ಆದಿಕಾಂಡ 4:26 - ಕನ್ನಡ ಸತ್ಯವೇದವು J.V. (BSI)26 ತರುವಾಯ ಸೇತನು ಸಹ ಮಗನನ್ನು ಪಡೆದು ಅವನಿಗೆ ಎನೋಷ್ ಎಂಬ ಹೆಸರಿಟ್ಟನು; ಆ ಕಾಲದಲ್ಲಿ ಯೆಹೋವ ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವದಕ್ಕೆ ಪ್ರಾರಂಭವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ತರುವಾಯ ಸೇತನು ಸಹ ಒಬ್ಬ ಮಗನನ್ನು ಪಡೆದು ಅವನಿಗೆ “ಏನೋಷ್” ಎಂದು ಹೆಸರಿಟ್ಟನು. ಜನರು “ಸರ್ವೇಶ್ವರ” ಎಂಬ ಹೆಸರನ್ನು ಆರಾಧಿಸುವುದಕ್ಕೆ ಪ್ರಾರಂಭಿಸಿದ್ದು ಆ ಕಾಲದಲ್ಲಿಯೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಸೇತನು ಒಬ್ಬ ಮಗನನ್ನು ಪಡೆದನು. ಆ ಮಗುವಿಗೆ ಅವನು ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು ಯೆಹೋವನ ಮೇಲೆ ಭರವಸೆ ಇಡಲಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಸೇತನಿಗೆ ಒಬ್ಬ ಮಗನು ಹುಟ್ಟಿದನು. ಅವನಿಗೆ ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು, ಯೆಹೋವ ಎಂಬ ಹೆಸರನ್ನು ಆರಾಧಿಸುವುದಕ್ಕೆ ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿ |