ಆದಿಕಾಂಡ 4:17 - ಕನ್ನಡ ಸತ್ಯವೇದವು J.V. (BSI)17 ಕಾಯಿನನು ತನ್ನ ಹೆಂಡತಿಯನ್ನು ಕೂಡಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ ಎಂದು ತನ್ನ ಮಗನ ಹೆಸರಿಟ್ಟನು. ಹನೋಕನಿಂದ ಈರಾದನು ಹುಟ್ಟಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಕಾಯಿನನು ತನ್ನ ಹೆಂಡತಿಯನ್ನು ಸಂಗಮಿಸಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಕಾಯಿನನು ತನ್ನ ಹೆಂಡತಿಯ ಜೊತೆ ಕೂಡಲು ಆಕೆ ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ತಾನು ಕಟ್ಟಿದ ಊರಿಗೆ ಕಾಯಿನನು ‘ಹನೋಕ’ ಎಂದು ತನ್ನ ಮಗನ ಹೆಸರನ್ನೇ ಇಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಕಾಯಿನ ಮತ್ತು ಅವನ ಹೆಂಡತಿಗೆ ಒಂದು ಗಂಡುಮಗು ಹುಟ್ಟಿತು. ಅವರು ಆ ಮಗುವಿಗೆ ಹನೋಕ ಎಂದು ಹೆಸರಿಟ್ಟರು. ಕಾಯಿನನು ಒಂದು ಊರನ್ನು ಕಟ್ಟಿದನು. ಆ ಊರಿಗೆ ಅವನು ತನ್ನ ಮಗನ ಹೆಸರನ್ನೇ ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಕಾಯಿನನು ತನ್ನ ಹೆಂಡತಿಯನ್ನು ಕೂಡಲು, ಅವಳು ಗರ್ಭಿಣಿಯಾಗಿ ಹನೋಕನನ್ನು ಪಡೆದಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ, ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರನ್ನಿಟ್ಟನು. ಅಧ್ಯಾಯವನ್ನು ನೋಡಿ |