅಂದುಕೊಂಡರು.


ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನಿನ್ನನ್ನು ಭೂವಿುಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನಗೆ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರುಷ ಸಾಯುವಿ ಎಂದು ಹೇಳಿದನು.


ದೇವರಿಂದ ಬರುವ ವಿಪತ್ತಿಗೆ ಅಂಜಿಕೊಂಡಿದ್ದೆನಷ್ಟೆ, ಆತನ ಪ್ರಭಾವದ ದೆಸೆಯಿಂದ ನಾನು ಇಂಥ ಕೃತ್ಯವನ್ನು ಮಾಡುವದಕ್ಕಾಗಲಿಲ್ಲ.


ದುಃಖಕಾಲ ತೀರಿದನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು; ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನ ಈ ಕೃತ್ಯವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿತ್ತು.


ಆದರೆ ನೀವು ಹಾಗೆ ಮಾಡದೆಹೋದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ; ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವದು ಎಂದು ತಿಳಿದುಕೊಳ್ಳಿರಿ.


ಯಾವನಾದರೂ ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ತನ್ನ ಬಳಿಯಲ್ಲಿ ಇಡಲ್ಪಟ್ಟ ಅಡವಿನ ವಿಷಯದಲ್ಲಾಗಲಿ ತಾನು ಮಾಡಿದ ಕಳವಿನ ವಿಷಯದಲ್ಲಾಗಲಿ ಸುಳ್ಳಾಡುವದರಿಂದಲೋ ಮತ್ತೊಬ್ಬನನ್ನು ಮೋಸಗೊಳಿಸಿದ್ದರಿಂದಲೋ


ವ್ಯಭಿಚಾರಿಯೋ ಕೇವಲ ಬುದ್ಧಿಶೂನ್ಯನು, ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.


ನನಗಿಂತ ಮುಂಚೆಯಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ [ದಿನಕ್ಕೆ] ನಾಲ್ವತ್ತು ರೂಪಾಯಿಯ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡಿಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವದರಿಂದ ಹಾಗೆ ಮಾಡದೆ ಆ ಗೋಡೆ ಕಟ್ಟುವದರಲ್ಲಿ ನಿರತನಾಗಿದ್ದೆನು.


ನಾಯಿಗಳಂತಿರುವವರೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.


ಗಂಡಹೆಂಡರ ಸಂಬಂಧವು ನಿಷ್ಕಳಂಕವಾಗಿರಬೇಕು. ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳುಕೊಳ್ಳಿರಿ.


ಎದುರುಮಾತನ್ನಾಡದೆ ಯಾವದನ್ನೂ ಕದ್ದಿಟ್ಟುಕೊಳ್ಳದೆ ಪೂರಾ ನಂಬಿಗಸ್ತರೆಂದು ಹೆಸರುಹೊಂದಿ ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ ಅಲಂಕಾರವಾಗಿರಬೇಕೆಂದು ಬೋಧಿಸು.


ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವದು, ಯಾವನು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು.


ನಾನು - ನನ್ನಂಥ ಪುರುಷನು ಓಡಿಹೋಗುವದು ಯೋಗ್ಯವೋ? ಇದಲ್ಲದೆ ನನ್ನಂಥವನು ಪ್ರಾಣ ರಕ್ಷಣೆಗಾಗಿ ಪವಿತ್ರಸ್ಥಾನವನ್ನು ಪ್ರವೇಶಿಸುವನೇ? ನಾನು ಬರುವದಿಲ್ಲ ಎಂದು ಉತ್ತರಕೊಟ್ಟೆನು.


ಯಾವನಾದರೂ ಪರಪತ್ನಿಯನ್ನು ಸಂಗವಿುಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು; ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು; ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಎಂದು ಹೇಳಿದನು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರೀ ಸೇವಕನಿಗೆ -


ಆದರೆ ರಾತ್ರಿಯಲ್ಲಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು - ನೀನು ಆ ಸ್ತ್ರೀಯನ್ನು ಸೇರಿಸಿಕೊಂಡದರಿಂದ ಸಾಯತಕ್ಕವನಾಗಿದ್ದಿ; ಆಕೆ ಮುತ್ತೈದೆ ಅಂದನು.


ಆದರೆ ಸೊದೋಮ್ ಪಟ್ಟಣದವರು ದುಷ್ಟರೂ ಯೆಹೋವನಿಗೆ ಮಹಾಪರಾಧಿಗಳೂ ಆಗಿದ್ದರು.


ಆಮೇಲೆ ಅವನು ಅಬ್ರಹಾಮನನ್ನು ಕರಿಸಿ - ನೀನು ನಮಗೆ ಮಾಡಿದ್ದೇನು? ನಾನು ಯಾವ ತಪ್ಪು ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ಮಾಡಬಾರದ ಕಾರ್ಯಗಳನ್ನು ನನಗೆ ಮಾಡಿದೆ ಎಂದು ಹೇಳಿ -


ಆಕೆ ಯೋಸೇಫನ ಸಂಗಡ ಪ್ರತಿ ದಿನವೂ ಈ ಮಾತನ್ನು ಆಡಿದಾಗ್ಯೂ ಅವನು ಅದಕ್ಕೆ ಕಿವಿಗೊಡದೆ ಆಕೆಯಲ್ಲಿ ಸಂಗಮಮಾಡುವದಕ್ಕಾಗಲಿ ಆಕೆಯ ಬಳಿಯಲ್ಲಿರುವದಕ್ಕಾಗಲಿ ಒಪ್ಪಿಕೊಳ್ಳಲೇ ಇಲ್ಲ.


ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು, ಯಾವದಂದರೆ, ಕೆಟ್ಟ ಹೆಂಗಸೇ. ಅವಳು ಬೋನು, ಅವಳ ಹೃದಯ ಬಲೆ, ಅವಳ ಕೈ ಪಾಶ; ದೇವರು ಒಲಿದವನು ಇವಳಿಂದ ತಪ್ಪಿಸಿಕೊಳ್ಳುವನು; ಪಾಪಿಯೋ ಅವಳ ಕೈಗೆ ಸಿಕ್ಕಿಬೀಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು