Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:12 - ಕನ್ನಡ ಸತ್ಯವೇದವು J.V. (BSI)

12 ಅದಕ್ಕೆ ಯೋಸೇಫನು - ಆ ಕನಸಿನ ಅರ್ಥವೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಕ್ಕೆ ಯೋಸೇಫನು, “ಆ ಕನಸಿನ ಅರ್ಥವೇನೆಂದರೆ, ಆ ಮೂರು ದ್ರಾಕ್ಷಾಲತೆಯ ಕೊಂಬೆಗಳೇ ಮೂರು ದಿನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕೆ ಜೋಸೆಫನು, “ಆ ಕನಸಿನ ಅರ್ಥ ಇದು: ಆ ಮೂರು ಕೊಂಬೆಗಳು ಮೂರು ದಿನಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅದಕ್ಕೆ ಯೋಸೇಫನು, “ನಾನು ಕನಸಿನ ಅರ್ಥವನ್ನು ನಿನಗೆ ತಿಳಿಸುವೆನು. ಆ ಮೂರು ಕವಲುಗಳು ಎಂದರೆ ಮೂರು ದಿನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದಕ್ಕೆ ಯೋಸೇಫನು, “ಅದರ ಅರ್ಥ ಏನೆಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:12
13 ತಿಳಿವುಗಳ ಹೋಲಿಕೆ  

ಅವನ ಜೊತೆಗಾರನು - ಇದು ಇಸ್ರಾಯೇಲ್ಯನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ವಿುದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿದನು ಅಂದನು.


ಅಲ್ಲಿ ನಮ್ಮ ಸಂಗಡ ಇಬ್ರಿಯನಾದ ಒಬ್ಬ ಪ್ರಾಯಸ್ಥನಿದ್ದನು; ಅವನು ದಳವಾಯಿಯ ದಾಸನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ಅವುಗಳ ಅರ್ಥವನ್ನು ನಮಗೆ ಹೇಳಿದನು; ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.


ಅದಕ್ಕೆ ಯೋಸೇಫನು - ನಿನ್ನ ಕನಸಿನ ಅರ್ಥವೇನಂದರೆ - ಆ ಮೂರು ಪುಟ್ಟಿಗಳೇ ಮೂರು ದಿನಗಳು;


ಹಾಗರ್ ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತ. ಅವಳು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆ ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.


ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು; ಹೇಗಂದರೆ ಅವರ ಹಿಂದೆ ಹೋಗುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು; ಆ ಬಂಡೆ ಕ್ರಿಸ್ತನೇ.


ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು ಶಿಷ್ಯರಿಗೆ ಕೊಟ್ಟು - ತಕ್ಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ ಅಂದನು.


ಫರೋಹನ ಪಾನಪಾತ್ರೆಯು ನನ್ನ ಕೈಯಲ್ಲಿದ್ದದರಿಂದ ನಾನು ಆ ಗೊಂಚಲುಗಳನ್ನು ಕೊಯಿದು ಪಾತ್ರೆಯಲ್ಲಿ ಹಿಂಡಿ ಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸಿದೆನು ಎಂದು ಹೇಳಿದನು.


ಆ ಮೂರು ಕೊಂಬೆಗಳೇ ಮೂರು ದಿನಗಳು; ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ ನಿನ್ನ ಉದ್ಯೋಗಕ್ಕೆ ತಿರಿಗಿ ನೇವಿುಸುವನು. ನೀನು ಮುಂಚೆ ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ.


ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವದರಿಂದ ನೀನು ಶಕ್ತನೇ ಸರಿ.


ದೇವರು ತಾನು ಮಾಡಬೇಕೆಂದಿರುವದನ್ನು ತಮಗೆ ತಿಳಿಸಿದ್ದಾನೆಂಬದಾಗಿ ನಾನು ಅರಿಕೆ ಮಾಡಿದೆನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು