ಆದಿಕಾಂಡ 40:13 - ಕನ್ನಡ ಸತ್ಯವೇದವು J.V. (BSI)13 ಆ ಮೂರು ಕೊಂಬೆಗಳೇ ಮೂರು ದಿನಗಳು; ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ ನಿನ್ನ ಉದ್ಯೋಗಕ್ಕೆ ತಿರಿಗಿ ನೇವಿುಸುವನು. ನೀನು ಮುಂಚೆ ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಈ ಹೊತ್ತಿಗೆ ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ, ನಿನ್ನ ಉದ್ಯೋಗಕ್ಕೆ ಪುನಃ ನಿನ್ನನ್ನು ನೇಮಿಸುವನು. ನೀನು ಮೊದಲು ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇನ್ನು ಮೂರು ದಿನಗಳೊಳಗೆ ನೀನು ತಲೆಯೆತ್ತುವಂತೆ ಫರೋಹನು ಮಾಡುವನು; ನಿನ್ನನ್ನು ಮರಳಿ ನೌಕರಿಗೆ ಸೇರಿಸಿಕೊಳ್ಳುವನು; ನೀನು ಮುಂದಿನಂತೆಯೇ ಫರೋಹನಿಗೆ ಪಾನಸೇವಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಮೂರುದಿನಗಳೊಳಗಾಗಿ ಫರೋಹನು ನಿನ್ನನ್ನು ಕ್ಷಮಿಸಿ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುವನು. ನೀನು ಮೊದಲಿನಂತೆ ಅವನಿಗೆ ಪಾನದಾಯಕನಾಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಗೌರವಿಸಿ, ತಿರುಗಿ ನಿನ್ನ ಕೆಲಸದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವೆ. ಅಧ್ಯಾಯವನ್ನು ನೋಡಿ |