Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:7 - ಕನ್ನಡ ಸತ್ಯವೇದವು J.V. (BSI)

7 ಒಳ್ಳೇ ಕೆಲಸ ಮಾಡಿದರೆ ನಿನ್ನ ತಲೆ ಎತ್ತಲ್ಪಡುವದಲ್ಲವೇ; ಅಲ್ಲದಿದ್ದರೆ ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವದು; ಆದರೂ ನೀನು ಅದನ್ನು ವಶಮಾಡಿಕೊಳ್ಳಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀನು ಒಳಿತನ್ನು ಮಾಡಿದ್ದರೆ ತಲೆ ಎತ್ತುತ್ತಿದ್ದೆ; ಕೆಡುಕನ್ನು ಮಾಡಿದ್ದರಿಂದ ಪಾಪವು ಹೊಸ್ತಿಲಲ್ಲಿ ಹೊಂಚುಹಾಕುತ್ತಿದೆ; ಅದು ನಿನ್ನನ್ನು ಬಯಸುತ್ತಿದೆ. ನೀನು ಅದನ್ನು ಜಯಿಸಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ಒಳ್ಳೆಯ ಕಾರ್ಯಗಳನ್ನು ಮಾಡಿದರೆ ನಾನು ನಿನ್ನನ್ನು ಸ್ವೀಕರಿಸಿಕೊಳ್ಳುವೆನು. ಆದರೆ ನೀನು ಕೆಟ್ಟಕಾರ್ಯಗಳನ್ನು ಮಾಡಿದರೆ, ಆ ಪಾಪವು ನಿನ್ನೊಂದಿಗಿರುತ್ತದೆ. ನಿನ್ನ ಪಾಪವು ನಿನ್ನನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಇಷ್ಟಪಡುತ್ತದೆ. ಆದರೆ ನೀನು ಆ ಪಾಪವನ್ನು ನಿನ್ನ ಹಿಡಿತದಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀನು ಒಳ್ಳೆಯದನ್ನು ಮಾಡಿದರೆ, ನೀನು ಸ್ವೀಕಾರವಾಗುತ್ತಿದ್ದೆ ಅಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ, ಬಾಗಿಲಲ್ಲಿ ಪಾಪವು ಹೊಂಚಿಕೊಂಡಿರುವುದು ಮತ್ತು ಅದು ನಿನ್ನನ್ನು ನುಂಗಲು ಬಯಸುತ್ತದೆ. ಆದರೂ ನೀನು ಅದರ ಮೇಲೆ ಅಧಿಕಾರ ಮಾಡಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:7
33 ತಿಳಿವುಗಳ ಹೋಲಿಕೆ  

ಆಮೇಲೆ ಆಶೆಯು ಬಸುರಾಗಿ ಪಾಪವನ್ನು ಹೆರುತ್ತದೆ; ಪಾಪವು ತುಂಬಾ ಬೆಳೆದು ಮರಣವನ್ನು ಹಡೆಯುತ್ತದೆ.


ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ತಾನು ನೀತಿವಂತನೆಂದು ಸಾಕ್ಷಿಹೊಂದಿದನು; ದೇವರು ಅವನ ಕಾಣಿಕೆಗಳನ್ನು ಅಂಗೀಕಾರಮಾಡಿದ್ದೇ ಆ ಸಾಕ್ಷಿ. ಅವನು ಸತ್ತಿದ್ದರೂ ಅವನ ನಂಬಿಕೆಯ ಮೂಲಕ ಇನ್ನೂ ಮಾತಾಡುತ್ತಾನೆ.


ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; [ನಂಬಿಕೆಯೆಂಬ] ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ.


ಆದರೆ ನೀವು ಹಾಗೆ ಮಾಡದೆಹೋದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ; ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವದು ಎಂದು ತಿಳಿದುಕೊಳ್ಳಿರಿ.


ಆದದರಿಂದ ಸಹೋದರರೇ, ದೇವರ ಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವದೇನಂದರೆ - ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ ಮೆಚ್ಚಿಗೆಯಾಗಿಯೂ ಇರುವ ಸಜೀವಯಜ್ಞವಾಗಿ ಅರ್ಪಿಸಿರಿ; ಇದೇ ನಿಮ್ಮ ವಿವೇಕಪೂರ್ವಕವಾದ ಆರಾಧನೆಯು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, [ಈ ಸೇವೆಯು] ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ಛೀಗುಟ್ಟುತ್ತೀರಿ; ಕಳವಿನ ಪಶುವನ್ನೂ ಕುಂಟಾದದ್ದನ್ನೂ ರೋಗಿಯಾದದ್ದನ್ನೂ ತಂದೊಪ್ಪಿಸುತ್ತೀರಿ; ಇಂಥ ನೈವೇದ್ಯವನ್ನು ತಂದೊಪ್ಪಿಸುತ್ತಿರುವಲ್ಲಿ ನಾನು ಅದನ್ನು ನಿಮ್ಮ ಕೈಯಿಂದ ಸ್ವೀಕರಿಸಲೋ; ಇದು ಯೆಹೋವನ ನುಡಿ.


ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವದು ಮತ್ತೂ ಅಸಹ್ಯ.


ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು [ದೇವಾಲಯದ] ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೇದು! ನಾನು ನಿಮಗೆ ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ ರೋಗದ ಪಶುವನ್ನೂ ಅರ್ಪಿಸುವದು ದೋಷವಲ್ಲವೆಂದು ನಂಬುತ್ತೀರೋ? ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಂಥದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು;


ದೇವರು ಪಕ್ಷಪಾತಿಯಲ್ಲ, ಯಾವ ಜನರಲ್ಲಿಯಾದರೂ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.


ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.


ನೀವು ಶೆಬದ ಧೂಪವನ್ನೂ ದೂರದೇಶದ ಒಳ್ಳೆ ಬಜೆಯನ್ನೂ ನನಗೆ ಅರ್ಪಿಸುವದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಲ್ಲ.


ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವದು ಅಧರ್ಮ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.


ಈಗ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ; ನನ್ನ ದಾಸನಾದ ಯೋಬನು ನಿಮ್ಮ ಪಕ್ಷವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ ಎಂದು ಹೇಳಿದನು.


ಆಮೇಲೆ ಸ್ತ್ರೀಗೆ - ನೀನು ಗರ್ಭಿಣಿಯಾಗಿರುವ ಕಾಲದಲ್ಲಿ ಬಹು ಸಂಕಟಪಡಬೇಕೆಂದು ನಾನು ನೇವಿುಸಿದ್ದೇನೆ; ಕಷ್ಟದಿಂದಲೇ ಮಕ್ಕಳನ್ನು ಹೆರುವಿ; ಗಂಡನ ಮೇಲೆ ನಿನಗೆ ಆಶೆಯಿರುವದು; ಅವನು ನಿನಗೆ ಒಡೆಯನಾಗುವನು. ಎಂದು ಹೇಳಿದನು.


ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಡುತ್ತೇನೆ. ನಿನ್ನ ದೇವರಾದ ಯೆಹೋವನು ನಿನಗೆ ಪ್ರಸನ್ನನಾಗಲಿ ಎಂದು ಹೇಳಿದನು.


ಅದಕ್ಕಾತನು - ಈ ವಿಷಯದಲ್ಲಿಯೂ ನಿನಗೆ ಅನುಗ್ರಹಮಾಡಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡಹುವದಿಲ್ಲ.


ಆ ದಿನಗಳು ನನ್ನ ಜೀವಮಾನದ ಸುಗ್ಗೀ ಕಾಲವು, ದೇವರ ಸ್ನೇಹವು ನನ್ನ ಗುಡಾರವನ್ನು ಆವರಿಸಿಕೊಂಡಿತ್ತು.


ಇದಲ್ಲದೆ ಇವನು ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವದಕ್ಕಾಗಿ ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.


ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪಗಳನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.


ಅಧರ್ಮವು ನಿನ್ನ ಕೈಯಲ್ಲಿದ್ದರೆ ಅದನ್ನು ದೂರಮಾಡಿಬಿಡು; ಅನ್ಯಾಯವು ನಿನ್ನ ಗುಡಾರಗಳಲ್ಲಿ ವಾಸಿಸದಿರಲಿ.


ಆಗ ನೀನು ನಿಷ್ಕಳಂಕವಾದ ಮುಖವನ್ನೆತ್ತಿಕೊಂಡು ಸ್ಥಿರಚಿತ್ತನೂ ನಿರ್ಭಯನೂ ಆಗಿರುವಿ.


ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು - ಯೆಹೋವನು ಹೀಗನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು; ನಾನು ಕೋಪ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವಾಸ್ತ್ಯದವರಲ್ಲಿ ಉಳಿದವರ ಅಪರಾಧವನ್ನು ಕ್ಷವಿುಸುವವನೂ ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ; ಹೌದು, ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ, ಕರುಣೆಯೇ ಆತನಿಗೆ ಇಷ್ಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು