Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:9 - ಕನ್ನಡ ಸತ್ಯವೇದವು J.V. (BSI)

9 ಯೆಹೋವನು ಕಾಯಿನನನ್ನು - ನಿನ್ನ ತಮ್ಮನಾದ ಹೇಬೆಲನು ಎಲ್ಲಿ ಎಂದು ಕೇಳಲು ಅವನು - ನಾನರಿಯೆ; ನನ್ನ ತಮ್ಮನನ್ನು ಕಾಯುವವನು ನಾನೋ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನು ಎಲ್ಲಿ?” ಎಂದು ಕೇಳಲು ಅವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ನಿನ್ನ ತಮ್ಮನೆಲ್ಲಿ?" ಎಂದು ಸರ್ವೇಶ್ವರ ಕೇಳಿದಾಗ “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ” ಎಂದು ಕಾಯಿನನು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ತರುವಾಯ ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನೆಲ್ಲಿ?” ಎಂದು ಕೇಳಿದನು. ಅದಕ್ಕೆ ಕಾಯಿನನು, “ನನಗೆ ಗೊತ್ತಿಲ್ಲ. ನನ್ನ ತಮ್ಮನನ್ನು ಕಾಯುವುದಾಗಲಿ ನೋಡಿಕೊಳ್ಳುವುದಾಗಲಿ ನನ್ನ ಕೆಲಸವೇ?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರು ಕಾಯಿನನನ್ನು, “ನಿನ್ನ ತಮ್ಮ ಹೇಬೆಲನು ಎಲ್ಲಿ?” ಎಂದು ಕೇಳಲು, ಅವನು, “ನಾನರಿಯೆ. ನಾನು ನನ್ನ ತಮ್ಮನನ್ನು ಕಾಯುವವನೋ?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:9
11 ತಿಳಿವುಗಳ ಹೋಲಿಕೆ  

ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವದು.


ಸೈತಾನನು ನಿಮ್ಮ ತಂದೆ; ನೀವು ಆ ತಂದೆಯಿಂದ ಹುಟ್ಟಿದವರಾಗಿದ್ದು ನಿಮ್ಮ ತಂದೆಯ ದುರಿಚ್ಫೆಗಳನ್ನೇ ನಡಿಸಬೇಕೆಂದಿದ್ದೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ; ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸುಳ್ಳಾಡುವಾಗ ಸ್ವಭಾವಾನುಸಾರವಾಗಿ ಆಡುತ್ತಾನೆ; ಅವನು ಸುಳ್ಳುಗಾರನೂ ಸುಳ್ಳಿಗೆ ಮೂಲಪುರುಷನೂ ಆಗಿದ್ದಾನೆ.


ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಂಡನು.


ಆ ನಿಲುವಂಗಿಯನ್ನು ತಮ್ಮ ತಂದೆಗೆ ಕಳುಹಿಸಿದರು; ತಂದವರು - ಇದು ನಮಗೆ ಸಿಕ್ಕಿತು; ಇದು ನಿನ್ನ ಮಗನ ಅಂಗಿ ಹೌದೋ ಅಲ್ಲವೋ ನೋಡು ಎಂದು ಅವನಿಗೆ ಹೇಳಲು


ಅದಕ್ಕೆ ಯೆಹೋವನು - ನೀನು ಏನು ಮಾಡಿದಿ? ನಿನ್ನ ತಮ್ಮನ ರಕ್ತವು ಭೂವಿುಯ ಕಡೆಯಿಂದ ನನ್ನನ್ನು ಕೂಗುತ್ತದೆ, ಕೇಳು.


ಯೆಹೂದನು ತನ್ನ ಅಣ್ಣತಮ್ಮಂದಿರಿಗೆ - ನಾವು ನಮ್ಮ ತಮ್ಮನನ್ನು ಕೊಂದು ಆ ಕೊಲೆಯನ್ನು ಮರೆಮಾಡಿದರೆ ಪ್ರಯೋಜನವೇನು?


ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು