Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:16 - ಕನ್ನಡ ಸತ್ಯವೇದವು J.V. (BSI)

16 ಕಾಯಿನನು ಯೆಹೋವನ ಸನ್ನಿಧಾನದಿಂದ ಹೊರಟು ನೋದು ಎಂಬ ದೇಶದಲ್ಲಿ ವಾಸಿಸಿದನು; ಅದು ಏದೆನ್ ಸೀಮೆಗೆ ಮೂಡಲಲ್ಲಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಕಾಯಿನನು ಯೆಹೋವನ ಸನ್ನಿಧಿಯಿಂದ ಹೊರಟು ಹೋಗಿ ಏದೆನ್ ಪೂರ್ವದಲ್ಲಿದ್ದ ನೋದ್ ಎಂಬ ದೇಶದಲ್ಲಿ ನೆಲೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕಾಯಿನನು ಸರ್ವೇಶ್ವರ ಸ್ವಾಮಿಯ ಸಾನ್ನಿಧ್ಯದಿಂದ ಹೊರಟುಹೋಗಿ ಏದೆನ್ ನಾಡಿಗೆ ಪೂರ್ವಕ್ಕಿರುವ “ಅಲೆನಾಡು" ಎಂಬ ನಾಡಿನಲ್ಲಿ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಕಾಯಿನನು ಯೆಹೋವನ ಪ್ರಸನ್ನತೆಯಿಂದ ದೂರ ಹೊರಟುಹೋದನು. ಕಾಯಿನನು ನೋದು ಎಂಬ ನಾಡಿನಲ್ಲಿ ವಾಸಿಸಿದನು. ಅದು ಏದೆನ್ ತೋಟಕ್ಕೆ ಪೂರ್ವದಲ್ಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಕಾಯಿನನು ಯೆಹೋವ ದೇವರ ಸನ್ನಿಧಿಯಿಂದ ಹೊರಟುಹೋಗಿ, ಏದೆನ್ ಸೀಮೆಗೆ ಪೂರ್ವದಲ್ಲಿದ್ದ ನೋದು ಎಂಬ ದೇಶದಲ್ಲಿ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:16
19 ತಿಳಿವುಗಳ ಹೋಲಿಕೆ  

ಯೆಹೋವನು ಯೆರೂಸಲೇವಿುನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರಿಗಿಬಿದ್ದದರಿಂದ


ಇಗೋ, ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪಿತೃಗಳಿಗೆ ದಯಪಾಲಿಸಿದ ಪಟ್ಟಣವನ್ನೂ ಭಾರವೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಟ್ಟು


ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಕುರುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.


ಯೆಹೋವನು ಯೆರೂಸಲೇವಿುನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರೋಧವಾಗಿ ತಿರುಗಿಬಿದ್ದದರಿಂದ ಅವನು ಚಿದ್ಕೀಯನ ಆಳಿಕೆಯ.


ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್ ಇಸಾಕ್ ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಸಿ ಅವರಿಗೆ ದಯೆತೋರಿಸಿದನು; ಕರುಳು ಮರುಗಿದವನಾಗಿ ಅವರಿಗೆ ಪ್ರಸನ್ನನಾದನು.


ಆ ಗುಡುಗುವಿುಂಚುಗಳನ್ನೂ ತುತೂರಿ ಧ್ವನಿಯಾಗುತ್ತಿರುವದನ್ನೂ ಬೆಟ್ಟದಿಂದ ಹೊಗೆ ಹೊರಡುವದನ್ನೂ ಜನರೆಲ್ಲರು ನೋಡಿ ನಡುಗುತ್ತಾ ದೂರದಲ್ಲಿ ನಿಂತುಕೊಂಡರು.


ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಹೊರಡಿಸುತ್ತೀಯಲ್ಲಾ; ನಿನ್ನ ಸಾನ್ನಿಧ್ಯವು ತಪ್ಪಿತು; ನಾನು ಲೋಕದಲ್ಲಿ ಅಲೆಯುವವನೂ ದೇಶಭ್ರಷ್ಟನೂ ಆಗಬೇಕಾಯಿತು. ಇದಲ್ಲದೆ ನನ್ನನ್ನು ಕಂಡವರು ಕೊಲ್ಲುವರು ಎಂದು ಹೇಳಿದನು.


ತರುವಾಯ ಯೆಹೋವದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಸ್ತ್ರೀಪುರುಷರು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.


ನಾವು ನಿಮ್ಮಲ್ಲಿಗೆ ಬಂದಾಗ ನೀವು ಎಂಥ ಮನಸ್ಸಿನಿಂದ ನಮ್ಮ ಬೋಧನೆಯನ್ನು ಕೇಳಿದಿರೋ ಅದನ್ನು ಕುರಿತು ಅಲ್ಲಿಯ ಜನರು ತಾವೇ ಹೇಳುತ್ತಾರೆ. ಅದು ಮಾತ್ರವಲ್ಲದೆ ನೀವು ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂತಲೂ


ಆತನು ಲೋಕದಲ್ಲಿ ಇದ್ದನು; ಮತ್ತು ಲೋಕವು ಆತನ ಮೂಲಕವಾಗಿ ಉಂಟಾಯಿತು; ಆದರೂ ಲೋಕವು ಆತನನ್ನು ಅರಿಯಲಿಲ್ಲ.


ಆತನ ಮೂಲಕವಾಗಿ ಸಮಸ್ತವು ಉಂಟಾಯಿತು; ಉಂಟಾಗಿರುವ ವಸ್ತುಗಳಲ್ಲಿ ಆತನಿಲ್ಲದೆ ಒಂದಾದರೂ ಉಂಟಾಗಲಿಲ್ಲ.


ಅದಕ್ಕೆ ನೀವು - ನಿನ್ನ ಸನ್ನಿಧಿಯಲ್ಲಿ ನಾವು ಊಟಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದಿ ಎಂದು ಹೇಳುವದಕ್ಕೆ ತೊಡಗೀರಿ;


ಯಾಕಂದರೆ ಇಬ್ಬರು ಮೂವರು ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬಂದಿರುತ್ತಾರೋ ಅಲ್ಲಿ ಅವರ ನಡುವೆ ನಾನು ಇದ್ದೇನೆ ಅಂದನು.


ಹೊಗೆಯು [ಗಾಳಿಯಿಂದ] ಹೇಗೋ ಹಾಗೆ ಅವರು ಆತನಿಂದ ಹಾರಿಹೋಗುವರು; ಬೆಂಕಿಯ ಮುಂದೆ ಮೇಣವು ಕರಗಿ ಲಯವಾಗಿ ಹೋಗುವಂತೆ ದೇವರ ಎದುರಿನಲ್ಲಿ ದುಷ್ಟರು ನಾಶವಾಗಿ ಹೋಗುವರು.


ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ; ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವದು.


ಜೇನೂ ಮೊಸರೂ ಸಮೃದ್ಧಿಯಾಗಿ ಹರಿಯುವ ನದಿಗಳನ್ನು ಅವನು ನೋಡುವದೇ ಇಲ್ಲ.


ಯೆಹೋವನು ಸೈತಾನನಿಗೆ - ಅವನ ಸ್ವಾಸ್ತ್ಯವೆಲ್ಲಾ ನಿನ್ನ ಕೈಯಲ್ಲಿದೆ, ನೋಡು. ಆದರೆ ಅವನ ಮೈ ಮೇಲೆ ಮಾತ್ರ ಕೈಹಾಕಬೇಡ ಎಂದು ಅಪ್ಪಣೆ ಕೊಟ್ಟನು. ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟುಹೋದನು.


ಕಾಯಿನನು ತನ್ನ ಹೆಂಡತಿಯನ್ನು ಕೂಡಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ ಎಂದು ತನ್ನ ಮಗನ ಹೆಸರಿಟ್ಟನು. ಹನೋಕನಿಂದ ಈರಾದನು ಹುಟ್ಟಿದನು.


ಆದರೆ ಯೋನನು ಯೆಹೋವನ ಸನ್ನಿಧಿಗೆ ತಪ್ಪಿಸಿಕೊಳ್ಳುವ ಹಾಗೆ ತಾರ್ಷೀಷಿಗೆ ಓಡಿಹೋಗಬೇಕೆಂದು ಹೊರಟು ಯೊಪ್ಪಕ್ಕೆ ಇಳಿದು ಅಲ್ಲಿ ತಾರ್ಷೀಷಿಗೆ ತೆರಳುವ ಹಡಗನ್ನು ಕಂಡು ಬಾಡಿಗೆಕೊಟ್ಟು ಯೆಹೋವನ ಸನ್ನಿಧಿಯಿಂದ ತಾರ್ಷೀಷಿಗೆ ಪ್ರಯಾಣಮಾಡಬೇಕೆಂದು ಹಡಗಿನವರೊಡನೆ ಅದನ್ನು ಹತ್ತಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು