Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:15 - ಕನ್ನಡ ಸತ್ಯವೇದವು J.V. (BSI)

15 ಅದಕ್ಕೆ ಯೆಹೋವನು - ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವದು ಎಂದು ಹೇಳಿ ಅವನನ್ನು ಕಂಡವರು ಕೊಲ್ಲಕೂಡದಂತೆ ಅವನ ಮೇಲೆ ಒಂದು ಗುರುತಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದಕ್ಕೆ ಸರ್ವೇಶ್ವರ, “ಇಲ್ಲ, ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳ್ಮಡಿ ದಂಡನೆ ಆಗುವುದು,"ಎಂದು ಹೇಳಿ, ಅವನನ್ನು ಕಂಡವರು ಕೊಲ್ಲದಂತೆ ಅವನ ಮೇಲೆ ಒಂದು ಗುರುತನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅದಕ್ಕೆ ಯೆಹೋವನು ಕಾಯಿನನಿಗೆ, “ಆ ರೀತಿ ಆಗದಂತೆ ನಾನು ನೋಡಿಕೊಳ್ಳುವೆ! ಕಾಯಿನನೇ, ನಿನ್ನನ್ನು ಯಾವನಾದರೂ ಕೊಂದರೆ, ನಾನು ಅವನನ್ನು ಏಳರಷ್ಟು ಶಿಕ್ಷಿಸುವೆನು” ಎಂದು ಹೇಳಿದನು. ಆಮೇಲೆ ಯೆಹೋವನು ಕಾಯಿನನ ಮೇಲೆ ಒಂದು ಗುರುತಿಟ್ಟನು. ಅವನನ್ನು ಯಾರೂ ಕೊಲ್ಲಕೂಡದೆಂದು ಆ ಗುರುತು ಸೂಚಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ಯೆಹೋವ ದೇವರು ಅವನಿಗೆ, “ಹಾಗಲ್ಲ, ಕಾಯಿನನನ್ನು ಕೊಲ್ಲುವವನ ಮೇಲೆ ಏಳರಷ್ಟು ಪ್ರತೀಕಾರವಿರುವುದು,” ಎಂದು ಹೇಳಿದರು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವ ದೇವರು ಅವನ ಮೇಲೆ ಒಂದು ಗುರುತನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:15
15 ತಿಳಿವುಗಳ ಹೋಲಿಕೆ  

ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು ಎಂದು ಅಪ್ಪಣೆಕೊಟ್ಟನು.


ಸ್ವಾವಿುಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ ಏಳರಷ್ಟು ಪ್ರತಿಫಲವು ತುಂಬಿರುವಂತೆಮಾಡು.


ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ ಎಂಬದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವದಾದರೆ ಲೆಮೆಕನನ್ನು ಹೊಡೆಯುವವನಿಗೆ ಎಪ್ಪತ್ತೇಳರಷ್ಟಾಗುವದಲ್ಲವೇ.


ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ; ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ನಮಸ್ಕಾರಮಾಡುವವರೂ ಅದರ ಹೆಸರನ್ನು ಸೂಚಿಸುವ ಗುರುತನ್ನು ಹಾಕಿಸಿಕೊಂಡಿರುವವರೆಲ್ಲರೂ ಹಗಲಿರುಳು ಉಪಶಮನವಿಲ್ಲದೆ ಯಾತನೆಪಡುವರು ಎಂದು ಮಹಾ ಶಬ್ದದಿಂದ ಹೇಳಿದನು.


ಅವನ ಹಿಂದೆ ಮೂರನೆಯವನಾದ ಒಬ್ಬ ದೇವದೂತನು ಬಂದು - ಯಾವನಾದರೂ ಮೊದಲನೆಯ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕಾರಮಾಡಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಗುರುತುಹಾಕಿಸಿಕೊಂಡರೆ


ಆಗ ಯೇಸು ಅವನಿಗೆ - ನಿನ್ನ ಕತ್ತಿಯನ್ನು ತಿರಿಗಿ ಒರೆಯಲ್ಲಿ ಸೇರಿಸು; ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ಸಾಯುವರು.


ಯೆಹೋವನು ಅವನನ್ನು ಕುರಿತು - ಈ ಮಗುವಿಗೆ ಇಜ್ರೇಲ್ ಎಂಬ ಹೆಸರಿಡು; ಇಜ್ರೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹುವಂಶದವರಿಗೆ ಮುಯ್ಯಿತೀರಿಸಿ ಇಸ್ರಾಯೇಲ್‍ಜನಾಂಗವನ್ನು ನಿರ್ನಾಮಮಾಡುವೆನು;


ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ; ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. ನಿನ್ನ ಸೇನಾಬಲದಿಂದ ಚದರಿಸಿ ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು.


ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಯೆಹೋವನನ್ನು ರೇಗಿಸಿ ಆತನ ದೃಷ್ಟಿಯಲ್ಲಿ ದ್ರೋಹಿಯಾದದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದದರಿಂದಲೂ ಯೆಹೋವನು ಹನಾನೀಯ ಮಗನಾದ ಯೇಹುವಿನ ಮುಖಾಂತರವಾಗಿ ಅವನಿಗೂ ಅವನ ಕುಟುಂಬಕ್ಕೂ ದುರ್ಗತಿಯನ್ನು ಮುಂತಿಳಿಸಿದನು.


ನಾನು ನಿಮಗೆ ವಿರೋಧವಾಗಿ ಕೋಪದಿಂದ ನಡೆಯುವವನಾಗಿ ನಿಮ್ಮ ಪಾಪಗಳ ನಿಮತ್ತ ಏಳರಷ್ಟಾಗಿ ಶಿಕ್ಷಿಸುವೆನು.


ನಾನು ನಿಮಗೆ ವಿರೋಧವಾಗಿ ನಡೆಯುವೆನು; ನಿಮ್ಮ ಪಾಪಗಳ ನಿವಿುತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು.


ನೀವು ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿವಿುತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು.


ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆಹೋದರೆ ನಾನು ನಿಮ್ಮ ಪಾಪಗಳ ನಿವಿುತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು.


ಅವನ ತಪ್ಪು ಬೈಲಾದರೆ ಅವನು ಏಳರಷ್ಟು ಕೊಡಬೇಕಾಗುವದು, ಅಥವಾ ತನ್ನ ಮನೆಯ ಆಸ್ತಿಯನ್ನೆಲ್ಲಾ ತೆತ್ತೇ ತೀರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು